ETV Bharat / bharat

ಅಕ್ರಮ ಒಳನುಸುಳುವಿಕೆ ನಿಂತರೆ ಮಾತ್ರ ಪಶ್ಚಿಮ ಬಂಗಾಳದಲ್ಲಿ ಶಾಂತಿ: ಗೃಹ ಸಚಿವ ಅಮಿತ್ ಶಾ

ಅಕ್ರಮ ಒಳನುಸುಳುವಿಕೆ ನಿಂತರೆ ಮಾತ್ರ ಪಶ್ಚಿಮ ಬಂಗಾಳದಲ್ಲಿ ಶಾಂತಿ ಸ್ಥಾಪನೆ ಸಾಧ್ಯ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾ
ಅಮಿತ್ ಶಾ (IANS)
author img

By ETV Bharat Karnataka Team

Published : 3 hours ago

ಕೋಲ್ಕತಾ: ವಿದೇಶಿಗರ ಅಕ್ರಮ ಒಳನುಸುಳುವಿಕೆ ನಿಂತಾಗಲೇ ಪಶ್ಚಿಮ ಬಂಗಾಳದಲ್ಲಿ ಶಾಂತಿಯ ಮರುಸ್ಥಾಪನೆ ಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

"2026 ರಲ್ಲಿ ನೀವು ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯನ್ನು ತಂದರೆ ಬಿಜೆಪಿ ರಾಜ್ಯದಲ್ಲಿ ಅಕ್ರಮ ಒಳನುಸುಳುವಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಲಿದೆ" ಎಂದು ಕೇಂದ್ರ ಗೃಹ ಸಚಿವರು ಉತ್ತರ 24 ಪರಗನ್ ಜಿಲ್ಲೆಯ ಪೆಟ್ರಾಪೋಲ್​ನಲ್ಲಿ ಲ್ಯಾಂಡ್ ಪೋರ್ಟ್​ನ ಹೊಸ ಪ್ರಯಾಣಿಕರ ಟರ್ಮಿನಲ್ ಕಟ್ಟಡ ಮತ್ತು ಮೈತ್ರಿ ದ್ವಾರವನ್ನು ಉದ್ಘಾಟಿಸಿ ಹೇಳಿದರು.

ಭ್ರಷ್ಟಾಚಾರದ ವಿಷಯದಲ್ಲಿ ತೃಣಮೂಲ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಚ್ಎಂ ಶಾ ತೀವ್ರ ವಾಗ್ದಾಳಿ ನಡೆಸಿದರು.

"ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಮಮತಾ ಬ್ಯಾನರ್ಜಿ ಏನು ಮಾಡಿದ್ದಾರೆ? ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ, ಪಶ್ಚಿಮ ಬಂಗಾಳಕ್ಕೆ 7.74 ಲಕ್ಷ ಕೋಟಿ ರೂ.ಗಳಷ್ಟು ಕೇಂದ್ರದ ನಿಧಿಯನ್ನು ನೀಡಲಾಗಿದೆ. ಇದು ಹಿಂದಿನ ಯುಪಿಎ ಆಡಳಿತಾವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿರುವುದಕ್ಕಿಂತ ಹೆಚ್ಚಾಗಿದೆ. ಆದರೆ ದುರದೃಷ್ಟವಶಾತ್, ಪಶ್ಚಿಮ ಬಂಗಾಳದಲ್ಲಿ ಕೇಂದ್ರದ ನಿಧಿಯ ಬಳಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ" ಎಂದು ಕೇಂದ್ರ ಗೃಹ ಸಚಿವರು ಹೇಳಿದರು.

"ಎಂಜಿಎನ್ಆರ್​ಇಜಿಎ ಮತ್ತು ಪಿಎಂಎವೈನಂತಹ ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಒದಗಿಸಲಾದ ಹಣವು ನಿಜವಾದ ಫಲಾನುಭವಿಗಳನ್ನು ತಲುಪುತ್ತಿಲ್ಲ. ತೃಣಮೂಲ ಕಾಂಗ್ರೆಸ್​ಗೆ ಸಂಬಂಧಿಸಿದವರಿಗೆ ಮಾತ್ರ ಆ ನಿಧಿಯಿಂದ ಲಾಭವಾಗಿದೆ" ಎಂದು ಅವರು ಹೇಳಿದರು.

"ಗಡಿಯಾಚೆಯಿಂದ ಕಳ್ಳಸಾಗಣೆಯನ್ನು ತಡೆಗಟ್ಟುವಲ್ಲಿ ಭೂ ಬಂದರುಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ದೇಶದಲ್ಲಿ ವೈದ್ಯಕೀಯ ಮತ್ತು ಶೈಕ್ಷಣಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಭೂ-ಬಂದರುಗಳು ಪ್ರಮುಖ ಪಾತ್ರವಹಿಸುತ್ತವೆ. ಈ ಉಪಕ್ರಮವು ಭಾರತವನ್ನು ಅಭಿವೃದ್ಧಿ ಮತ್ತು ಪ್ರಗತಿಯ ಪಥದತ್ತ ಕೊಂಡೊಯ್ಯುತ್ತದೆ" ಎಂದು ಸಚಿವರು ಹೇಳಿದರು.

ಸಚಿವ ಶಾ ಕೋಲ್ಕತ್ತಾದ ಉತ್ತರ ಹೊರವಲಯದಲ್ಲಿರುವ ಸಾಲ್ಟ್ ಲೇಕ್ ಸಭಾಂಗಣದಲ್ಲಿ ನಡೆಯುವ ಪಕ್ಷದ ಸಾಂಸ್ಥಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್​ನಲ್ಲಿ ಭೀಕರ ಅತ್ಯಾಚಾರ ಮತ್ತು ಕೊಲೆಗೆ ಬಲಿಯಾದ ಆರ್.ಜಿ. ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಹಿಳಾ ವೈದ್ಯೆಯ ಪೋಷಕರನ್ನು ಕೇಂದ್ರ ಗೃಹ ಸಚಿವರು ಭೇಟಿಯಾಗಬಹುದು ಎಂದು ರಾಜ್ಯದ ರಾಜಕೀಯ ವಲಯದಲ್ಲಿ ಮಾತುಗಳು ಕೇಳಿ ಬಂದಿದ್ದರೂ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ : 'ನಿಲ್ಲಿ, ಯೋಚಿಸಿ, ಮುಂದುವರಿಯಿರಿ': ಡಿಜಿಟಲ್‌ ಅರೆಸ್ಟ್​ ತಡೆಗೆ ಪ್ರಧಾನಿ ಮೋದಿ 3 ಸೂತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.