ETV Bharat / bharat

ಮೇ 13 ರಂದು ವಾರಾಣಸಿಯಲ್ಲಿ ರೋಡ್‌ ಶೋ; ಮೇ 14ರಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ - PM Modi Nomination - PM MODI NOMINATION

PM Modi Nomination: ಮೇ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಇದೆ. ಅದಕ್ಕೂ ಮುನ್ನ ಮೆಗಾ ರೋಡ್‌ಶೋ ನಡೆಸಲು ನಿರ್ಧರಿಸಲಾಗಿದೆ.

PM Modi Nomination
ಪ್ರಧಾನಿ ಮೋದಿ (Etv Bharat)
author img

By ETV Bharat Karnataka Team

Published : May 4, 2024, 2:14 PM IST

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 14 ರಂದು ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮನ್ನ ಮೇ 13 ರಂದು ಜಿಲ್ಲೆಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಅವರ ನಾಮಪತ್ರ ಸಲ್ಲಿಕೆ ದಿನವನ್ನು ಐತಿಹಾಸಿಕ ದಿನವನ್ನಾಗಿ ಮಾಡಲು ಬಿಜೆಪಿ ಬೃಹತ್​ ಯೋಜನೆ ಹಾಕಿಕೊಂಡಿದೆ.

PM Modi Nomination
ಪ್ರಧಾನಿ ಮೋದಿ (Etv Bharat)

ಅರ್ಧ ಡಜನ್‌ಗಿಂತಲೂ ಹೆಚ್ಚು ರಾಜ್ಯಗಳ ಮುಖ್ಯಮಂತ್ರಿಗಳು, ಹತ್ತಕ್ಕೂ ಹೆಚ್ಚು ಕೇಂದ್ರ ಸಚಿವರು ಮತ್ತು ಅಷ್ಟೇ ಸಂಖ್ಯೆಯ ಕ್ಯಾಬಿನೆಟ್ ಮಂತ್ರಿಗಳು ಮೋದಿ ಅವರ ರೋಡ್ ಶೋ ಮತ್ತು ನಾಮಪತ್ರ ಸಲ್ಲಿಕೆಯ ದಿನಕ್ಕೆ ಸಾಕ್ಷಿಯಾಗಲಿದ್ದಾರೆ. ಮೋದಿ ಅವರ ನಾಮಪತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಎನ್‌ಡಿಎ ಮೈತ್ರಿಕೂಟದ ರಾಷ್ಟ್ರೀಯ ನಾಯಕರು ಮತ್ತು ಮುಖ್ಯಮಂತ್ರಿಗಳ ಉಪಸ್ಥಿತಿಗೆ ಸಿದ್ಧತೆ ನಡೆಸಲಾಗಿದೆ. ಇವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೈಗಾರಿಕಾ ಸಚಿವ ಡಾ.ಮಹೇಂದ್ರ ನಾಥ್ ಪಾಂಡೆ, ಕೃಷಿ ಸಚಿವ ಅರ್ಜುನ್ ಮುಂಡಾ, ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಸೇರಿದಂತೆ ಅನೇಕ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.

PM Modi Nomination
ಪ್ರಧಾನಿ ಮೋದಿ (Etv Bharat)

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ. ರಾಜಸ್ಥಾನ ಸಿಎಂ ಭಜನಲಾಲ್ ಶರ್ಮಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ಉಪಸ್ಥಿತರಿರುವರು. ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಲೋಕ್​​​ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅವರಿಗೂ ನಾಮಪತ್ರ ಸಲ್ಲಿಸಲು ಬರುವಂತೆ ಆಹ್ವಾನ ನೀಡಲಾಗಿದೆ. ಮೇ 13ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಅನ್ನು ಅವಿಸ್ಮರಣೀಯವಾಗಿಸಲು ಬಿಜೆಪಿ ಭರದ ಸಿದ್ಧತೆ ಆರಂಭಿಸಿದೆ. ರೋಡ್ ಶೋನಲ್ಲಿ 5 ಲಕ್ಷಕ್ಕೂ ಹೆಚ್ಚು ಜನರನ್ನು ಒಟ್ಟುಗೂಡಿಸಲು ಸಿದ್ಧತೆ ನಡೆಸುತ್ತಿದೆ. 13 ರಂದು ವಾರಾಣಸಿಗೆ ಬರುವ ಪ್ರಧಾನಿ ಮೋದಿ, ಬನಾರಸ್ ಲೋಕೋಮೋಟಿವ್ ವರ್ಕ್‌ಶಾಪ್‌ನ ಅತಿಥಿ ಗೃಹದಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದ್ದು, ಇಲ್ಲಿಂದ ಹೊರಟು ಮರುದಿನ ಬೆಳಗ್ಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ನೇರವಾಗಿ ನಾಮಪತ್ರ ಸಲ್ಲಿಕೆಗೆ ತೆರಳಲಿದ್ದಾರೆ.

PM Modi Nomination
ಪ್ರಧಾನಿ ಮೋದಿ (Etv Bharat)

ಅಂದೇ ನಾಮಪತ್ರ ಸಲ್ಲಿಸಲು ಕಾರಣ ಏನು?: ಪ್ರಧಾನಿ ಮೋದಿ ಅವರು ಮೇ 14 ರಂದು ನಾಮಪತ್ರ ಸಲ್ಲಿಸಲು ಬಲವಾದ ಕಾರಣವೂ ಇದೆ. ಮೇ 14 ಅತ್ಯಂತ ಮಂಗಳಕರ ದಿನ. ಗಂಗಾ ಸಪ್ತಮಿ ಕೂಡ ಇದೆ. ಈ ದಿನವು ಗಂಗೆಯ ಅವತಾರ ದಿನದ ಪವಿತ್ರ ಹಬ್ಬ. ಪಂಡಿತ್ ಋಷಿ ದ್ವಿವೇದಿ ಅವರ ಜ್ಯೋತಿಷ್ಯದ ದೃಷ್ಟಿಯಿಂದ ಮೇ 14 ಬಹಳ ಒಳ್ಳೆಯ ದಿನ ಕೂಡ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಕೂಡ ಹೌದು. ಹಾಗಾಗಿ ಅಂದೇ ನಾಮಪತ್ರ ಸಲ್ಲಿಸಲು ಮೋದಿ ಸಿದ್ಧತೆ ನಡೆಸಿದ್ದಾರೆ. ಇದೇ ಕ್ಷೇತ್ರದಿಂದ ಹಾಸ್ಯನಟ ಶ್ಯಾಮ್ ರಂಗೀಲಾ, ಕಾಂಗ್ರೆಸ್‌ನ ಅಜಯ್ ರಾಯ್ ಮತ್ತು ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಅಥರ್ ಅಲಿ ಲಾರಿ ಕಣಕ್ಕಿಳಿದಿದ್ದು ಅವರ ವಿರುದ್ಧ ಮೋದಿ ಅವರು ಸ್ಪರ್ಧಿಸಲಿದ್ದಾರೆ. ಪ್ರಧಾನಿ ಮೋದಿ ವಾರಾಣಸಿ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದು 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಭರ್ಜರಿ ಜಯ ಸಾಧಿಸಿದ್ದರು.

PM Modi Nomination
ಪ್ರಧಾನಿ ಮೋದಿ (Etv Bharat)

ವಾರಾಣಸಿ ಲೋಕಸಭೆ ಚುನಾವಣೆ 2024ರ ಕೊನೆಯ ಮತ್ತು ಏಳನೇ ಹಂತದ ಚುನಾವಣೆಯಾಗಿದ್ದು ಜೂನ್ 1 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ. ಏಳನೇ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಮೇ 7 ರಿಂದ ಪ್ರಾರಂಭವಾಗಿ ಮೇ 14 ರಂದು ಕೊನೆಗೊಳ್ಳಲಿದೆ.

ಇದನ್ನೂ ಓದಿ: 'ಡರೋ ಮತ್, ಭಾಗೋ ಮತ್': ಅಮೇಠಿ ಬದಲು ರಾಯ್ ಬರೇಲಿಯಲ್ಲಿ ರಾಹುಲ್​ ಸ್ಪರ್ಧೆಗೆ ಮೋದಿ ಲೇವಡಿ - Narendra Modi Campaign

ETV Bharat Logo

Copyright © 2024 Ushodaya Enterprises Pvt. Ltd., All Rights Reserved.