ETV Bharat / bharat

ರಾತ್ರಿಯೇ ಶಿವಪುರ ಮಾರ್ಗ ಪರಿಶೀಲಿಸಿದ ಪ್ರಧಾನಿ ಮೋದಿ: ವಾರಾಣಸಿಯಲ್ಲಿ ಇಂದು ಹಲವು ಯೋಜನೆಗಳಿಗೆ ಚಾಲನೆ - ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ವಾರಾಣಸಿಯಲ್ಲಿದ್ದಾರೆ. ಅವರು ಇಂದು ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

PM Modi  in Varanasi
ವಾರಣಾಸಿಯಲ್ಲಿ ಪ್ರಧಾನಿ ಮೋದಿ
author img

By ETV Bharat Karnataka Team

Published : Feb 23, 2024, 7:13 AM IST

Updated : Feb 23, 2024, 7:38 AM IST

ವಾರಾಣಸಿ (ಉತ್ತರ ಪ್ರದೇಶ): ಗುಜರಾತ್‌ನಲ್ಲಿ ಕೆಲ ಕಾರ್ಯಗಳಿಗೆ ಚಾಲನೆ ನೀಡಿದ ನಂತರ ವಾರಾಣಸಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ಶಿವಪುರ - ಫುಲ್ವಾರಿಯಾ - ಲಹರ್ತರಾ ಮಾರ್ಗವನ್ನು ಪರಿಶೀಲಿಸಿದರು. ಇದಕ್ಕೂ ಮುನ್ನ ವಾರಾಣಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು.

ಬರೋಬ್ಬರಿ 360 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವಿಮಾನ ನಿಲ್ದಾಣದ ಕಡೆಗಿನ ಪ್ರಯಾಣದ ದೂರವನ್ನು 75 ನಿಮಿಷಗಳಿಂದ 45 ನಿಮಿಷಗಳಿಗೆ ಕಡಿಮೆ ಮಾಡಲು ಈ ಮಾರ್ಗ ಸಹಾಯ ಮಾಡುತ್ತದೆ.

ವಾರಾಣಸಿಯಲ್ಲಿ ಪೂರ್ವಾಂಚಲ್‌ ಉಡುಗೊರೆ ಭಾಗವಾಗಿ 1,3167.07 ಕೋಟಿ ರೂಪಾಯಿಯ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಇಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸ್ವತಂತ್ರ್ಯ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಬಳಿಕ ಸಂತ ಶಿರೋಮಣಿ ರವಿದಾಸ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ, ಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದಾದ ನಂತರ, ಕಾರ್ಖಿಯಾನ್ವ್ ಆಗ್ರೋ ಪಾರ್ಕ್‌ನಲ್ಲಿರುವ ಬನಾಸ್ ಕಾಶಿ ಸಂಕುಲ್ (ಅಮುಲ್ ಡೈರಿ)ಗೆ ಭೇಟಿ ನೀಡಲಿದ್ದಾರೆ. ಪಾರ್ಕ್ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 1,0972.00 ಕೋಟಿ ರೂ. ಮೌಲ್ಯದ 23 ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ 2,195.07 ಕೋಟಿ ರೂ. ಮೌಲ್ಯದ 12 ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಭಾಗವಹಿಸುವ ನಿರೀಕ್ಷೆ ಇದೆ.

ನಂತರ ಅವರು ಕಾಶಿ ಸಂಸದ್ ಛಾಯಾಗ್ರಹಣ ಸ್ಪರ್ಧೆಯ ಗ್ಯಾಲರಿಗೆ ಭೇಟಿ ನೀಡಲಿದ್ದಾರೆ. ಜೊತೆಗೆ, "ಸಂವರ್ತಿ ಕಾಶಿ" ವಿಷಯದ ಕುರಿತಾದ ಫೋಟೋಗಳ ಬಗ್ಗೆ ಸ್ಪರ್ಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮಗಳ ನಂತರ ಸುಮಾರು 11:45ಕ್ಕೆ ರಸ್ತೆಯ ಮೂಲಕ ಸಿರ್ಗೋವರ್ಧನ್ ತಲುಪಲಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದ ನಂತರವೂ ನಕಾರಾತ್ಮಕವಾಗಿ ಬದುಕುತ್ತಿದೆ: ಕಾಂಗ್ರೆಸ್​ಗೆ ಪ್ರಧಾನಿ ಮೋದಿ ಕುಟುಕು

ವಾರಾಣಸಿಯ ಪ್ರಸಿದ್ಧ ಜವಳಿ ಕ್ಷೇತ್ರಕ್ಕೆ ಉತ್ತೇಜನ ನೀಡೋ ನಿಟ್ಟಿನಲ್ಲಿ ಇಂದು ವಾರಾಣಸಿಯಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ (ಎನ್‌ಐಎಫ್‌ಟಿ)ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಹೊಸ ಸಂಸ್ಥೆಯು ಜವಳಿ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ತರಬೇತಿ ಮೂಲಸೌಕರ್ಯವನ್ನು ಬಲಪಡಿಸಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಸಿಎಂ, ಶಿವಸೇನೆ ಹಿರಿಯ ನಾಯಕ ಮನೋಹರ್ ಜೋಶಿ ನಿಧನ

ಆರೋಗ್ಯ ಮೂಲಸೌಕರ್ಯವನ್ನು ವಿಸ್ತರಿಸೋ ನಿಟ್ಟಿನಲ್ಲಿ ಪ್ರಧಾನಿಯವರು ವಾರಾಣಸಿಯಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಿಗ್ರಾ ಸ್ಪೋರ್ಟ್ಸ್ ಸ್ಟೇಡಿಯಂ ಮತ್ತು ಜಿಲ್ಲಾ ರೈಫಲ್ ಶೂಟಿಂಗ್ ರೇಂಜ್ ಉದ್ಘಾಟಿಸಲಿದ್ದಾರೆ.

Last Updated : Feb 23, 2024, 7:38 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.