ETV Bharat / bharat

ಆಯುಷ್ಮಾನ್​​​​ ಭಾರತ್​​​: 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ವೃದ್ಧರಿಗೆ ಉಚಿತ ಚಿಕಿತ್ಸೆ ಘೋಷಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು - President Droupadi Murmu speech

author img

By ETV Bharat Karnataka Team

Published : Jun 27, 2024, 11:25 AM IST

ಸಂಸತ್​ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಸರ್ಕಾರದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೇ ಹೊಸ ಯೋಜನೆಯೊಂದನ್ನು ಘೋಷಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಆರಂಭ
ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಆರಂಭ (ANI)

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಇಂದು ಸಂಸತ್​ನಲ್ಲಿ ಭಾಷಣ ಮಾಡಿದರು. ಭಾಷಣದ ಆರಂಭದಲ್ಲೇ 18ನೇ ಲೋಕಸಭೆಗೆ ಆಯ್ಕೆಯಾದ ಎಲ್ಲ ಸಂಸದರಿಗೆ ಅಭಿನಂದನೆ ಹೇಳಿದರು. ಬಳಿಕ ಮೋದಿ ಸರ್ಕಾರಕ್ಕೆ ಕಂಗ್ರಾಟ್ಸ್​​ ಹೇಳಿದ ಅವರು, ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅತ್ಯುತ್ತಮ ಕೆಲಸಗಳನ್ನು ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ ಶುಭಕೋರಿದರು.

ಹಾಗೇ ಮುಂದಿನ ದಿನಗಳಲ್ಲಿ ಸರ್ಕಾರ ಬಜೆಟ್​ ಮಂಡಿಸಲಿದೆ. ವಿಶ್ವದ ಆರ್ಥಿಕತೆಯಲ್ಲಿ ಭಾರತದ ಕೊಡುಗೆ ಅಪಾರ. ಸ್ಥಿರ, ಪ್ರಾಮಾಣಿಕ ಸರ್ಕಾರದ ಮೇಲೆ ಜನರಿಗೆ ನಂಬಿಕೆ ಇದೆ. ಈ ಬಾರಿಯ 18 ನೇ ಲೋಕಸಭೆಯಲ್ಲಿ ಮಂಡನೆ ಆಗುವ ಬಜೆಟ್​ ಐತಿಹಾಸಿಕ ಬಜೆಟ್​ ಆಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಉಚಿತ ಚಿಕಿತ್ಸೆ ಯೋಜನೆ ಘೋಷಣೆ: ಮುಂದುವರಿದು ಮಾತನಾಡಿದ ರಾಷ್ಟ್ರಪತಿಗಳು, ನಮ್ಮ ಸರ್ಕಾರ ಹೊಸ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಿದೆ. ಆಯುಷ್ಮಾನ್​​​​ ಭಾರತ್​​​ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ವೃದ್ಧರಿಗೆ( ಹಿರಿಯ ನಾಗರಿಕರಿಗೆ) ಉಚಿತ ಚಿಕಿತ್ಸೆ ನೀಡಲಿದ್ದೇವೆ ಎಂದು ತಮ್ಮ ಹೊಸ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಬಳಿಕ, " ನನ್ನ ಸರ್ಕಾರದ ಪರಿಣಾಮಕಾರಿ ಪ್ರಯತ್ನದ ಫಲವಾಗಿ ಇಂದು ನಮ್ಮ ಯುವಕರು ಕ್ರೀಡೆಯಲ್ಲಿಯೂ ಹೊಸ ಹೊಸ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಭಾರತದ ಯುವ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ, ದಾಖಲೆ ಸಂಖ್ಯೆಯಲ್ಲಿ ಪದಕಗಳನ್ನು ಗೆಲ್ಲುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಆರಂಭವಾಗಲಿದ್ದು, ಭಾರತವನ್ನು ಪ್ರತಿನಿಧಿಸುವ ಎಲ್ಲ ಕ್ರೀಡಾಪಟುಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಎಂದ ಮುರ್ಮು ಈ ಸಾಧನೆಗಳನ್ನು ಮತ್ತಷ್ಟು ಮುಂದಕ್ಕೆ ತೆಗೆದುಕೊಂಡು ಹೋಗಲು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ ​​2036 ರ ಒಲಿಂಪಿಕ್ಸ್​ನ್ನು ಆಯೋಜಿಸಲು ಸಿದ್ಧತೆ ನಡೆಸುತ್ತಿದೆ' ಎಂದು ಇದೇ ವೇಳೆ ಸರ್ಕಾರದ ನಡೆಯನ್ನು ಶ್ಲಾಘಿಸಿದರು.

ಹಾಗೆಯೇ "ಇಂದು ಭಾರತ ರಾಷ್ಟ್ರವು ಅನೇಕ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಡಿಜಿಟಲ್ ಪಾವತಿಯ ವಿಚಾರದಲ್ಲಿ ಭಾರತವು ವಿಶ್ವದಲ್ಲಿ ಭಾರಿ ಮುಂದಿದೆ. ಇದಕ್ಕಾಗಿ ನಾವು ಹೆಮ್ಮೆಪಡಬೇಕಿದೆ. ಭಾರತೀಯ ವಿಜ್ಞಾನಿಗಳು ಚಂದ್ರನ ದಕ್ಷಿಣ ಭಾಗದಲ್ಲಿ ಗಗನಯಾನ ಮಷಿನ್​​​ ಇಳಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೆ ನಾವೆಲ್ಲರೂ ಹೆಮ್ಮೆಪಡಬೇಕಿದೆ. ಭಾರತ ದೇಶವು ಪ್ರಪಂಚದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಗುರುತಿಸಿಕೊಂಡಿದೆ, ಇದು ಹೆಮ್ಮೆಯ ವಿಚಾರ. 90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತ್ಯಂತ ದೊಡ್ಡ ಚುನಾವಣೆಯನ್ನು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಸಂತಸದ ಹಾಗೂ ಹೆಮ್ಮೆಯ ವಿಚಾರ ಎಂದರು. ಇಂದು ಇಡೀ ಜಗತ್ತು ನಮ್ಮನ್ನು ಪ್ರಜಾಪ್ರಭುತ್ವದ ತಾಯಿ ಎಂದು ಗೌರವಿಸುತ್ತಿದೆ ಎಂದು ಇದೇ ವೇಳೆ ರಾಷ್ಟ್ರಪತಿ ಮುರ್ಮು ಬಣ್ಣಿಸಿದರು.

"ಭಾರತದ ಜನತೆ ಯಾವಾಗಲೂ ಪ್ರಜಾಪ್ರಭುತ್ವದಲ್ಲಿ ತಮ್ಮ ಸಂಪೂರ್ಣ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ. ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು, ನಾವು ಈ ನಂಬಿಕೆಯನ್ನು ಹಾಗೇ ಉಳಿಸಿಕೊಳ್ಳಬೇಕು. ಮತಯಂತ್ರಗಳನ್ನು ಲೂಟಿ ಮಾಡಿ ಕಿತ್ತುಕೊಂಡು ಹೋಗುತ್ತಿದ್ದ ಕಾಲ ನಮಗೆ ಈಗಲೂ ನೆನಪಿದೆ. ಮತದಾನ ಪ್ರಕ್ರಿಯೆ ಸುರಕ್ಷಿತವಾಗಿರಲು ಇವಿಎಂ ಅಳವಡಿಸಿಕೊಂಡಿದೆ. ಕಳೆದ ಹಲವು ದಶಕಗಳಲ್ಲಿ ಇವಿಎಂ ವಿಚಾರದ ಬಗ್ಗೆ ಅನೇಕ ಟೀಕೆ ಟಿಪ್ಪಣಿಗಳು ಬಂದಿವೆ. ಇದು ಸುಪ್ರೀಂ ಕೋರ್ಟ್‌ ಅಂಗಳಕ್ಕೆ ಹೋಗಿ, ಅಲ್ಲಿ ಇವಿಎಂ ಬಳಕೆಗೆ ಅಧಿಕೃತ ಮುದ್ರೆ ಬಿದ್ದಿದೆ ಎಂದು ಭಾಷಣದಲ್ಲಿ ಪ್ರಸ್ತಾಪಿಸಿದರು.

ಇದನ್ನೂ ಓದಿ: 18ನೇ ಲೋಕಸಭಾ ಅಧಿವೇಶನ: ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ - 18th Lok Sabha Session Day 4

ETV Bharat Logo

Copyright © 2024 Ushodaya Enterprises Pvt. Ltd., All Rights Reserved.