ETV Bharat / bharat

ಜೆ.ಪಿ.ನಡ್ಡಾ, ಬಿ.ಎಲ್‌.ಸಂತೋಷ್‌ ಭೇಟಿಯಾದ ಸುಮಲತಾ: ಬಿಜೆಪಿ ಟಿಕೆಟ್‌ ಬಗ್ಗೆ ಚರ್ಚೆ? - ಬಿಜೆಪಿ ಟಿಕೆಟ್‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ದೆಹಲಿಯಲ್ಲಿಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಭೇಟಿ ಮಾಡಿದ್ದಾರೆ.

mp-sumalatha-meets-j-p-nadda
ಜೆ.ಪಿ.ನಡ್ಡಾ, ಬಿ.ಎಲ್‌.ಸಂತೋಷ್‌ ಭೇಟಿಯಾದ ಮಂಡ್ಯ ಸಂಸದೆ ಸುಮಲತಾ
author img

By PTI

Published : Feb 8, 2024, 10:57 PM IST

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ದೆಹಲಿಯಲ್ಲಿ ಗುರುವಾರ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಖುದ್ದು ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ಬಿ.ಎಲ್‌.ಸಂತೋಷ್‌ ಅವರನ್ನು ಅನೌಪಚಾರಿಕವಾಗಿ ಭೇಟಿ ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಲಾಯಿತು. ತಮ್ಮ ಅಮೂಲ್ಯ ಸಮಯವನ್ನು ನೀಡಿ, ನನ್ನ ಮಾತುಗಳನ್ನು ಆಲಿಸಿದ ನಡ್ಡಾಜಿ ಮತ್ತು ಸಂತೋಷ್‌ಜಿ ಅವರಿಗೂ ಧನ್ಯವಾದಗಳು. ತಮ್ಮ ಸಹಕಾರದ ಮಾತುಗಳಿಗೆ ಮತ್ತೊಮ್ಮೆ ಧನ್ಯವಾದಗಳು'' ಎಂದು ಸಂಸದೆ ತಮ್ಮ 'ಎಕ್ಸ್​' ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಬಿಜೆಪಿ ಟಿಕೆಟ್‌ ಬಗ್ಗೆ ಚರ್ಚೆ?: 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಸುಮಲತಾ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಕೆಲ ತಿಂಗಳ ಹಿಂದೆ ಇವರು ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಅಲ್ಲದೇ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್‌ಗಾಗಿ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ, ಟಿಕೆಟ್​ ನೀಡದಿದ್ದರೆ ತಮ್ಮ ಮುಂದಿನ ನಡೆ ಬಗ್ಗೆ ನಿರ್ಧರಿಸಲಾಗುವುದು ಎಂಬುದಾಗಿ ಅವರ ಆಪ್ತ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಇತ್ತೀಚೆಗೆ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸುಮಲತಾ ಹೇಳಿದ್ದರು. ಮುಂಬರುವ ಲೋಕಸಭೆ ಚುನಾವಣೆಗೆ ಎರಡು ತಿಂಗಳು ಬಾಕಿ ಇದೆ. ಈಗಾಗಲೇ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಸ್ಪರ್ಧೆಗೆ ಅಣಿಯಾಗಿವೆ. ಜೆಡಿಎಸ್ ಭದ್ರಕೋಟೆ ಎಂದೇ ಮಂಡ್ಯ ಕ್ಷೇತ್ರವನ್ನು ಪರಿಗಣಿಸಲಾಗಿದೆ. ಇದರಿಂದಾಗಿ ಕ್ಷೇತ್ರದ ಟಿಕೆಟ್​ ಬಗ್ಗೆ ಕುತೂಹಲವಿದೆ.

ಆದರೆ, 2018ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಏಳು ಸ್ಥಾನಗಳನ್ನು ಜೆಡಿಎಸ್ ಗೆದ್ದಿತ್ತು. 2023ರ ಚುನಾವಣೆಯಲ್ಲಿ ಜೆಡಿಎಸ್​ ಆರು ಸ್ಥಾನಗಳನ್ನು ಕಳೆದುಕೊಂಡು ತೀವ್ರ ಹಿನ್ನಡೆ ಅನುಭವಿಸಿದೆ. ಇಷ್ಟಾದರೂ ತನ್ನ ಭದ್ರಕೋಟೆಯನ್ನು ಬಿಟ್ಟುಕೊಡಲು ಮುಂದಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷೇತರ ಶಾಸಕ ಸೇರಿ ಮಂಡ್ಯದ ಆರು ಕ್ಷೇತ್ರಗಳಲ್ಲಿ ತನ್ನ ಪ್ರಾಬಲ್ಯ ಹೊಂದಿದೆ. ಜೆಡಿಎಸ್​ ಜೊತೆ ಬಿಜೆಪಿ ಮೈತ್ರಿಯಿಂದಾಗಿ ಸುಮಲತಾ ನಡೆ ಏನು ಎಂಬುವುದು ಸಹ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​​ನತ್ತ ಮಾಜಿ ಸಚಿವ ನಾರಾಯಣಗೌಡ?: ಸಚಿವ ಚಲುವರಾಯಸ್ವಾಮಿ ಹೇಳಿದ್ದೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.