ETV Bharat / bharat

ಭಾರತದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ 5 ದಿನ ಪ್ರವಾಸ: ಬೆಂಗಳೂರಿಗೂ ಭೇಟಿ ನೀಡಲಿರುವ ಮುಯಿಝು - MALDIVES PRESIDENT VISITS INDIA - MALDIVES PRESIDENT VISITS INDIA

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಭಾರತಕ್ಕೆ ಬರಲಿದ್ದು, 5 ದಿನ ಇಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಪ್ರಧಾನಿ ಮೋದಿ
ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಪ್ರಧಾನಿ ಮೋದಿ (ETV Bharat)
author img

By ETV Bharat Karnataka Team

Published : Oct 6, 2024, 3:10 PM IST

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಇಂದು ಭಾರತಕ್ಕೆ ಬರಲಿದ್ದು, 5 ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದಿನಿಂದ ಅ.10ರ ವರೆಗೆ ಭಾರತದಲ್ಲಿ ಮುಯಿಝು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೀಡಿದ ಅಧಿಕೃತ ಆಹ್ವಾನದ ಮೇರೆಗೆ ಆಗಮಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರ ವಹಿಸಿಕೊಂಡ ನಂತರ ಇದು ಮುಯಿಝು ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಈ ಭೇಟಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಇತರ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ.

ಈ ವರ್ಷದ ಆರಂಭದಲ್ಲಿ, ಮಾಲ್ಡೀವ್ಸ್ ಅಧ್ಯಕ್ಷರು ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದಕ್ಕೂ ಮೊದಲು ಕಳೆದ ವರ್ಷ ಡಿಸೆಂಬರ್ 1 ರಂದು ದುಬೈನಲ್ಲಿ COP28 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಮೊಹಮ್ಮದ್​ ಮುಯಿಝು ಅವರು ಭೇಟಿಯಾಗಿದ್ದರು.

ಭೇಟಿ ಬಗ್ಗೆ ಅಧ್ಯಕ್ಷರ ಕಚೇರಿ (ಮಾಲ್ಡೀವ್ಸ್) ಹೇಳಿಕೆ: "ಮಾಲ್ಡೀವ್ಸ್‌ನ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರವಹಿಸುವ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಅಧ್ಯಕ್ಷ ಡಾ. ಮುಯಿಝು ಬದ್ಧರಾಗಿದ್ದಾರೆ. ನಮ್ಮ ದೇಶಕ್ಕೆ ಅಧ್ಯಕ್ಷರು ಕ್ರಿಯಾತ್ಮಕ ಮತ್ತು ಪೂರ್ವಭಾವಿ ವಿದೇಶಾಂಗ ನೀತಿಯನ್ನು ಖಾತ್ರಿಪಡಿಸಿಕೊಳ್ಳುತ್ತಾರೆ. ಹಾಗೇ, ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಮತ್ತು ಉಭಯ ರಾಷ್ಟ್ರಗಳ ನಡುವಿನ ದೀರ್ಘಕಾಲದ ಸಂಬಂಧವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ" ಎಂದು ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡ ಮಾಲ್ಡೀವ್ಸ್ ಅಧ್ಯಕ್ಷರು 'ಅವರ ದೇಶದ ಉನ್ನತ ಮಟ್ಟದ ನಿಯೋಗದೊಂದಿಗೆ ಮುಂಬೈ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ' ಎಂದು ತಿಳಿಸಿದೆ. "ಈ ಭೇಟಿಯು ಮಾಲ್ಡೀವ್ಸ್‌ನೊಂದಿಗಿನ ತನ್ನ ಸಂಬಂಧಗಳಿಗೆ ಭಾರತವು ನೀಡುವ ಪ್ರಾಮುಖ್ಯತೆಯನ್ನು ಸೂಚಿಸುತ್ತದೆ. ಇದು ಉಭಯ ದೇಶಗಳ ನಡುವಿನ ಸಹಕಾರ ಮತ್ತು ದೃಢವಾದ ಜನರ ಬಾಂಧವ್ಯಕ್ಕೆ ಮತ್ತಷ್ಟು ವೇಗವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ" ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಶುಕ್ರವಾರ ಮಾಧ್ಯಮಗೋಷ್ಟಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: 'ನಮಗೆ ಬೆಂಬಲ ನೀಡಿ, ನೀಡದಿರಿ ನಾವು ಯುದ್ಧ ಗೆದ್ದು ನಾಗರಿಕತೆಯನ್ನು ರಕ್ಷಿಸುತ್ತೇವೆ': ಇಸ್ರೇಲ್ ಪ್ರಧಾನಿ ನೆತನ್ಯಾಹು - Israel PM Netanyahu

ETV Bharat Logo

Copyright © 2024 Ushodaya Enterprises Pvt. Ltd., All Rights Reserved.