ETV Bharat / bharat

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ: ಪ್ರಧಾನಿ ಮೋದಿ ಭಾಗಿ - INTERNATIONAL YOGA DAY

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಈ ಬಾರಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಎಕ್ಸ್​ ಖಾತೆಯಲ್ಲೂ ಯೋಗದ ಭಂಗಿಗಳ ವಿಡಿಯೋಗಳನ್ನು ಪ್ರಧಾನಿ ಹಂಚಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನ
ಅಂತಾರಾಷ್ಟ್ರೀಯ ಯೋಗ ದಿನ (ETV Bharat)
author img

By ETV Bharat Karnataka Team

Published : Jun 18, 2024, 9:24 PM IST

ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಅಂತಾರಾಷ್ಟ್ರೀಯ ಯೋಗ ದಿನವನ್ನು ಜೂನ್​ 21 ರಂದು ಆಚರಣೆ ಮಾಡಲಾಗುತ್ತಿದೆ. ಈ ವರ್ಷ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ಪ್ರಧಾನ ಯೋಗ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಆಯುಷ್ ಸಚಿವಾಲಯದ ಕಾರ್ಯದರ್ಶಿ ವೈದ್ಯ ರಾಜೇಶ್ ಕೊಟೆಚಾ ಅವರು, ಈ ವರ್ಷದ ಯೋಗದ ದಿನದ ಧ್ಯೇಯವಾಕ್ಯವು "ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ"ವಾಗಿದೆ. ಈ ಸಂದೇಶದ ಪ್ರಮುಖ ಉದ್ದೇಶವೆಂದರೆ, ಯೋಗ ಮಾಡುವ ಮೂಲಕ ಇಡೀ ಸಮುದಾಯವನ್ನೂ ಪ್ರೇರೇಪಿಸಬೇಕು. ಜೀವನದ ಪ್ರತಿ ಹಂತದಲ್ಲೂ ಯೋಗ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಬಾರಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಪ್ರಮುಖ ಆಚರಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸಮಯದಲ್ಲಿ ಯೋಗ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಎಲ್ಲಾ ಕಚೇರಿಗಳ ಸಿಬ್ಬಂದಿ ಭಾಗಿ; ಈ ಬಾರಿಯ ಯೋಗ ದಿನಾಚರಣೆ ವಿಶೇಷವೆಂದರೆ, ಕೇಂದ್ರ ಸರ್ಕಾರದ ಎಲ್ಲಾ ಕಚೇರಿಗಳ ಸಿಬ್ಬಂದಿ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಎಲ್ಲಾ ರಾಜ್ಯ ಸರ್ಕಾರಗಳೂ ಪಾಲುದಾರರಾಗಲಿದ್ದಾರೆ. ದೇಶದ ತುಂಬೆಲ್ಲಾ ಯೋಗಾಯೋಗ ಇರಲಿದೆ. ಯೋಗವು ಭಾರತದಲ್ಲಿ ಹುಟ್ಟಿಕೊಂಡ ಪ್ರಾಚೀನ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದರು.

2014 ರಲ್ಲಿ ವಿಶ್ವಸಂಸ್ಥೆಯ ಜೂನ್​ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿತು. ಅದಾದ ಬಳಿಕ 2015 ರಿಂದ ಪ್ರತಿ ವರ್ಷ ಅದೇ ದಿನದಂದು ವಿಶ್ವದಾದ್ಯಂತ ಯೋಗ ದಿನ ಆಚರಿಸುತ್ತ ಬರಲಾಗುತ್ತಿದೆ.

ಯೋಗದ ಭಂಗಿ ಹಂಚಿಕೊಂಡ ಪ್ರಧಾನಿ: ಅಂತಾರಾಷ್ಟ್ರೀಯ ಯೋಗ ದಿನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು,"ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು" ಎಂದು ಜನರಿಗೆ ಕರೆ ನೀಡಿದ್ದಾರೆ. ತಮ್ಮ ಎಕ್ಸ್​ ಖಾತೆಯಲ್ಲಿ ವಿವಿಧ ಯೋಗಾಸನಗಳ ವಿಡಿಯೋಗಳನ್ನು ಹಂಚಿಕೊಂಡಿರುವ ಅವರು, ಅವುಗಳ ಪ್ರಯೋಜನಗಳನ್ನು ಸಹ ವಿವರಿಸಿದ್ದಾರೆ.

"ಯೋಗ ದಿನ ಸಮೀಪಿಸುತ್ತಿದ್ದು, ವಿವಿಧ ಆಸನಗಳು ಮತ್ತು ಅವುಗಳ ಪ್ರಯೋಜನಗಳ ಕುರಿತು ಮಾರ್ಗದರ್ಶನ ನೀಡುವ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇನೆ. ಇದು ನಿಯಮಿತವಾಗಿ ಯೋಗವನ್ನು ಅಭ್ಯಾಸ ಮಾಡಲು ನಿಮ್ಮೆಲ್ಲರನ್ನು ಪ್ರೇರೇಪಿಸುತ್ತದೆ ಎಂದು ಭಾವಿಸುತ್ತೇನೆ" ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪಿಎಂ ಕಿಸಾನ್​ ಸಮ್ಮಾನ್​ ಯೋಜನೆಯ 9.26 ಕೋಟಿ ರೈತರಿಗೆ ಹಣ ಬಿಡುಗಡೆ; ಹೀಗೆ ಪರಿಶೀಲಿಸಿ - PM KISAN SAMMAN NIDHI YOJANA

ETV Bharat Logo

Copyright © 2024 Ushodaya Enterprises Pvt. Ltd., All Rights Reserved.