ETV Bharat / bharat

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರ ಸಾವು - ಮುಜಾಫರ್‌ನಗರ

ಮುಜಾಫರ್‌ನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ಕಾರ್ಖಾನೆಯಲ್ಲಿ ಪಟಾಕಿ ಸ್ಫೋಟಗೊಂಡು ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರ ಸಾವು
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರ ಸಾವು
author img

By ETV Bharat Karnataka Team

Published : Jan 22, 2024, 9:08 PM IST

Updated : Jan 22, 2024, 9:52 PM IST

ಮುಜಾಫರ್‌ನಗರ( ಉತ್ತರಪ್ರದೇಶ): ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟಾಕಿ ಕಾರ್ಖಾನೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಕಾರ್ಖಾನೆಯ ನಿರ್ವಾಹಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲವಾಡ ಗ್ರಾಮದ ಮನೆಯೊಂದರಲ್ಲಿ ಪಟಾಕಿ ಕಾರ್ಖಾನೆ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕೆಲ್ವಾರ ನಿವಾಸಿಗಳಾದ ದೀಪಾಂಶು ಮತ್ತು ಪಾರಸ್​, ಬಹದ್ದೂರ್‌ಪುರ ಗ್ರಾಮದ ಬಿಟ್ಟು​ ಸೇರಿದಂತೆ ಹಲವರು ಇಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಗ್ಗೆ ಮನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದರಿಂದ ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಅಪಘಾತದಲ್ಲಿ ಕೆಲ್ವಾರ ನಿವಾಸಿಗಳಾದ ಪಾರಸ್ ಮತ್ತು ದೀಪಾಂಶು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಿಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಫೋಟವು ಎಷ್ಟು ಶಕ್ತಿಯುತವಾಗಿತ್ತು ಎಂದರೆ ಕಿಲೋಮೀಟರ್​​ಗಳ ದೂರದವರೆಗೆ ಸ್ಫೋಟದ ಸದ್ದು ಕೇಳಿಸಿದೆ. ಸ್ಫೋಟವು ಇಡೀ ಗ್ರಾಮದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿತ್ತು. ಸ್ಫೋಟದ ಶಬ್ದ ಕೇಳಿ ಕೆಲವೇ ಸಮಯದಲ್ಲಿ ಸಾವಿರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಘಟನೆಯ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಯುಪಿ ಸಹಾಯವಾಣಿ 112 ಡಯಲ್‌ ಮಾಡಿ ಸ್ಥಳೀಯರು ಮಾಹಿತಿ ನೀಡಿದ್ದರು. ಇದಾದ ನಂತರ ಪೊಲೀಸ್ ಪಡೆ, ಅಗ್ನಿಶಾಮಕ ದಳ ಸಿಒ ಖತೌಲಿ ಮತ್ತು ಎಸ್ಪಿ ಸಿಟಿ ಸತ್ಯನಾರಾಯಣ್ ಘಟನಾ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಕೈಗೊಂಡಿದ್ದರು. ಅಗ್ನಿಶಾಮಕ ದಳದವರು ಬೆಂಕಿ ನಿಯಂತ್ರಿಸಲು ಹರಸಾಹಸಪಡಬೇಕಾಯಿತು .

ಸಿಒ ಖತೌಲಿ ಪ್ರಕಾರ, ಬಿಟ್ಟುಗೆ ಶೇ 40ರಷ್ಟು ಸುಟ್ಟ ಗಾಯಗಳಾಗಿವೆ. ಈ ವೇಳೆ, ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಭೂಮಾಲೀಕ ಶಾದಾಬ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಪೊಲೀಸ್​ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಕಾರಣದವರನ್ನು ಪತ್ತೆ ಹಚ್ಚಿ ಶಿಕ್ಷೆ ನೀಡುವುದಾಗಿ ಇದೇ ವೇಳೆ ಎಸ್​ಪಿ ಭರವಸೆ ನೀಡಿದ್ದಾರೆ.

ಇತ್ತೀಚೆಗೆ ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟಗಳು ಹೆಚ್ಚುತ್ತಿವೆ. ಕಳೆದ ದೀಪಾವಳಿ ಸಮಯದಲ್ಲಿ ಕರ್ನಾಟಕದಲ್ಲಿ ಇಂತಹದ್ದೇ ಹಲವು ಪ್ರಕರಣಗಳು ವರದಿಯಾಗಿದ್ದವು. ಬೆಂಗಳೂರು ಹೊರ ವಲಯದಲ್ಲಿ ಆದ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ, ಹಾವೇರಿಯಲ್ಲಿ ನಾಲ್ವರು ಸಜೀವ ದಹನಗೊಂಡಿದ್ದರು. ತಮಿಳುನಾಡಿನಲ್ಲೂ 15ಕ್ಕೂ ಹೆಚ್ಚು ಮಂದಿ ಪಟಾಕಿ ಕಾರ್ಖಾನೆಗಳಲ್ಲಿ ಆದ ಸ್ಫೋಟಕ್ಕೆ ಬಲಿಯಾಗಿದ್ದರು.

ಇದನ್ನು ಓದಿ: ಬಿಲ್ಕಿಸ್ ಬಾನೊ ಪ್ರಕರಣ: 11 ಅಪರಾಧಿಗಳ ಶರಣಾಗತಿ, ಮತ್ತೆ ಜೈಲುವಾಸ

Last Updated : Jan 22, 2024, 9:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.