ETV Bharat / bharat

7,600 ಕೋಟಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಪ್ರಧಾನಿ ಚಾಲನೆ - MULTIPLE DEVELOPMENT PROJECTS IN MH

ನಾಗ್ಪುರದಲ್ಲಿ ಅಂದಾಜು 7,000 ರೂ ಕೋಟಿಯ ಡಾ ಬಾಬಾ ಸಾಹೇಬ್​​ ಅಂಬೇಡ್ಕರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

PM Modi is set to launch multiple development projects in Maharashtra today
ಪ್ರಧಾನಿ ಮೋದಿ (ಎಎನ್​ಐ)
author img

By IANS

Published : Oct 9, 2024, 11:11 AM IST

ಮುಂಬೈ: ಮಹಾರಾಷ್ಟ್ರದಲ್ಲಿ 7,600 ಕೋಟಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಲಿದ್ದಾರೆ. ನಾಗ್ಪುರದಲ್ಲಿ ಅಂದಾಜು 7,000 ಕೋಟಿ ರೂ. ವೆಚ್ಚದ ಡಾ ಬಾಬಾ ಸಾಹೇಬ್​​ ಅಂಬೇಡ್ಕರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಇದು ಉತ್ಪಾದನೆ, ವಾಯುಯಾನ, ಪ್ರವಾಸೋದ್ಯಮ, ಲಾಜಿಸ್ಟಿಕ್ಸ್ ಮತ್ತು ಆರೋಗ್ಯ ರಕ್ಷಣೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಳವಣಿಗೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚಾಗಿ ಇದು ನಾಗ್ಪುರ ನಗರ ಮತ್ತು ವಿದರ್ಭ ಪ್ರದೇಶಕ್ಕೆ ಪ್ರಯೋಜನಕಾರಿಯಾಗಿದೆ.

ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡದ ಶಂಕುಸ್ಥಾಪನೆ: ಶಿರಡಿ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡದ ಶಂಕುಸ್ಥಾಪನೆಯನ್ನೂ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. 645 ಕೋಟಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗುತ್ತಿದ್ದು, ಇದು ಇದು ಶಿರಡಿಗೆ ಬರುವ ಧಾರ್ಮಿಕ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲಿದೆ. ಈ ಕಟ್ಟಡವನ್ನು ಸಾಯಿಬಾಬಾ ಅವರ ಅಧ್ಯಾತ್ಮಿಕ ಬೇವಿನ ಮರದ ವಿನ್ಯಾಸ ಆಧಾರಿಸಿ ನಿರ್ಮಾಣ ಮಾಡಲಾಗುವುದು.

ಇದರ ಜೊತೆಗೆ ಎಲ್ಲರಿಗೂ ಆರೋಗ್ಯ ಸೇವೆ ಖಚಿತಪಡಿಸಿಕೊಳ್ಳಲು ಮುಂಬೈ, ನಾಸಿಕ್, ಜಲ್ನಾ, ಅಮರಾವತಿ, ಗಡ್ಚಿರೋಲಿ, ಬುಲ್ಧಾನಾ, ವಾಶಿಮ್, ಭಂಡಾರಾ, ಹಿಂಗೋಲಿ ಮತ್ತು ಅಂಬರನಾಥ್ (ಥಾಣೆ) ನಲ್ಲಿರುವ ಒಟ್ಟಯ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಲಿದ್ದಾರೆ.

ಇದರ ಹೊರತಾಗಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ವಿಶೇಷ ಆರೋಗ್ಯ ಸೇವೆಯನ್ನು ನೀಡಲಾಗುವುದು. ಭಾರತವನ್ನು ವಿಶ್ವ ಕೌಶಲ್ಯ ರಾಜಧಾನಿಯಾಗಿಸುವ ಗುರಿಯೊಂದಿಗೆ ಪ್ರಧಾನಿ ಮುಂಬೈನಲ್ಲಿ ಇಂಡಿಯನ್​ ಇನ್ಸಿಟ್ಯೂಟ್​​ ಆಫ್​ ಸ್ಕಿಲ್ಸ್​ (ಐಐಎಸ್​) ಅನ್ನು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ - ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪ್ರಾಯೋಗಿಕ ತರಬೇತಿಯೊಂದಿಗೆ ಉದ್ಯಮ ಸಿದ್ಧ ಉದ್ಯೋಗ ಸೃಷ್ಟಿ ಗುರಿಯನ್ನು ಈ ಸಂಸ್ಥೆ ಹೊಂದಿದೆ. ಈ ಸಂಸ್ಥೆಗಯನ್ನು ಟಾಟಾ ಶಿಕ್ಷಣ ಮತ್ತು ಅಭಿವೃದ್ಧಿ ಟ್ರಸ್ಟ್ ಮತ್ತು ಕೇಂದ್ರ ಸರ್ಕಾರದ ಸಹಯೋಗದಿಂದ ಮಾಡಲಾಗಿದೆ.

ಸಂಸ್ಥೆಯಲ್ಲಿ ಮೆಕಾಟ್ರಾನಿಕ್ಸ್, ಕೃತಕ ಬುದ್ಧಿಮತ್ತೆ, ಡೇಟಾ ಅನಾಲಿಟಿಕ್ಸ್, ಕೈಗಾರಿಕಾ ಆಟೊಮೇಷನ್ ಮತ್ತು ರೊಬೊಟಿಕ್ಸ್‌ನಂತಹ ಕ್ಷೇತ್ರದಲ್ಲಿ ತರಬೇತಿ ನೀಡಲಾಗುವುದು. ಇದರ ಜೊತೆಗೆ ಪ್ರಧಾನಿ ವಿದ್ಯಾ ಸಮೀಕ್ಷಾ ಕೇಂದ್ರವನ್ನು (ವಿಎಸ್‌ಕೆ) ಉದ್ಘಾಟಿಸಲಿದ್ದಾರೆ. ಉತ್ತಮ - ಗುಣಮಟ್ಟದ ವಿದ್ಯಾರ್ಥಿಗಳ ಕಲಿಕೆ ಹೆಚ್ಚಿಸುವ ಗುರಿಯನ್ನು ಇದು ಹೊಂದಿದೆ. (ಐಎಎನ್​ಎಸ್​)

ಇದನ್ನೂ ಓದಿ: 'ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನೇ ನುಂಗುವ ಪರಾವಲಂಬಿ ಪಕ್ಷ': ಬಿಜೆಪಿ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.