ETV Bharat / bharat

ಪ್ರಜ್ವಲ್ ರೇವಣ್ಣ ಜರ್ಮನಿಗೆ ಹೋಗಿದ್ದೇಗೆ?, ಕೇಂದ್ರ ಸರ್ಕಾರ ಅನುಮತಿ ನೀಡಿತ್ತಾ?: ವಿದೇಶಾಂಗ ಸಚಿವಾಲಯದ ಸ್ಪಷ್ಟನೆ ಹೀಗಿದೆ - Prajwal Revanna

ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಜೆಡಿಎಸ್‌ ಪಕ್ಷದಿಂದ ಅಮಾನತಾಗಿರುವ ಸಂಸದ ಪ್ರಜ್ವಲ್​ ರೇವಣ್ಣ ಜರ್ಮನಿಗೆ ತೆರಳಿದ್ದಾರೆ ಎಂದು ಹೇಳಲಾಗಿದ್ದು, ಇದಕ್ಕಾಗಿ ಅವರು ವಿದೇಶಾಂಗ ಸಚಿವಾಲಯದಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸಂಸದ ಪ್ರಜ್ವಲ್​ ರೇವಣ್ಣ
ಸಂಸದ ಪ್ರಜ್ವಲ್​ ರೇವಣ್ಣ (ಸಂಸದ ಪ್ರಜ್ವಲ್​ ರೇವಣ್ಣ)
author img

By PTI

Published : May 2, 2024, 7:58 PM IST

ನವದೆಹಲಿ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್​ ರೇವಣ್ಣ ವಿದೇಶ ಪ್ರವಾಸಕ್ಕಾಗಿ ಯಾವುದೇ ರಾಜಕೀಯ ಅನುಮತಿ ಕೋರಿಲ್ಲ ಮತ್ತು ನಾವು ಅನುಮತಿ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ಆರೋಪ ಹೊತ್ತಿರುವ ಪ್ರಜ್ವಲ್​ ರೇವಣ್ಣ ಜರ್ಮನಿಗೆ ತೆರಳಲು ಕೇಂದ್ರ ಸರ್ಕಾರ ನೆರವಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದೆ.

ರಾಜತಾಂತ್ರಿಕ ಪಾಸ್​​ಪೋರ್ಟ್​ ಇದ್ದರೆ ವೀಸಾ ಬೇಕಿಲ್ಲ: ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವವರಿಗೆ ಜರ್ಮನಿಗೆ ಪ್ರಯಾಣಿಸಲು ಯಾವುದೇ ವೀಸಾ ಅಗತ್ಯವಿಲ್ಲ. ಅಲ್ಲಿಗೆ ತೆರಳಲು ಅವರು ಇಲಾಖೆಯಿಂದ ಯಾವುದೇ ರಾಜಕೀಯ ಅನುಮತಿಯನ್ನೂ ಕೋರಿಲ್ಲ ಎಂದು ಹೇಳಿದರು.

ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್​ ನಿರ್ದೇಶನ ಬೇಕು: ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಸಚಿವಾಲಯ ಪ್ರಜ್ವಲ್​ ಪಾಸ್‌ಪೋರ್ಟ್ ರದ್ದು ಮಾಡಲು ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿದ ವಕ್ತಾರರು, ಯಾವುದೇ ವ್ಯಕ್ತಿಯ ಪಾಸ್‌ಪೋರ್ಟ್‌ ರದ್ದು ಮಾಡಲು ನಿಯಮಗಳಿವೆ. ಪಾಸ್‌ಪೋರ್ಟ್ ಕಾಯಿದೆ-1967ರ ಪ್ರಕಾರ, ಕೋರ್ಟ್​ ನಿರ್ದೇಶನದ ಮೇರೆಗೆ ಮಾತ್ರ ವೀಸಾ ತಡೆ ಹಿಡಿಯಬಹುದು. ಅಂತಹ ಯಾವುದೇ ಆದೇಶ ಈವರೆಗೂ ಬಂದಿಲ್ಲ ಎಂದರು.

ಹಾಸನ ಪೆನ್​ಡ್ರೈವ್ ಅಶ್ಲೀಲ ವಿಡಿಯೋ​ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ದಳ (ಎಸ್​ಐಟಿ) ರಚಿಸಿದೆ. ತನಿಖೆ ಆರಂಭಿಸಿರುವ ಅಧಿಕಾರಿಗಳು ಪ್ರಜ್ವಲ್​ ಮತ್ತು ಅವರ ತಂದೆ ಹೆಚ್​.ಡಿ.ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್​ ಜಾರಿ ಮಾಡಲಾಗಿದೆ. ಪ್ರಜ್ವಲ್​ ಅವರು ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ಕೋರಿದ್ದಾರೆ.

ಇತ್ತ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶದಲ್ಲಿರುವ ಆರೋಪಿಯನ್ನು ಕರೆದುಕೊಂಡು ಬರಲು ನೆರವು ನೀಡಬೇಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೋರಿದ್ದಾರೆ.

ಇದನ್ನೂ ಓದಿ: ಹೆಚ್​.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಎಸ್​ಐಟಿಗೆ ಕೋರ್ಟ್ ನೋಟಿಸ್​ - HASSAN PEN DRIVE CASE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.