ETV Bharat / bharat

ಜಿ7 ಶೃಂಗಭೆಯಲ್ಲಿ ಭಾಗಿಯಾಗಲು ಇಟಲಿಗೆ ಮೋದಿ: ನೂತನ ಪ್ರಧಾನಿಯಾದ ಬಳಿಕ ಮೊದಲ ವಿದೇಶ ಪ್ರವಾಸ - PM Narendra Modi - PM NARENDRA MODI

ಈ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಹೊಸ ಸರ್ಕಾರ ರಚನೆಯಾದ ಬಳಿಕದ ಮೋದಿ ಅವರ ಮೊದಲ ವಿದೇಶ ಭೇಟಿಯಾಗಲಿದೆ.

ಜಿ7 ಶೃಂಗಭೆಯಲ್ಲಿ ಭಾಗಿಯಾಗಲು ಇಟಲಿಗೆ ಮೋದಿ
ಜಿ7 ಶೃಂಗಭೆಯಲ್ಲಿ ಭಾಗಿಯಾಗಲು ಇಟಲಿಗೆ ಮೋದಿ (ETV Bharat)
author img

By PTI

Published : Jun 11, 2024, 10:24 PM IST

ನವದೆಹಲಿ: ಜಿ7 ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ಇಟಲಿಗೆ ಭೇಟಿ ನೀಡಲಿದ್ದಾರೆ. ಇದು ಸತತ ಮೂರನೇ ಅವಧಿಗೆ ದೇಶದ ಚುಕ್ಕಾಣಿ ಹಿಡಿದ ಬಳಿಕದ ಮೊದಲ ವಿದೇಶ ಪ್ರವಾಸವಾಗಲಿದೆ.

ಜೂನ್ 13 ರಿಂದ 15 ರವರೆಗೆ ಇಟಲಿಯ ಅಪುಲಿಯಾದಲ್ಲಿ ಜಿ 7 ಶೃಂಗಸಭೆಯ ಆಯೋಜಿಸಲಾಗಿದೆ. ಇದಕ್ಕೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳನ್ನು ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಕೋರಿಕೆಯ ಮೇರೆಗೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅಮೆರಿಕದ ಅಧ್ಯಕ್ಷ ಜೋ ಬಿಡೆನ್, ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೇರಿದಂತೆ ಹಲವು ಗಣ್ಯರ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ರಷ್ಯಾ ದಾಳಿಗೆ ತುತ್ತಾಗಿರುವ ಉಕ್ರೇನ್​ ಮೇಲೆ ಯುದ್ಧ ನಿಲ್ಲಿಸಲು ಆಗ್ರಹಿಸುತ್ತಿರುವ ಆ ದೇಶದ ಅಧ್ಯಕ್ಷ ವೊಲೊಡಿಮಿರ್​ ಝೆಲನ್​ಸ್ಕಿ ಅವರು ಕೂಡ ಸಭೆಗೆ ಹಾಜರಾಗಲಿದ್ದಾರೆ.

ದಿನಾಂಕ ನಿಗದಿ ಆಗಿಲ್ಲ: ಇಟಲಿಗೆ ಭೇಟಿ ನೀಡುವ ಪ್ರಧಾನಿ ಮೋದಿ ಅವರ ಪ್ರವಾಸದ ಬಗ್ಗೆ ದಿನಾಂಕ ನಿಗದಿಯಾಗಿಲ್ಲ. ಜೂನ್​ 13 ರಂದು ಅಲ್ಲಿಗೆ ತೆರಳಿ ಜೂನ್​ 14 ರಂದು ವಾಪಸ್​ ಆಗಲಿದ್ದಾರೆ ಎಂದು ಉನ್ನತಾಧಿಕಾರಿಗಳ ಮಾಹಿತಿಯಾಗಿದೆ. ಆದರೆ, ಈ ಬಗ್ಗೆ ಪ್ರಧಾನಿ ಕಚೇರಿ ಶೀಘ್ರವೇ ಪ್ರಕಟಣೆ ಹೊರಡಿಸಲಿದೆ. ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೋದಿ ಅವರ ಮೊದಲ ವಿದೇಶ ಪ್ರವಾಸ ಇದಾಗಲಿದೆ.

ಪ್ರಧಾನಿಯ ಜೊತೆಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಹಾರ (ಎನ್​ಎಸ್​ಎ) ಅಜಿತ್ ದೋವಲ್ ಅವರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಇರಲಿದೆ ಎಂದು ಮೂಲಗಳು ತಿಳಿಸಿವೆ.

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸೇರಿದಂತೆ ಹಲವು ಗಣ್ಯರೊಂದಿಗೆ ಪ್ರಧಾನಿ ಮೋದಿ ಅವರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. 2023 ರ ಮೇ ತಿಂಗಳಲ್ಲಿ ಜಪಾನ್​ನ ಹಿರೋಷಿಮಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು.

ಏನಿದು ಜಿ7 ಶೃಂಗಸಭೆ?: ಮಧ್ಯಪ್ರಾಚ್ಯ ರಾಷ್ಟ್ರಗಳಾದ ಅಮೆರಿಕ, ಇಂಗ್ಲೆಂಡ್​, ಫ್ರಾನ್ಸ್, ಇಟಲಿ, ಜರ್ಮನಿ, ಕೆನಡಾ ಮತ್ತು ಜಪಾನ್ ಅನ್ನು ಒಳಗೊಂಡ ಒಕ್ಕೂಟವಾಗಿದೆ. ಇದು ಸದಸ್ಯ ರಾಷ್ಟ್ರಗಳ ನಡುವೆ ವ್ಯಾಪಾರ, ಬಾಂಧವ್ಯ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಮೇಲೆ ನಿಯಂತ್ರಣ ಸಾಧಿಸಲು ರಚಿಸಿಕೊಳ್ಳಲಾಗಿದೆ. ಈ ಮೊದಲು ಜಿ8 ಶೃಂಗವಾಗಿತ್ತು. ರಷ್ಯಾ ಇದರ ಸದಸ್ಯತ್ವ ಹೊಂದಿತ್ತು. 2014 ರಲ್ಲಿ ಕ್ರಿಮಿಯಾದ ಮೇಲೆ ಯುದ್ಧ ಸಾಗಿ ವಶಕ್ಕೆ ಪಡೆದ ಬಳಿಕ ಶೃಂಗದಿಂದ ಕೈಬಿಡಲಾಯಿತು. ಬಳಿಕ ಇದು 7 ರಾಷ್ಟ್ರಗಳ ಸದಸ್ಯತ್ವವನ್ನು ಹೊಂದಿದೆ. ಪ್ರತಿವರ್ಷವೂ ಶೃಂಗದ ಸಭೆ ನಡೆಯಲಿದ್ದು, ಒಂದೊಂದು ದೇಶ ಆತಿಥ್ಯ ವಹಿಸುತ್ತದೆ. ಈ ಬಾರಿ ಇಟಲಿಯ ಸರದಿಯಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಹೊಸ ಸಂಪುಟದ 28 ಸಚಿವರ ಮೇಲಿದೆ ಕ್ರಿಮಿನಲ್ ಪ್ರಕರಣ - Criminal Cases

ETV Bharat Logo

Copyright © 2024 Ushodaya Enterprises Pvt. Ltd., All Rights Reserved.