ಅಹಮದಾಬಾದ್(ಗುಜರಾತ್): ಅಹಮದಾಬಾದ್‌ನಲ್ಲಿ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮತಹಕ್ಕು ಚಲಾಯಿಸಿದರು. ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾನಿಪ್ ಪ್ರದೇಶದ ನಿಶಾನ್ ಹೈಯರ್ ಸೆಕೆಂಡರಿ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಪ್ರಧಾನಿ ಮತದಾನ ಮಾಡಿದರು.
ಕನ್ನಡದಲ್ಲಿ ಟ್ವೀಟ್: ಮತ ಚಲಾಯಿಸುವುದಕ್ಕೂ ಮುನ್ನ ಪ್ರಧಾನಿ ಮೋದಿ, ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, 'ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಿ. ಮತದಾರರ ಸಕ್ರಿಯ ಭಾಗವಹಿಸುವಿಕೆ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ' ಎಂದು ತಿಳಿಸಿದ್ದಾರೆ.