ETV Bharat / bharat

ಅಮೆರಿಕಾಗೆ ತೆರಳಿದ ಪ್ರಧಾನಿ ಮೋದಿ: ಇಂದಿನಿಂದ ಮೂರು ದಿನ ಪ್ರವಾಸ - Modi US Tour - MODI US TOUR

ಪ್ರಧಾನಿ ಮೋದಿ ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸಕ್ಕೆ ತೆರಳಿದರು. ಕ್ವಾಡ್ ಶೃಂಗಸಭೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ.

ಅಮೆರಿಕಾಗೆ ತೆರಳಿದ ಪ್ರಧಾನಿ ಮೋದಿ
ಅಮೆರಿಕಾಗೆ ತೆರಳಿದ ಪ್ರಧಾನಿ ಮೋದಿ (ETV Bharat)
author img

By PTI

Published : Sep 21, 2024, 10:46 AM IST

ನವದೆಹಲಿ: ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಆಯೋಜನೆಗೊಂಡಿರುವ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಅಮೆರಿಕಾಗೆ ತೆರಳಿದರು. ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕಾ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರು, ಕ್ವಾಡ್ ಶೃಂಗಸಭೆ, ದ್ವಿಪಕ್ಷೀಯ ಮಾತುಕತೆ ಮತ್ತು ಸಮುದಾಯದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಕೆಲಸ ಮಾಡಲು ಕ್ವಾಡ್ ಶೃಂಗಸಭೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಸಕ್ಕೂ ಮುನ್ನ ತಿಳಿಸಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡನ್ ಅವರು ತಮ್ಮ ತವರು ವಿಲ್ಮಿಂಗ್ಟನ್‌ನಲ್ಲಿ ಇಂದು ಕ್ವಾಡ್ ಶೃಂಗಸಭೆ ಆಯೋಜಿಸಿದ್ದಾರೆ.

ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ವಾರ್ಷಿಕ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿ ಮೋದಿ ಅವರು ನ್ಯೂಯಾರ್ಕ್​ನಲ್ಲಿ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ಭಾಷಣ ಮಾಡಲಿದ್ದಾರೆ. ನಂತರ ಅಮೆರಿಕದ ಉನ್ನತ ತಂತ್ರಜ್ಞಾನ ಸಂಸ್ಥೆಗಳ ಸಿಇಒಗಳೊಂದಿಗೆ ಸಭೆ ನಡೆಸಲಿದ್ದಾರೆ.

"ಕ್ವಾಡ್ ಶೃಂಗಸಭೆಯಲ್ಲಿ ನನ್ನ ಸಹೋದ್ಯೋಗಿಗಳಾದ ಅಧ್ಯಕ್ಷ ಬೈಡನ್​, ಪ್ರಧಾನಿ ಅಲ್ಬನೀಸ್ ಮತ್ತು ಪ್ರಧಾನಿ ಕಿಶಿದಾ ಅವರನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ. ಈ ವೇದಿಕೆಯು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಕೆಲಸ ಮಾಡಲು ಸಮಾನ ಮನಸ್ಕ ರಾಷ್ಟ್ರಗಳ ಪ್ರಮುಖ ಸಮೂಹವಾಗಿ ಹೊರಹೊಮ್ಮಿದೆ" ಎಂದು ಮೋದಿ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷ ಬೈಡನ್ ಅವರೊಂದಿಗಿನ ನನ್ನ ಸಭೆಯಿಂದ ನಮ್ಮ ಜನರು ಮತ್ತು ಜಾಗತಿಕ ಒಳಿತಿಗಾಗಿ ಭಾರತ-ಯುಎಸ್ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಗೊಳಿಸಲು ಹೊಸ ಮಾರ್ಗಗಳನ್ನು ಪರಿಶೀಲಿಸಲು ಮತ್ತು ಗುರುತಿಸಲು ನಮಗೆ ಅನುವು ಮಾಡಿಕೊಡುತ್ತದೆ ಎಂದು ಮೋದಿ ಹೇಳಿದರು.

ಪ್ರಧಾನಿ ಮೋದಿ ಪ್ರವಾಸ ವಿವರ ಹೀಗಿದೆ: ಇಂದು ವಿಲ್ಮಿಂಗ್ಟನ್​ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಮೋದಿ ಅವರು ನಾಳೆ ಲಾಂಗ್ ಐಲ್ಯಾಂಡ್‌ನಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ನ್ಯೂಯಾರ್ಕ್‌ಗೆ ಪ್ರಯಾಣಿಸಲಿದ್ದಾರೆ. ಸೆ.23ರಂದು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕ ಉದ್ಯಮಿಗಳು ಮತ್ತು ಭಾರತೀಯ ಸಮುದಾಯವನ್ನು ಭೇಟಿಯಾಗಲು ಉತ್ಸುಕನಾಗಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಜವಳಿ ಪಾರ್ಕ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ - PM NARENDRA MODI

ETV Bharat Logo

Copyright © 2025 Ushodaya Enterprises Pvt. Ltd., All Rights Reserved.