ನವದೆಹಲಿ: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ನಾಯಕರು ಶುಕ್ರವಾರ ಬೆಳಗ್ಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು. ಜೊತೆಗೆ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಗುರುವಾರ ರಾತ್ರಿ ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ರಾಜಕೀಯ ಕ್ಷೇತ್ರದ ಅನೇಕ ನಾಯಕರು ಸಂತಾಪ ಸೂಚಿಸಿದರು. ತೀವ್ರ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ರಾಷ್ಟ್ರದ ಪ್ರಗತಿಗೆ ಡಾ. ಸಿಂಗ್ ಅವರ ಅಪಾರ ಕೊಡುಗೆಯನ್ನು ಶ್ಲಾಘಿಸಿದರು.
"ಡಾ. ಮನಮೋಹನ್ ಸಿಂಗ್ ನಾಯಕರಾಗಿ ಅವರ ಸಮಗ್ರತೆ ಹಾಗೂ ದೃಷ್ಟಿಕೋನ ಭಾರತದ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ" ಎಂದು ಪ್ರಧಾನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂತಿಮ ನಮನ ಸಲ್ಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಡಾ. ಸಿಂಗ್ ಒಬ್ಬ ರಾಜನೀತಿಜ್ಞ ಮತ್ತು ಭಾರತದ ಆಧುನಿಕ ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಒಬ್ಬ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಎಂದು ಹೇಳಿದರು.
Paid tributes to Dr. Manmohan Singh Ji at his residence. India will forever remember his contribution to our nation. pic.twitter.com/nnNZjiSowN
— Narendra Modi (@narendramodi) December 27, 2024
ಉಳಿದಂತೆ ಕಾಂಗ್ರೆಸ್ ನಾಯಕರಾದ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಾ. ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಗೌರವ ಸಲ್ಲಿಸಿ, ಡಾ.ಸಿಂಗ್ ಅವರು ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಗೆ ತೋರಿಸಿದ ಬದ್ಧತೆಯನ್ನು ಒತ್ತಿ ಹೇಳಿದರು.
India mourns the loss of one of its most distinguished leaders, Dr. Manmohan Singh Ji. Rising from humble origins, he rose to become a respected economist. He served in various government positions as well, including as Finance Minister, leaving a strong imprint on our economic… pic.twitter.com/clW00Yv6oP
— Narendra Modi (@narendramodi) December 26, 2024
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶುಕ್ರವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆರ್‌ಎಸ್‌ಎಸ್ ಅಧಿಕೃತ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಮಾಜಿ ಪ್ರಧಾನಿ ಮತ್ತು ಹಿರಿಯ ನಾಯಕ ಡಾ. ಸರ್ದಾರ್ ಮನಮೋಹನ್ ಸಿಂಗ್ ಅವರ ನಿಧನದಿಂದ ಇಡೀ ರಾಷ್ಟ್ರಕ್ಕೆ ತೀವ್ರ ದುಃಖವಾಗಿದೆ. ಅವರ ಕುಟುಂಬಕ್ಕೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ವಿನಮ್ರ ಹಿನ್ನೆಲೆಯಿಂದ ಬೆಳೆದ ಸಿಂಗ್, ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದರು" ಎಂದು ಬರೆದಿದ್ದಾರೆ.
ಡಾ.ಮನಮೋಹನ್ ಸಿಂಗ್ ಅವರ ವೃತ್ತಿ ಪರಂಪರೆಯನ್ನು ಗೌರವಿಸುವ ಸಲುವಾಗಿ ಕೇಂದ್ರ ಸರ್ಕಾರ ಜನವರಿ 1ರವರೆಗೆ ಏಳು ದಿನಗಳು ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಈ ಏಳು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲು ಹಾಗೂ ಎಲ್ಲಾ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ.
Paid floral tributes to the former Prime Minister of India, Dr. Manmohan Singh Ji.
— Amit Shah (@AmitShah) December 27, 2024
A distinguished economist Manmohan Singh Ji, will always be remembered for his vast knowledge of finance and public policy. pic.twitter.com/eB1Ro1onrZ
ಅವರ ದಶಕಗಳ ಸೇವೆಗಾಗಿ ರಾಷ್ಟ್ರ ಸಲ್ಲಿಸುವ ಕೃತಜ್ಞತೆ ಹಾಗೂ ಗೌರವದ ಪ್ರತೀಕವಾಗಿ ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅವರ ಅಂತಿಮ ವಿಧಿಗಳು ನಡೆಯಲಿವೆ. 2004ರಿಂದ 2014ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರು 1990ರ ದಶಕದ ಆರಂಭದಲ್ಲಿ ಭಾರತದ ಆರ್ಥಿಕ ಉದಾರೀಕರಣದಲ್ಲಿ ಅವರ ಪ್ರಮುಖ ಪಾತ್ರಕ್ಕಾಗಿ ಗುರುತಿಸಿಕೊಳ್ಳುತ್ತಾರೆ.
ಇದನ್ನೂ ಓದಿ: ಆರ್ಥಿಕ ತಜ್ಞನ ರಾಜಕೀಯ ಹಾದಿ: 33 ವರ್ಷ ರಾಜ್ಯಸಭಾ ಸದಸ್ಯ, ಮೊದಲ ಲೋಕಸಭಾ ಚುನಾವಣೆಯಲ್ಲೇ ಸೋತಿದ್ದೇಕೆ?