ETV Bharat / bharat

ಕೇಂದ್ರದಲ್ಲಿ ಬಿಜೆಪಿ ಬೆಂಬಲಿಸಲ್ಲ, ಪ್ರಬಲ ಪ್ರತಿಪಕ್ಷವಾಗಿ ಕೆಲಸ: ಬಿಜೆಡಿ ನಿರ್ಣಯ - BJD To Work As Strong Opposition

ಕೇಂದ್ರದಲ್ಲಿ ಬಿಜೆಪಿ ಜೊತೆಗೆ ಬಾಹ್ಯವಾಗಿ ಗುರುತಿಸಿಕೊಂಡಿದ್ದ ಬಿಜೆಡಿ ಈ ಬಾರಿ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡಲು ನಿರ್ಧರಿಸಿದೆ.

ಬಿಜು ಜನತಾದಳ
ನವೀನ್​ ಪಟ್ನಾಯಕ್ (ETV Bharat)
author img

By PTI

Published : Jun 24, 2024, 4:23 PM IST

ಭುವನೇಶ್ವರ್(ಒಡಿಶಾ): ಮಾಜಿ ಸಿಎಂ ನವೀನ್​ ಪಟ್ನಾಯಕ್​ ನೇತೃತ್ವದ ಬಿಜು ಜನತಾದಳ ಪಕ್ಷ(ಬಿಜೆಡಿ) ಕೇಂದ್ರದಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಾ ಬಂದಿತ್ತು. ಆದರೆ, ಈ ಬಾರಿ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡಲು ನಿರ್ಧರಿಸಿದೆ. ಇಂದಿನಿಂದ ಆರಂಭವಾಗಿರುವ ಸಂಸತ್​ ಕಲಾಪದಲ್ಲಿ ಒಡಿಶಾದ ಅಭಿವೃದ್ಧಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ನಿರ್ಣಯ ಕೈಗೊಂಡಿದೆ.

ಪಕ್ಷದ 9 ರಾಜ್ಯಸಭಾ ಸದಸ್ಯರೊಂದಿಗೆ ನವೀನ್​ ಪಟ್ನಾಯಕ್​ ಸೋಮವಾರ ಸಭೆ ನಡೆಸಿದ್ದು, ಅಧಿವೇಶನದಲ್ಲಿ ಸಂಸತ್ತಿನ ಮೇಲ್ಮನೆಯಲ್ಲಿ ಬಿಜೆಪಿಗೆ ಬೆಂಬಲವಾಗಿರದೇ, ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡಬೇಕು. ರಾಜ್ಯದ ಹಿತಾಸಕ್ತಿಗಳಿಗೆ ಸಂಬಂಧಿಸಿದ ವಿಷಯಗಳನ್ನು ಸದನದ ಮುಂದೆ ಸೂಕ್ತವಾಗಿ ಪ್ರಸ್ತಾಪಿಸಬೇಕು ಎಂದು ಕೋರಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭೆಯಲ್ಲಿ ಪಕ್ಷದ ನಾಯಕ ಸಸ್ಮಿತ್ ಪಾತ್ರಾ, "ಬಿಜೆಡಿ ಸಂಸದರು ಈ ಬಾರಿ ಸಮಸ್ಯೆಗಳ ಬಗ್ಗೆ ಮಾತನಾಡುವುದಲ್ಲದೇ, ಸರ್ಕಾರದ ವಿರುದ್ಧ ಪ್ರತಿಭಟನೆ ಕೂಡ ನಡೆಸಲಿದ್ದಾರೆ. ಒಡಿಶಾಗೆ ವಿಶೇಷ ಸ್ಥಾನಮಾನ ಬೇಡಿಕೆ, ಕಳಪೆ ಮೊಬೈಲ್ ಸಂಪರ್ಕ, ಬ್ಯಾಂಕ್ ಶಾಖೆಗಳ ವಿಸ್ತರಣೆ ಸೇರಿದಂತೆ ಹಲವು ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಲಿದೆ" ಎಂದು ತಿಳಿಸಿದರು.

"ಕಲ್ಲಿದ್ದಲು ರಾಯಧನವನ್ನು ಪರಿಷ್ಕರಿಸಬೇಕು ಎಂಬ ಒಡಿಶಾದ ಬೇಡಿಕೆಯನ್ನು ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ನಿರ್ಲಕ್ಷಿಸಿದೆ. ಇದರಿಂದ ರಾಜ್ಯದ ಜನರು ತಮ್ಮ ಹಕ್ಕಿನಿಂದ ವಂಚಿತರಾಗಿದ್ದಾರೆ. ಇದು ಜನರಿಗೆ ಹೆಚ್ಚಿನ ನಷ್ಟ ಉಂಟು ಮಾಡುತ್ತಿದೆ. ಈ ಬಗ್ಗೆಯೂ ಸದನದಲ್ಲಿ ಧ್ವನಿ ಎತ್ತಲಾಗುವುದು" ಎಂದು ಅವರು ಹೇಳಿದರು.

"ರಾಜ್ಯಸಭೆಯಲ್ಲಿ ಒಂಬತ್ತು ಸದಸ್ಯ ಬಲ ಹೊಂದಿರುವ ಬಿಜೆಡಿ ಈ ಬಾರಿ ಆಡಳಿತ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ. ಪ್ರಬಲ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲು ಪಕ್ಷದ ಮುಖ್ಯಸ್ಥ ನವೀನ್​ ಪಟ್ನಾಯಕ್​ ಅವರು ಸೂಚಿಸಿದ್ದಾರೆ. ಹೀಗಾಗಿ ಬಿಜೆಪಿಗೆ ಇನ್ನು ಮುಂದೆ ನಮ್ಮ ಬೆಂಬಲ ಇರುವುದಿಲ್ಲ" ಎಂದು ಅವರು ಸ್ಪಷ್ಟಪಡಿಸಿದರು.

ಲೋಕಸಭೆಯಲ್ಲಿ ಬಿಜೆಡಿಗಿಲ್ಲ ಸ್ಥಾನ: ಈಚೆಗೆ ಮುಗಿದ ಲೋಕಸಭೆ ಚುನಾವಣೆಯಲ್ಲಿ ಬಿಜು ಜನತಾದಳ ಹೀನಾಯ ಸೋಲು ಕಂಡಿದೆ. 1997ರಲ್ಲಿ ಪಕ್ಷ ಸ್ಥಾಪನೆಯಾದ ಬಳಿಕ ಇದೇ ಮೊದಲ ಬಾರಿಗೆ ಒಂದೇ ಒಂದೂ ಲೋಕಸಭೆ ಸೀಟು ಗೆಲ್ಲಲು ವಿಫಲವಾಗಿದೆ. ಸದ್ಯ ಸಂಸತ್ತಿನಲ್ಲಿ ಪಕ್ಷ 9 ಮಂದಿ ರಾಜ್ಯಸಭೆ ಸದಸ್ಯರನ್ನು ಮಾತ್ರ ಹೊಂದಿದೆ.

ಇತ್ತ, ರಾಜ್ಯದಲ್ಲೂ ಅಧಿಕಾರ ಕಳೆದುಕೊಂಡಿದೆ. 24 ವರ್ಷಗಳ ಸುದೀರ್ಘ ಆಡಳಿತ ನಡೆಸಿದ್ದ ಬಿಜೆಡಿ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಎದುರು ಸೋಲು ಕಂಡಿತು. ಬಿಜೆಪಿ ಕಳೆದ ಕೆಲವು ವರ್ಷಗಳಿಂದ ವಿವಿಧ ವಿಷಯಗಳ ಕುರಿತು ಸಂಸತ್ತಿನಲ್ಲಿ ಬಿಜೆಪಿಯನ್ನು ಬೆಂಬಲಿಸಿತ್ತು. ಜೊತೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ 2019 ಮತ್ತು 2024ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಲೂ ನೆರವು ನೀಡಿತ್ತು.

ಇದನ್ನೂ ಓದಿ: 18ನೇ ಲೋಕಸಭೆ ಅಧಿವೇಶನ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಸೋಮಣ್ಣ! - 18th Lok Sabha Session

ETV Bharat Logo

Copyright © 2024 Ushodaya Enterprises Pvt. Ltd., All Rights Reserved.