ETV Bharat / bharat

ವಿದ್ಯಾರ್ಥಿನಿ ಮೇಲೆ ಪ್ರಿನ್ಸಿಪಾಲ್ ಅತ್ಯಾಚಾರ ಆರೋಪ: ವಿಡಿಯೋ ವೈರಲ್, ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು - Principal raped minor student - PRINCIPAL RAPED MINOR STUDENT

ಕೌಶಾಂಬಿಯ ಶಾಲೆಯೊಂದರಲ್ಲಿ ಓದುತ್ತಿದ್ದ ಬಾಲಕಿ ಮೇಲೆ ಪ್ರಿನ್ಸಿಪಾಲ್ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಆರೋಪಿ ಪ್ರಾಂಶುಪಾಲರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಿನ್ಸಿಪಾಲರ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ವಿದ್ಯಾರ್ಥಿನಿ ಮೇಲೆ ಪ್ರಿನ್ಸಿಪಾಲ್ ಅತ್ಯಾಚಾರ ಆರೋಪ: ವಿಡಿಯೋ ವೈರಲ್, ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು
ವಿದ್ಯಾರ್ಥಿನಿ ಮೇಲೆ ಪ್ರಿನ್ಸಿಪಾಲ್ ಅತ್ಯಾಚಾರ ಆರೋಪ: ವಿಡಿಯೋ ವೈರಲ್, ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು (ETV Bharat)
author img

By ETV Bharat Karnataka Team

Published : Jun 8, 2024, 9:11 AM IST

ಕೌಶಾಂಬಿ, ಉತ್ತರಪ್ರದೇಶ: ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರು ಅದೇ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರಾಂಶುಪಾಲರು ವಿದ್ಯಾರ್ಥಿನಿಗೆ ಸಹಾಯ ಮಾಡುವ ನೆಪದಲ್ಲಿ ಬಹಳ ದಿನಗಳಿಂದ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಆರೋಪಿಯ ಅಶ್ಲೀಲ ವಿಡಿಯೋ ಬಹಿರಂಗವಾದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆರೋಪಿತ ಪ್ರಾಂಶುಪಾಲರ ಬಂಧನಕ್ಕೆ ಹಲವು ತಂಡಗಳನ್ನು ನಿಯೋಜಿಸಲಾಗಿದೆ.

ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಪ್ರಾಂಶುಪಾಲರನ್ನು ಡಿ.ಕೆ.ಮಿಶ್ರಾ ಎಂದು ಹೇಳಲಾಗಿದೆ. ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಕುಟುಂಬದ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ. ಪ್ರಾಂಶುಪಾಲರು ಸಹಾಯ ಮಾಡುವ ನೆಪದಲ್ಲಿ ಅವರ ಕುಟುಂಬಕ್ಕೆ ಆಪ್ತರಾಗಿದ್ದರು ಎನ್ನಲಾಗಿದೆ. ಇದಾದ ಬಳಿಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ವಿದ್ಯಾರ್ಥಿನಿಯರ ಮನೆಗೂ ಹೋಗುತ್ತಿದ್ದರು. ಈತ ವಿದ್ಯಾರ್ಥಿನಿಗೆ ಬಹಳ ದಿನಗಳಿಂದ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಪ್ರಾಂಶುಪಾಲರದ್ದು ಎನ್ನಲಾದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎನ್ನಲಾದ ದೃಶ್ಯಗಳು ವೈರಲ್​ ಆಗಿವೆ. ಈ ವಿಡಿಯೋ ಸುದ್ದಿ ಮಾಡುತ್ತಿದ್ದಂತೆ ವಿದ್ಯಾರ್ಥಿನಿಯ ತಾಯಿ ಕೊಖ್ರಾಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿದೆ.

ಕುಟುಂಬಸ್ಥರ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಒ ಅವಧೇಶ್ ವಿಶ್ವಕರ್ಮ ತಿಳಿಸಿದ್ದಾರೆ. ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂಧಿಸಲಾಗುವುದು, ಮತ್ತೊಂದೆಡೆ ಆರೋಪಿ ಪ್ರಾಂಶುಪಾಲರ ಮೇಲೆ ಈಗಾಗಲೇ ಇನ್ನೊಬ್ಬ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪವೂ ಇದೆ. ಮಗದೊಂದು ಕಡೆ ಪ್ರಾಂಶುಪಾಲರಿಗೆ ಗ್ರಾಮಸ್ಥರು ಥಳಿಸಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ.

ಇದನ್ನು ಓದಿ: ಇಂದು ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ: ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಆಗುವ ಸಾಧ್ಯತೆ! - Rahul Gandhi

ETV Bharat Logo

Copyright © 2025 Ushodaya Enterprises Pvt. Ltd., All Rights Reserved.