ETV Bharat / bharat

ಪಿಓಕೆ ಜನತೆ ಮುಂದೊಂದು ದಿನ ತಾವಾಗಿಯೇ ಭಾರತಕ್ಕೆ ಸೇರಲಿದ್ದಾರೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ - PoK issue

ಪಾಕಿಸ್ತಾನ ಆಕ್ರಮಿತ-ಕಾಶ್ಮೀರದ ಜನತೆ ಮುಂದೊಂದು ದಿನ ತಾವಾಗಿಯೇ ಭಾರತದೊಂದಿಗೆ ವಿಲೀನವಾಗಲು ಬಯಸುತ್ತಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

Defence Minister Rajnath Singh
Defence Minister Rajnath Singh ((image : IANS))
author img

By PTI

Published : May 5, 2024, 3:11 PM IST

ನವದೆಹಲಿ: ಪಾಕಿಸ್ತಾನ ಆಕ್ರಮಿತ-ಕಾಶ್ಮೀರ (ಪಿಒಕೆ) ಮೇಲಿನ ತನ್ನ ಹಕ್ಕನ್ನು ಭಾರತ ಎಂದಿಗೂ ಬಿಟ್ಟುಕೊಡುವುದಿಲ್ಲ, ಕಾಶ್ಮೀರದ ಅಭಿವೃದ್ಧಿಯನ್ನು ನೋಡಿದ ನಂತರ ಅಲ್ಲಿನ ಜನರು ಸ್ವತಃ ಭಾರತದ ಭಾಗವಾಗಲು ಬಯಸುವುದರಿಂದ ಅದನ್ನು ಬಲವಂತದಿಂದ ವಶಪಡಿಸಿಕೊಳ್ಳುವ ಅಗತ್ಯವೂ ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿಂಗ್, ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಮತ್ತು ಕೇಂದ್ರಾಡಳಿತ ಪ್ರದೇಶವಾಗಿರುವ ಅಲ್ಲಿ ಎಎಫ್ಎಸ್​ಪಿಎ (ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ) ಕಾಯ್ದೆ ಜಾರಿಯಲ್ಲಿರುವ ಅಗತ್ಯವಿಲ್ಲದ ಸಮಯ ಬರಲಿದೆ ಎಂದು ಸಿಂಗ್ ಪ್ರತಿಪಾದಿಸಿದರು.

ಆದಾಗ್ಯೂ, ಈ ವಿಷಯವು ಕೇಂದ್ರ ಗೃಹ ಸಚಿವಾಲಯದ ವ್ಯಾಪ್ತಿಯಲ್ಲಿದೆ ಮತ್ತು ಅದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಖಂಡಿತವಾಗಿಯೂ ಚುನಾವಣೆಗಳು ನಡೆಯಲಿವೆ, ಆದರೆ ಯಾವಾಗ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಪರೋಕ್ಷ ಯುದ್ಧವನ್ನು ಉಲ್ಲೇಖಿಸಿದ ರಕ್ಷಣಾ ಸಚಿವರು, ಇಸ್ಲಾಮಾಬಾದ್ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಪಾಕಿಸ್ತಾನವು ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ, ಆದರೆ ನಾವು ಹಾಗಾಗಲು ಬಿಡುವುದಿಲ್ಲ ಎಂದು ಹೇಳಿದರು.

ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ 2019 ರ ಫೆಬ್ರವರಿಯಲ್ಲಿ ಭಾರತದ ಯುದ್ಧ ವಿಮಾನಗಳು ಪಾಕಿಸ್ತಾನದ ಬಾಲಾಕೋಟ್​ನಲ್ಲಿರುವ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ತರಬೇತಿ ಶಿಬಿರದ ಮೇಲೆ ದಾಳಿ ನಡೆಸಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ತೀವ್ರ ಹದಗೆಟ್ಟಿವೆ.

ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಅಧಿಕಾರಗಳನ್ನು ಹಿಂತೆಗೆದುಕೊಳ್ಳುವುದಾಗಿ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದಾಗಿ ಭಾರತ ಸರ್ಕಾರ ಘೋಷಿಸಿದ ನಂತರ ಸಂಬಂಧಗಳು ಮತ್ತಷ್ಟು ಹದಗೆಟ್ಟಿವೆ. ಪಾಕಿಸ್ತಾನದೊಂದಿಗೆ ಒಳ್ಳೆಯ ಸಂಬಂಧ ಹೊಂದಲು ಬಯಸುವುದಾಗಿ ಭಾರತ ಹೇಳುತ್ತಲೇ ಬಂದಿದೆ. ಆದರೆ ಅಂಥ ಮಾತುಕತೆಗಳು ನಡೆಯಬೇಕಾದರೆ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣವನ್ನು ಸೃಷ್ಟಿಸುವ ಜವಾಬ್ದಾರಿ ಇಸ್ಲಾಮಾಬಾದ್ ಮೇಲಿದೆ ಎಂದು ಭಾರತ ಒತ್ತಿಹೇಳಿದೆ.

ಎಎಫ್ಎಸ್​ಪಿಎ ಭದ್ರತಾ ಪಡೆಗಳಿಗೆ ಕಾರ್ಯಾಚರಣೆ ನಡೆಸುವ ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸುವ ಅಧಿಕಾರ ನೀಡುತ್ತದೆ. ಯಾರನ್ನಾದರೂ ಗುಂಡಿಕ್ಕಿ ಕೊಂದರೆ ಆ ಅಪರಾಧಿಂದ ಈ ಕಾಯ್ದೆಯು ಯೋಧರಿಗೆ ರಕ್ಷಣೆ ನೀಡುತ್ತದೆ.

ಇದನ್ನೂ ಓದಿ : 140 ಕೋಟಿ ಜನರ ಮನಸ್ಸಿನಲ್ಲಿ ನಂಬಿಕೆ, ವಿಶ್ವಾಸ ಮರುಸ್ಥಾಪಿಸಿರುವುದು ನಮ್ಮ ಸಾಧನೆ: ಪ್ರಧಾನಿ ಮೋದಿ - PM Modi Interview

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.