ETV Bharat / bharat

ದೇಶಾದ್ಯಂತ ಬಿಸಿಗಾಳಿ ಅಬ್ಬರ: ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ, ಪರಿಸ್ಥಿತಿಯ ಸನ್ನದ್ಧತೆ ಪರಿಶೀಲನೆ ​​​​​​​​​​ - PM Modi chairs high level meeting - PM MODI CHAIRS HIGH LEVEL MEETING

ದೇಶಾದ್ಯಂತ ಹೆಚ್ಚುತ್ತಿರುವ ಬೇಸಿಗೆ ತಾಪಮಾನದ ಹಿನ್ನೆಲೆ ಬೇಸಿಗೆ ನಿಭಾಯಿಸುವ ಸಂಬಂಧ ಪ್ರಧಾನಿ ಗುರುವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

PM Modi chairs high-level meeting to review preparedness for heat wave conditions this summer
Etv Bದೇಶಾದ್ಯಂತ ಬಿಸಿಗಾಳಿ ಅಬ್ಬರ: ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ, ಪರಿಸ್ಥಿತಿಯ ಸನ್ನದ್ಧತೆ ಪರಿಶೀಲನೆ ​​​​​​​​​​harat
author img

By ETV Bharat Karnataka Team

Published : Apr 12, 2024, 8:18 AM IST

ನವದೆಹಲಿ: ದೇಶದಲ್ಲಿ ಬೇಸಿಗೆ ಇದ್ದು, ಸೂರ್ಯನ ಪ್ರಖರತೆ ಹೆಚ್ಚುತ್ತಿದೆ. ಹಲವು ರಾಜ್ಯಗಳು ಬಿಸಿಗಾಳಿಯ ಹೊಡೆತಕ್ಕೆ ಹೈರಾಣಾಗಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಬೇಸಿಗೆ ನಿಭಾಯಿಸಲು ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಇದೇ ವೇಳೆ, ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಏಪ್ರಿಲ್​ ಮಧ್ಯಭಾಗದಿಂದ ಜೂನ್​​ವರೆಗೆ ಬಿಸಿ ಹವಾಮಾನ ಇರಲಿದ್ದು, ಈ ಅವಧಿಯ ತಾಪಮಾನದ ಮುನ್ನೋಟದ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಅಧಿಕಾರಿಗಳು ವಿವರಣೆ ನೀಡಿದರು. ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನದ ಸಂಭವನೀಯತೆ ಇದೆ. ಮಧ್ಯ ಮತ್ತು ಪಶ್ಚಿಮ ಪರ್ಯಾಯ ಭಾರತದ ಮೇಲೆ ಬಿಸಿಗಾಳಿ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಪ್ರಧಾನಿಗಳ ಗಮನಕ್ಕೆ ತಂದರು. ಅಗತ್ಯ ಔಷಧಗಳು, ಇಂಟ್ರಾವೆನಸ್ ದ್ರವಗಳು, ಐಸ್ ಪ್ಯಾಕ್‌ಗಳು, ಒಆರ್‌ಎಸ್ ಮತ್ತು ಕುಡಿಯುವ ನೀರಿನ ಲಭ್ಯತೆ ಹಾಗೂ ಆರೋಗ್ಯ ವಲಯದಲ್ಲಿನ ಸನ್ನದ್ಧತೆಗಳ ಬಗ್ಗೆ ಮೋದಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ದೂರದರ್ಶನ, ರೇಡಿಯೋ ಮತ್ತು ಸಾಮಾಜಿಕ ಮಾಧ್ಯಮಗಳಂತಹ ಎಲ್ಲ ವೇದಿಕೆಗಳ ಮೂಲಕ ವಿಶೇಷವಾಗಿ ಪ್ರಾದೇಶಿಕ ಭಾಷೆಗಳಲ್ಲಿ ಅಗತ್ಯ IEC/ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತೆ ಸಲಹೆ ನೀಡಲಾಗಿದೆ. 2024 ರಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬೇಸಿಗೆಯನ್ನು ನಿರೀಕ್ಷಿಸಲಾಗಿದೆ. ಇನ್ನು ಈ ವರ್ಷ ಸಾರ್ವತ್ರಿಕ ಚುನಾವಣೆ ಕೂಡಾ ಇದೆ.

ಕೇಂದ್ರ ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ NDMA ಹೊರಡಿಸಿದ ಸಲಹೆಗಳನ್ನು ಪ್ರಾದೇಶಿಕ ಭಾಷೆಗಳಿಗೆ ಅನುವಾದಿಸಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಪ್ರಧಾನಿಗಳಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಪ್ರಧಾನಿಗಳು ಸರ್ಕಾರದ ಸಂಪೂರ್ಣ ಧೋರಣೆ ಏನು ಎಂಬುದನ್ನು ಅಧಿಕಾರಿಗಳಿಗೆ ಸ್ಪಷ್ಟಪಡಿಸಿದ್ದಾರೆ. ಕೇಂದ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರ್ಕಾರದ ಎಲ್ಲ ವಿಭಾಗಗಳು ಮತ್ತು ವಿವಿಧ ಸಚಿವಾಲಯಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು.

ಆಸ್ಪತ್ರೆಗಳಲ್ಲಿ ಸಾಕಷ್ಟು ಸಿದ್ಧತೆಯೊಂದಿಗೆ ಜಾಗೃತಿ ಮೂಡಿಸುವ ಬಗ್ಗೆಯೂ ಪ್ರಧಾನಮಂತ್ರಿಯವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಕಾಳ್ಗಿಚ್ಚುಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ಮತ್ತು ನಂದಿಸುವ ಅಗತ್ಯವನ್ನು ಸಭೆಯಲ್ಲಿ ಪ್ರಧಾನಿಗಳು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಸಭೆಯಲ್ಲಿ ಪ್ರಧಾನಿಗಳ ಪ್ರಧಾನ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನು ಓದಿ: ಲೋಕಸಭೆ ಚುನಾವಣೆ: ಮೊದಲ ಹಂತಕ್ಕೆ ಭರ್ಜರಿ ಮತಬೇಟೆ; 2ನೇ ಹಂತಕ್ಕೆ ಇಂದು ಅಧಿಸೂಚನೆ - Lok Sabha Election 2nd Phase

ETV Bharat Logo

Copyright © 2025 Ushodaya Enterprises Pvt. Ltd., All Rights Reserved.