ETV Bharat / bharat

ಪ್ರಧಾನಿ ನರೇಂದ್ರ ಮೋದಿ ಒಬಿಸಿಯಲ್ಲ, ಸಾಮಾನ್ಯ ವರ್ಗದಲ್ಲಿ ಜನಿಸಿದ್ದಾರೆ: ರಾಹುಲ್​ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರ ಜಾತಿ ಯಾವುದು ಎಂಬುದರ ಬಗ್ಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಭಾರತ್​ ಜೋಡೋ ಯಾತ್ರೆಯಲ್ಲಿ ಪ್ರಸ್ತಾಪಿಸಿದ್ದಾರೆ.

ರಾಹುಲ್​ ಗಾಂಧಿ
ರಾಹುಲ್​ ಗಾಂಧಿ
author img

By ANI

Published : Feb 8, 2024, 1:08 PM IST

ಗುವಾಹಟಿ( ಒಡಿಶಾ): ಪ್ರಧಾನಿ ನರೇಂದ್ರ ಮೋದಿ ಅವರ ಜಾತಿ ಯಾವುದು ಎಂಬುದನ್ನ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಮತ್ತೆ ಮುನ್ನೆಲೆಗೆ ತಂದಿದ್ದಾರೆ. ನರೇಂದ್ರ ಮೋದಿ, ಹಿಂದುಳಿದ ವರ್ಗದವರಲ್ಲ(ಒಬಿಸಿ) ಸಾಮಾನ್ಯ ವರ್ಗದಲ್ಲಿ( ಜನರಲ್​ ಕೆಟಗರಿ) ಜನಿಸಿದ್ದಾರೆ ಎಂದು ಹೇಳಿದ್ದಾರೆ.

ಇಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಗುರುವಾರ ಮಾತನಾಡಿದ ಕಾಂಗ್ರೆಸ್​ ಸಂಸದ, ಮೋದಿ ಅವರು ಪ್ರತಿ ಬಾರಿಯೂ ತಮ್ಮನ್ನು ಒಬಿಸಿ ಎಂದು ಕರೆದುಕೊಳ್ಳುತ್ತಾರೆ. ಆದರೆ, ಅವರು ನಿಜವಾದ ಜಾತಿ ಹಿಂದುಳಿದ ವರ್ಗವಲ್ಲ. ಅವರು ಗುಜರಾತಿನ 'ಟೆಲಿ' ಎಂಬ ಜಾತಿಯಲ್ಲಿ ಜನಿಸಿದ್ದಾರೆ. ಇದು ಮೊದಲು ಒಬಿಸಿಯಲ್ಲಿ ಇರಲಿಲ್ಲ. 2000ನೇ ಇಸ್ವಿಯಲ್ಲಿ ಅದನ್ನು ಒಬಿಸಿ ಪಟ್ಟಿಗೆ ಸೇರಿಸಲಾಯಿತು ಎಂದು ರಾಹುಲ್​ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರು ಜನರ ಬಳಿ ಬಂದಾಗ ಪ್ರತಿ ಬಾರಿಯೂ ಮೋದಿ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಇಡೀ ದೇಶಕ್ಕೆ ಸುಳ್ಳು ಹೇಳಿದ್ದಾರೆ. ಹಿಂದುಳಿದ ವರ್ಗದಲ್ಲಿ ಹುಟ್ಟಿಲ್ಲ, ಅವರು ಸಾಮಾನ್ಯ ಜಾತಿಗೆ ಸೇರಿದವರು. ನೀವು ಇದನ್ನು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿ ಎಂದು ಕರೆ ನೀಡಿದರು.

ಒಬಿಸಿಯಲ್ಲದ ಕಾರಣ ಜಾತಿಗಣತಿಗೆ ವಿರೋಧ: ಮೋದಿ ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ ಕಾರಣ, ದೇಶದಲ್ಲಿ ಜಾತಿ ಗಣತಿ ನಡೆಸಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಜಾತಿಯ ವಿಚಾರದಲ್ಲೂ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್​ ಗಾಂಧಿ ಆರೋಪಿಸಿದರು.

ಬುಧವಾರ ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಜಾತಿ ವಿಚಾರದಲ್ಲಿ ಕಾಂಗ್ರೆಸ್​ ದೇಶವನ್ನು ಇಬ್ಭಾಗ ಮಾಡಲು ಮುಂದಾಗಿದೆ. ಜಾತಿಗಣತಿ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶವಿದೆ. ನಾನೇ ಹಿಂದುಳಿದ ವರ್ಗದವನಾಗಿದ್ದರೂ, ನನ್ನ ಮೇಲೆಯೇ ಜಾತಿ ದಾಳಿ ನಡೆಸಲಾಗುತ್ತಿದೆ. ಹಿಂದುಳಿದ ಸಮುದಾಯಗಳ ನಾಯಕರೊಂದಿಗೆ ಕಾಂಗ್ರೆಸ್ ಬೂಟಾಟಿಕೆ ನಡೆಸುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಯುಪಿಎ ಸರ್ಕಾರದ ಅವಧಿಯಲ್ಲಿ ಒಬಿಸಿಗಳಿಗೆ ನ್ಯಾಯ ಒದಗಿಸಲಿಲ್ಲ. ಕೆಲವು ದಿನಗಳ ಹಿಂದೆ ಸಮಾಜವಾದಿ ನಾಯಕ ಬಿಹಾರದ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಲಾಯಿತು. 1970 ರಲ್ಲಿ ಅವರು ಬಿಹಾರ ಸಿಎಂ ಆಗಿದ್ದಾಗ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್​ ಏನೆಲ್ಲಾ ಪ್ರಯತ್ನ ಮಾಡಿತು ಎಂಬುದು ಎಲ್ಲರಿಗೂ ತಿಳಿದಿದೆ. ಒಬಿಸಿ ನಾಯಕರನ್ನು ಕಾಂಗ್ರೆಸ್ ಸಹಿಸುವುದಿಲ್ಲ. ಸರ್ಕಾರದಲ್ಲಿ ಎಷ್ಟು ಒಬಿಸಿಗಳು ಇದ್ದಾರೆ ಎಂದು ಲೆಕ್ಕ ಹಾಕುತ್ತಲೇ ಇರುತ್ತಾರೆ. ನಾನೇ ಒಬಿಸಿ ವರ್ಗಕ್ಕೆ ಸೇರಿದವರು. ನಿಮಗೆ ಕಾಣುತ್ತಿಲ್ಲವೇ ಎಂದು ಮೋದಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಮಿತ್​ ಶಾ ಭೇಟಿ ಮಾಡಿದ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.