ETV Bharat / bharat

ಹರಿಯಾಣದಲ್ಲಿ ಸದ್ದು ಮಾಡಿದ ಮುಡಾ ಪ್ರಕರಣ: ಕಾಂಗ್ರೆಸ್​ ವಿರುದ್ಧ ಪಿಎಂ ಮೋದಿ ವಾಗ್ದಾಳಿ - PM MODI ATTACK ON SIDDARAMAIAH

ಮುಡಾ ಹಗರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಅಗತ್ಯ ಇದೆ ಎಂದು ಹೇಳಿರುವ ಹೈಕೋರ್ಟ್ ತೀರ್ಪಿನ ಬಗ್ಗೆ ಉಲ್ಲೇಖಿಸಿ, ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

pm-modi-accuses-congress-of-being-entreched-in-corruption
pm-modi-accuses-congress-of-being-entreched-in-corruption (ANI)
author img

By ANI

Published : Sep 25, 2024, 9:18 PM IST

ಸೋನಿಪತ್ (ಹರಿಯಾಣ): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ. ಅಷ್ಟೇ ಅಲ್ಲ ಇಂದು ಜನಪ್ರತಿನಿಧಿಗಳ ಕೋರ್ಟ್​ ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದೆ ಎಂಬ ವಿಚಾರದ ಬಗ್ಗೆ ಪ್ರಧಾನಿ ಮೋದಿ ಮಾತನಾಡಿ ಗಮನ ಸೆಳೆದಿದ್ದಾರೆ. ಕಾಂಗ್ರೆಸ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಹರಿಯಾಣ ವಿಧಾನಸಭೆ ಚುನಾವಣೆಯ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಹರಿಯಾಣದ ಸೋನಿಪತ್‌ನಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ಎತ್ತಿ ತೋರಿಸಿದರಲ್ಲದೇ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಗಮನ ಸೆಳೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್​​​​​​​ ಆಡಳಿತಕ್ಕೆ ಬಂದು ಒಂದೂವರೆ ವರ್ಷಗಳಷ್ಟೇ ಕಳೆದಿದೆ. ಅಷ್ಟರಲ್ಲೇ ಅಲ್ಲಿನ ಮುಖ್ಯಮಂತ್ರಿ ಭೂ ಹಗರಣದ ಆರೋಪ ಎದುರಿಸುತ್ತಿದ್ದಾರೆ. ರಾಜ್ಯಪಾಲರು ನೀಡಿದ್ದ ಪ್ರಾಸಿಕೂಷನ್​ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​​​​​ ವಜಾ ಮಾಡಿದೆ. ಪ್ರಕರಣದಲ್ಲಿ ಸೂಕ್ತ ತನಿಖೆ ಅಗತ್ಯ ಎಂದು ನ್ಯಾಯಾಲಯ ಹೇಳಿದೆ ಎಂದು ಮೋದಿ ದೇಶದ ಜನರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಷ್ಟೇ ಅಲ್ಲ ಕರ್ನಾಟಕ ಸರ್ಕಾರ ದಲಿತರಿಗೆ ಮೀಸಲಾದ ಹಣವನ್ನು ನುಂಗಿ ನೀರು ಕುಡಿದಿದೆ. ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷರು ದಲಿತ ಸಮಾಜದಿಂದ ಬಂದವರು, ಇಷ್ಟಿದ್ದರೂ ದಲಿತರ ಹಣದಲ್ಲಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ಪಿಎಂ ಮೋದಿ ಆರೋಪಿಸಿದ್ದಾರೆ.

ಕಾಂಗ್ರೆಸ್​ ವಿರುದ್ಧ ಮೋದಿ ಟೀಕಾಪ್ರಹಾರ: ಹತ್ತು ವರ್ಷಗಳ ಹಿಂದೆ ಇಲ್ಲಿ ಕಾಂಗ್ರೆಸ್ ಸರಕಾರವಿದ್ದಾಗ ರೈತರ ಭೂಮಿಯನ್ನು ಲೂಟಿ ಮಾಡಿತ್ತು. ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಹರಿಯಾಣವನ್ನು ದಲಾಲರಿಗೆ ಹಸ್ತಾಂತರಿಸಿತ್ತು ಎಂದು ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ಎಸ್‌ಸಿ - ಎಸ್‌ಟಿ ಮತ್ತು ಒಬಿಸಿಗಳನ್ನು ದೂರ ಇಟ್ಟಿದೆ. ಕಾಂಗ್ರೆಸ್ ಸರ್ಕಾರದಿಂದ ದೂರವಿದ್ದಾಗಲೆಲ್ಲ ಬಡವರು, ಎಸ್‌ಸಿ, ಎಸ್‌ಟಿ ಒಬಿಸಿಗಳ ಹಕ್ಕುಗಳ ಬಗ್ಗೆ ಮಾತನಾಡುತ್ತದೆ. ಆದರೆ ಅಧಿಕಾರಕ್ಕೆ ಬರುತ್ತಿದ್ದಂತೆ ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ಗಿಂತ ದೊಡ್ಡ ಭ್ರಷ್ಟ ಪಕ್ಷ ಇನ್ನೊಂದಿಲ್ಲ. ಕಾಂಗ್ರೆಸ್‌ಗೆ ಅವಕಾಶ ಸಿಕ್ಕಿದಲ್ಲೆಲ್ಲಾ, ಕಾಲಿಟ್ಟಲ್ಲೆಲ್ಲಾ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಖಚಿತ ಎಂಬುದು ನಿಮಗೂ ಗೊತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು. ಬಿಜೆಪಿ ಆಡಳಿತ ಅವಧಿಯಲ್ಲಿ ಹರಿಯಾಣದಲ್ಲಿ ಕೃಷಿ ಸುಧಾರಣೆಗಳ ಬಗ್ಗೆ ಬೆಳಕು ಚೆಲ್ಲಿದೆ. ಪಕ್ಷ ರೈತರನ್ನು ಮೇಲಕ್ಕೆತ್ತಲು ಕೆಲಸ ಮಾಡಿದೆ ಎಂದು ತಮ್ಮ ಸರ್ಕಾರವನ್ನು ಸಮರ್ಥಿಸಿಕೊಂಡರು.

ಇವುಗಳನ್ನು ಓದಿ:"ಬಿಜೆಪಿಯ ಇಂದಿನ ರಾಜಕಾರಣ ನೀವು ಒಪ್ಪುತ್ತೀರಾ?": ಆರ್​ಎಸ್​ಎಸ್​​ಗೆ ಪತ್ರ ಬರೆದ ಅರವಿಂದ್​ ಕೇಜ್ರಿವಾಲ್​ - KEJRIWAL WRITE LETTER TO RSS

ನ್ಯಾಯಯುತ, ನಿಷ್ಪಕ್ಷಪಾತ ತನಿಖೆಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿಜಯೇಂದ್ರ ಆಗ್ರಹ - MUDA Scam

ಕಾಂಗ್ರೆಸ್‌ ಹೈಕಮಾಂಡ್‌, ರಾಜ್ಯದ ಎಲ್ಲ ಶಾಸಕರು ಸಿಎಂ ಬೆನ್ನಿಗೆ ಇದ್ದೇವೆ: ಸಚಿವರ ಬೆಂಬಲ - MUDA Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.