ETV Bharat / bharat

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ತಮಿಳುನಾಡು ಸಚಿವರ ವಿರುದ್ಧ ಪ್ರಕರಣ ದಾಖಲು - PM Modi news

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿರುವ ತಮಿಳುನಾಡು ಸಚಿವರೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಮೀನುಗಾರಿಕಾ ಸಚಿವೆ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

author img

By ETV Bharat Karnataka Team

Published : Mar 25, 2024, 6:31 PM IST

POLICE FILE CASE  ANITHA R RADHAKRISHNAN  PM MODI  ALLEGED DEROGATORY REMARKS
ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ತಮಿಳುನಾಡು ಸಚಿವರ ವಿರುದ್ಧ ಪ್ರಕರಣ ದಾಖಲು

ಚೆನ್ನೈ, ತಮಿಳುನಾಡು: ತಮಿಳುನಾಡು ಸರ್ಕಾರದ ಸಚಿವ ಹಾಗೂ ಡಿಎಂಕೆ ನಾಯಕ ಅನಿತಾ ರಾಧಾಕೃಷ್ಣನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವೇದಿಕೆಯಲ್ಲಿ ಭಾಷಣ ಮಾಡುವಾಗ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೂರಿನ ಆಧಾರದ ಮೇಲೆ ಮೇಘನಪುರಂ ಪೊಲೀಸರು ಸಚಿವ ಅನಿತಾ ರಾಧಾಕೃಷ್ಣನ್ ವಿರುದ್ಧ ಸೆಕ್ಷನ್ 294 (ಬಿ) ಅಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಡಿಎಂಕೆ ನಾಯಕ ನಮ್ಮ ಗೌರವಾನ್ವಿತ ಪ್ರಧಾನಿ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಶನಿವಾರ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಟೀಕಿಸಲು ಏನೂ ಇಲ್ಲದಿರುವಾಗ, ಡಿಎಂಕೆ ನಾಯಕರು ಈ ಮಟ್ಟಕ್ಕೆ ಇಳಿದಿದ್ದಾರೆ ಎಂದು ಅವರು ತಮ್ಮ ಪೋಸ್ಟ್​ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಎಂಕೆ ಸಂಸದೆ ಕನಿಮೊಳಿ ವೇದಿಕೆಯಲ್ಲಿದ್ದು, ಸಹೋದ್ಯೋಗಿಯನ್ನು ಮನವೊಲಿಸಲು ಮುಂದಾಗಲಿಲ್ಲ.

ಮಾರ್ಚ್ 22ರಂದು ತೂತುಕುಡಿಯ ತಿರುಚೆಂದೂರು ಸಮೀಪದ ತಾಂಡುಪತ್ತು ಗ್ರಾಮದಲ್ಲಿ ನಡೆದ ಐಎನ್‌ಡಿಐಎ ಮೈತ್ರಿಕೂಟದ ಸಭೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ತೂತುಕುಡಿ ಸಂಸದೆ ಕನಿಮೊಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೀನುಗಾರಿಕಾ ಸಚಿವ ಅನಿತಾ ರಾಧಾಕೃಷ್ಣನ್ ಅವರು ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು.

ತಮ್ಮ ಭಾಷಣದ ವೇಳೆ ಸಚಿವ ರಾಧಾಕೃಷ್ಣನ್ ಅವರು ಬಿಜೆಪಿಯನ್ನು ಟೀಕಿಸಿದರು. ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದ ಅವರು, ಕಾಮರಾಜರ ಬಗ್ಗೆ ಮಾತನಾಡುವ ಅರ್ಹತೆ ಅವರಿಗೆ ಇಲ್ಲ ಎಂದು ಕಿಡಿಕಾರಿದರು. ವಿಡಿಯೋದಲ್ಲಿ ಸೆರೆಯಾಗಿರುವ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಬಹುಬೇಗ ಹರಡಿ ವಿವಾದಕ್ಕೆ ಕಾರಣವಾಗಿತ್ತು.

ಇದಾದ ನಂತರ ಭಾನುವಾರ ತೂತುಕುಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಪಶುಸಂಗೋಪನಾ ಸಚಿವ ಅನಿತಾ ರಾಧಾಕೃಷ್ಣನ್ ಅವರು ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಭಾಷೆ ಬಳಸಿದ್ದಕ್ಕೆ ತಮಿಳುನಾಡು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು.

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಸಭ್ಯವಾಗಿ ಮಾತನಾಡಿದ ಸಚಿವೆ ಅನಿತಾ ರಾಧಾಕೃಷ್ಣನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ತೂತುಕುಡಿ ದಕ್ಷಿಣ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಚಿತ್ರಾಂಗತನ್ ಪರವಾಗಿ ತಮಿಳುನಾಡು ಚುನಾವಣಾಧಿಕಾರಿ ಹಾಗೂ ಭಾರತ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.

ಸಚಿವರನ್ನ ಕೂಡಲೇ ಬಂಧಿಸಿ: ರಾಜ್ಯ ಬಿಜೆಪಿ ಉಪಾಧ್ಯಕ್ಷ ನಾರಾಯಣನ್ ತಿರುಪತಿ ಅವರು ಸಚಿವರನ್ನು ವಜಾಗೊಳಿಸಬೇಕು ಮತ್ತು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ನಾವು ಅದನ್ನು ಅನುವಾದಿಸಿದರೆ, ಇದು ಇಂಗ್ಲಿಷ್ ಭಾಷೆಯಲ್ಲಿ ಅತ್ಯಂತ ಕೊಳಕು ಪದವಾಗಿದೆ. ಡಿಎಂಕೆಗೆ ನಾಚಿಕೆ ಇದ್ದರೆ ಪ್ರಧಾನಿಯನ್ನು ಈ ರೀತಿ ಕೊಳಕು ರೀತಿಯಲ್ಲಿ ನಿಂದಿಸಿದ ಸಚಿವರನ್ನು ವಜಾ ಮಾಡಬೇಕು. ಕೇಂದ್ರ ಸಚಿವ ಅನುರಾಗ್ ಠಾಕೂರ್ ಕೂಡ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಧಾಕೃಷ್ಣನ್ ಅವರು ಪ್ರಧಾನಿ ವಿರುದ್ಧದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.

ಓದಿ: ಅಸಮಾಧಾನಿತರ ಸಭೆಗೆ ರೇಣುಕಾಚಾರ್ಯ, ರವೀಂದ್ರನಾಥ್ ಗೈರು: ನಾಳೆ ದಾವಣಗೆರೆಗೆ ತೆರಳಿ ಸಂಧಾನ ಸಭೆ ನಡೆಸಲು ಬಿಎಸ್​ವೈ ನಿರ್ಧಾರ - BS Yeddyurappa meeting

ETV Bharat Logo

Copyright © 2024 Ushodaya Enterprises Pvt. Ltd., All Rights Reserved.