ಮಲಪ್ಪುರಂ (ಕೇರಳ): ಮಲಪ್ಪುರಂನ ಅರೀಕೋಡ್ ಬಳಿಯ ಫುಟ್ಬಾಲ್ ಮೈದಾನದಲ್ಲಿ ಸೋಮವಾರ ಪಟಾಕಿ ಸಿಡಿಸಿದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಅರೀಕೋಡು ಪೊಲೀಸರ ಪ್ರಕಾರ, "ಫುಟ್ಬಾಲ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಲಾಗಿದೆ. ಈ ವೇಳೆ ಸಿಡಿದ ಪಟಾಕಿ ಮೈದಾನ ತುಂಬಾ ಹರಡಿದ್ದರಿಂದ ಪಂದ್ಯ ವೀಕ್ಷಿಸಲು ಬಂದಿದ್ದ ಸಾರ್ವಜನಿಕರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಗಂಭೀರ ಗಾಯಗಳು ವರದಿಯಾಗಿಲ್ಲ" ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮದುವೆ ಮುಗಿಸಿ ಮರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಸಾವು