ETV Bharat / bharat

ಒಡಿಶಾದಲ್ಲಿ ಬಿಜೆಡಿ ಹೀನಾಯ ಸೋಲು: ಮಾಜಿ ಐಎಎಸ್​ ಅಧಿಕಾರಿ ಪಾಂಡಿಯನ್ ಸಕ್ರಿಯ ರಾಜಕೀಯಕ್ಕೆ ವಿದಾಯ - VK Pandian

ಒಡಿಶಾದ ಬಿಜೆಡಿ ಪಕ್ಷದ ನಾಯಕ, ಮಾಜಿ ಐಎಎಸ್​ ಅಧಿಕಾರಿ ವಿ.ಕೆ. ಪಾಂಡಿಯನ್ ಸಕ್ರಿಯ ರಾಜಕೀಯಕ್ಕೆ ವಿದಾಯ ಘೋಷಣೆ ಮಾಡಿದ್ದಾರೆ.

ವಿ.ಕೆ.ಪಾಂಡಿಯನ್
VK Pandian (ETV Bharat)
author img

By ETV Bharat Karnataka Team

Published : Jun 9, 2024, 5:11 PM IST

ಭುವನೇಶ್ವರ (ಒಡಿಶಾ): ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜು ಜನತಾ ದಳ (ಬಿಜೆಡಿ) ಪಕ್ಷವು ಹೀನಾಯ ಸೋಲು ಕಂಡ ಬೆನ್ನಲ್ಲೇ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ವಿ.ಕೆ. ಪಾಂಡಿಯನ್ ಸಕ್ರಿಯ ರಾಜಕೀಯಕ್ಕೆ ಭಾನುವಾರ ವಿದಾಯ ಘೋಷಣೆ ಮಾಡಿದ್ದಾರೆ.

ಐಎಎಸ್​ ಅಧಿಕಾರಿಯಾಗಿದ್ದ ಪಾಂಡಿಯನ್ ಕೆಲ ವರ್ಷಗಳ ಹಿಂದೆಯಷ್ಟೇ ಬಿಜೆಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ದೊಡ್ಡ ಮುಖಭಂಗ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಪಾಂಡಿಯನ್​, ''ಈಗ ನಾನು ಪ್ರಜ್ಞಾಪೂರ್ವಕವಾಗಿ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಈ ಪ್ರಯಾಣದಲ್ಲಿ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ. ನನ್ನ ವಿರುದ್ಧದ ಅಪಪ್ರಚಾರದ ನಿರೂಪಣೆಯು ಬಿಜು ಜನತಾ ದಳದ ಸೋಲಿಗೆ ಪಾತ್ರವಾಗಿದ್ದರೆ ಕ್ಷಮಿಸಿ. ಇದಕ್ಕಾಗಿ ಎಲ್ಲ ಕಾರ್ಯಕರ್ತರು ಸೇರಿದಂತೆ ಇಡೀ ಬಿಜು ಪರಿವಾರಕ್ಕೆ ನಾನು ಕ್ಷಮೆಯಾಚಿಸುತ್ತೇನೆ'' ಎಂದು ತಿಳಿಸಿದ್ದಾರೆ.

ಅಲ್ಲದೇ, ''ಪಟ್ನಾಯಕ್‌ ಅವರಿಗೆ ನೆರವಾಗಲು ಮಾತ್ರ ರಾಜಕೀಯಕ್ಕೆ ಸೇರುವುದು ನನ್ನ ಏಕೈಕ ಉದ್ದೇಶವಾಗಿತ್ತು. ಅದಕ್ಕಾಗಿಯೇ ನಾನು ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ. ನಾನು ಒಡಿಶಾವನ್ನು ಯಾವಾಗಲೂ ನನ್ನ ಹೃದಯದಲ್ಲಿ ಮತ್ತು ನನ್ನ ಗುರು ನವೀನ್ ಬಾಬು ಅವರನ್ನು ನನ್ನ ಉಸಿರಿನಲ್ಲಿ ಇಟ್ಟುಕೊಳ್ಳುತ್ತೇನೆ'' ಎಂದೂ ಪಾಂಡಿಯನ್ ಹೇಳಿಕೊಂಡಿದ್ದಾರೆ.

ಒಡಿಶಾದ 147 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಡಿಯ 24 ವರ್ಷಗಳ ಆಡಳಿತವನ್ನು ಕೊನೆಗೊಳಿಸಿ ಅಧಿಕಾರಕ್ಕೆ ಬಂದಿದೆ. ಮತ್ತೊಂದೆಡೆ, ಪಟ್ನಾಯಕ್ ನೇತೃತ್ವದ ಬಿಜೆಡಿ ಪಕ್ಷವು 51 ಸ್ಥಾನಗಳಿಗೆ ಸೀಮಿತವಾಗಿದೆ. ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದಿದ್ದರೆ, ಸಿಪಿಐ (ಎಂ) ಒಂದು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಬಿಜೆಡಿ ರಾಜ್ಯದಲ್ಲಿ ಒಂದೇ ಒಂದು ಲೋಕಸಭಾ ಸ್ಥಾನವನ್ನೂ ಗೆಲ್ಲುವಲ್ಲಿ ವಿಫಲವಾಗಿದೆ. 21 ಕ್ಷೇತ್ರಗಳ ಪೈಕಿ ಬಿಜೆಪಿ 20 ಮತ್ತು ಕಾಂಗ್ರೆಸ್ ಒಂದು ಸ್ಥಾನ ಗಳಿಸಿದೆ.

ಇದನ್ನೂ ಓದಿ: ರಾಯ್​ ಬರೇಲಿ ಅಥವಾ ವಯನಾಡು​; ಎರಡರಲ್ಲಿ ಯಾವುದು? ಕುತೂಹಲ ಮೂಡಿಸಿದೆ ರಾಹುಲ್​ ಗಾಂಧಿ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.