ETV Bharat / bharat

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ತಿಮೋರ್ ಅತ್ಯುನ್ನತ ನಾಗರಿಕ ಗೌರವ: ಪ್ರಧಾನಿ ಮೋದಿ ಅಭಿನಂದನೆ - Timor Leste highest honour - TIMOR LESTE HIGHEST HONOUR

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಿಮೋರ್​ ಅತ್ಯುನ್ನತ ನಾಗರಿಕ ಗೌರವವಾದ 'ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ತಿಮೋರ್-ಲೆಸ್ಟ್' ನೀಡಿ ಗೌರವಿಸಲಾಯಿತು.

Prime Minister Narendra Modi  President Droupadi Murmu  Timor Leste highest honour
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಟಿಮೋರ್-ಲೆಸ್ಟೆಯ ಅತ್ಯುನ್ನತ ನಾಗರಿಕ ಗೌರವ (IANS)
author img

By PTI

Published : Aug 11, 2024, 1:18 PM IST

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಿಮೋರ್​ ದೇಶದ ಅತ್ಯುನ್ನತ ನಾಗರಿಕ ಗೌರವವಾದ 'ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ತಿಮೋರ್-ಲೆಸ್ಟ್' ನೀಡಿ ಗೌರವಿಸಲಾಯಿತು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸಾರ್ವಜನಿಕ ಸೇವೆಯಲ್ಲಿನ ಅವರ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

''ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ತಿಮೋರ್-ಲೆಸ್ಟ್​​ ಪ್ರಶಸ್ತಿ ನೀಡಿರುವುದು ದೇಶದ ಜನತೆಗೆ ಹೆಮ್ಮೆಯ ಕ್ಷಣವಾಗಿದೆ'' ಎಂದು ರಾಷ್ಟ್ರಪತಿಯವರನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಭಿನಂದಿಸಿದ್ದಾರೆ. ಇದು ಉಭಯ ದೇಶಗಳ ನಡುವಿನ ಬಲವಾದ ಸಂಬಂಧ ಮತ್ತು ಪರಸ್ಪರ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಮೋದಿ ಎಕ್ಸ್​ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಅನೇಕ ವರ್ಷಗಳಿಂದ ಸಾರ್ವಜನಿಕ ಜೀವನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೀಡಿದ ಕೊಡುಗೆಗಳನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ದ್ರೌಪದಿ ಮುರ್ಮು ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ನಮಗೆ ಹೆಮ್ಮೆಯ ಕ್ಷಣ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 'ಘಟನೆಯಲ್ಲಿ ಎಷ್ಟು ಮಕ್ಕಳು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ'; ಗದ್ಗದಿತರಾದ ಪ್ರಧಾನಿ - Modi visit disaster affected areas

ETV Bharat Logo

Copyright © 2025 Ushodaya Enterprises Pvt. Ltd., All Rights Reserved.