ETV Bharat / bharat

ಜಮ್ಮು ಕಾಶ್ಮೀರ: ವರ್ಷಾಂತ್ಯಕ್ಕೆ ಪಂಚಾಯತ್​​, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ? - Jammu Kashmir Local Body Election

ಜಮ್ಮು ಕಾಶ್ಮೀರದಲ್ಲಿ ಮುಂದಿನ ಹಂತದ ಚಟುವಟಿಕೆಗಳನ್ನು ಗಮನದಲ್ಲಿರಿಸಿಕೊಂಡು ಭದ್ರತಾ ಪಡೆಗಳನ್ನು ಮರು ನಿಯೋಜಿಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

author img

By ETV Bharat Karnataka Team

Published : 2 hours ago

Panchayat urban body elections likely in J and K before year end
ಸಾಂದರ್ಭಿಕ ಚಿತ್ರ (IANS)

ಶ್ರೀನಗರ: ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಯಶಸ್ವಿಯಾಗಿ ಮೂರು ಹಂತದ ವಿಧಾನಸಭೆ ಚುನಾವಣೆ ನಡೆದಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಚುನಾವಣೆಗೆ ಕಣಿವೆ ನಾಡು ಸಿದ್ದವಾಗಿದೆ. ಈ ವರ್ಷದೊಳಗೆ ಪಂಚಾಯತ್​ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಾಗಲೇ ಸಿದ್ದತೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆ ಸರಾಗ ಮತ್ತು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಸದ್ಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಇದನ್ನು ಮುಂದಿನ ಪಂಚಾಯತ್​ ಮತ್ತು ನಗರಾಡಳಿತ ಚುನಾವಣೆ ಮುಗಿಯುವವರೆಗೂ ಮುಂದುವರೆಸುವ ಉದ್ದೇಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಶ್ರೀನಗರದ ನಗರ ಆಡಳಿತದ ಅಧಿಕಾರ ಕಳೆದ ನವೆಂಬರ್​ನಲ್ಲಿಯೇ ಮುಗಿದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದೆ ಎಂಬ ಸುಳಿವು ನೀಡಿದ್ದಾರೆ. ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಈ ಚುನಾವಣೆಯನ್ನು ಆದ್ಯತೆಯ ಮೇಲೆ ಮುಗಿಸುವ ಜವಾಬ್ದಾರಿ ಕೂಡ ಸರ್ಕಾರ ಮೇಲಿದೆ.

ಈ ಮೊದಲು ಅಮರನಾಥ ಯಾತ್ರೆ, ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಾಗಿ ಭದ್ರತಾ ಪಡೆಯನ್ನು ಕಣಿವೆ ರಾಜ್ಯದಲ್ಲಿ ನಿಯೋಜಿಸಲಾಗಿತ್ತು.

2018ರಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆದಿದ್ದವು. ಈ ಚುನಾವಣೆಗಳ ಐದು ವರ್ಷದ ಅವಧಿ ಈಗಾಗಲೇ ಮುಗಿದಿದ್ದು, ಈ ಹಿಂದೆ ಲೋಕಸಭಾ ಚುನಾವಣೆ ಬಳಿಕ ಪಂಚಾಯತ್​ ಚುನಾವಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಜಮ್ಮು ಕಾಶ್ಮೀರದಲ್ಲಿ ನಡೆಯುವ ಪಂಚಾಯತಿ ಚುನಾವಣೆಯನ್ನು ಭಾರತೀಯ ಚುನಾವಣಾ ಆಯೋಗದ ಬದಲಾಗಿ ಜಮ್ಮು ಮತ್ತು ಕಾಶ್ಮೀರ ಚುನಾವಣಾ ಆಯೋಗ ನಡೆಸಲಿದೆ.(ಐಎಎನ್​ಎಸ್​)

ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ: ಶುಕ್ರವಾರಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.