ನವದೆಹಲಿ: ಅಯೋಧ್ಯೆಯ ಭವ್ಯ ರಾಮಮಂದಿರ ಉದ್ಘಾಟನೆ ಜೊತೆ ರಾಮಲಲ್ಲಾ ಪ್ರತಿಷ್ಠಾಪನೆ ಮುಗಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ಯೋಜನೆಯೊಂದನ್ನು ಘೋಷಣೆ ಮಾಡಿದೆ. 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಎಂಬ ಹೊಸ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೌರಫಲಕಗಳನ್ನು ಅಳವಡಿಸುವ ಗುರಿಯನ್ನು ಸರ್ಕಾರ ಹೊಂದಿದೆ.
-
सूर्यवंशी भगवान श्री राम के आलोक से विश्व के सभी भक्तगण सदैव ऊर्जा प्राप्त करते हैं।
— Narendra Modi (@narendramodi) January 22, 2024 " class="align-text-top noRightClick twitterSection" data="
आज अयोध्या में प्राण-प्रतिष्ठा के शुभ अवसर पर मेरा ये संकल्प और प्रशस्त हुआ कि भारतवासियों के घर की छत पर उनका अपना सोलर रूफ टॉप सिस्टम हो।
अयोध्या से लौटने के बाद मैंने पहला निर्णय लिया है कि… pic.twitter.com/GAzFYP1bjV
">सूर्यवंशी भगवान श्री राम के आलोक से विश्व के सभी भक्तगण सदैव ऊर्जा प्राप्त करते हैं।
— Narendra Modi (@narendramodi) January 22, 2024
आज अयोध्या में प्राण-प्रतिष्ठा के शुभ अवसर पर मेरा ये संकल्प और प्रशस्त हुआ कि भारतवासियों के घर की छत पर उनका अपना सोलर रूफ टॉप सिस्टम हो।
अयोध्या से लौटने के बाद मैंने पहला निर्णय लिया है कि… pic.twitter.com/GAzFYP1bjVसूर्यवंशी भगवान श्री राम के आलोक से विश्व के सभी भक्तगण सदैव ऊर्जा प्राप्त करते हैं।
— Narendra Modi (@narendramodi) January 22, 2024
आज अयोध्या में प्राण-प्रतिष्ठा के शुभ अवसर पर मेरा ये संकल्प और प्रशस्त हुआ कि भारतवासियों के घर की छत पर उनका अपना सोलर रूफ टॉप सिस्टम हो।
अयोध्या से लौटने के बाद मैंने पहला निर्णय लिया है कि… pic.twitter.com/GAzFYP1bjV
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ, "ಜಗತ್ತಿನ ಎಲ್ಲಾ ಭಕ್ತರು ಸೂರ್ಯನ ವಂಶಸ್ಥ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯಲ್ಲಿ ಪ್ರಾಣ-ಪ್ರತಿಷ್ಠೆಯ ಶುಭ ಸಂದರ್ಭದಲ್ಲಿ, ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ. ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅಳವಡಿಸುವ ಗುರಿಯೊಂದಿಗೆ "ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ" ಅನ್ನು ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಅಯೋಧ್ಯಾ ರಾಮ ಮಂದಿರ ನಿರ್ಮಿಸಿದ ಕಾರ್ಮಿಕರ ಮೇಲೆ ಪ್ರಧಾನಿ ಮೋದಿ ಪುಷ್ಪವೃಷ್ಟಿ