ETV Bharat / bharat

ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಹಾಳಾಗಲು ರಾಜ್ಯ ಸರ್ಕಾರವೇ ಕಾರಣ: ಪ್ರಿಯಾಂಕಾ ಗಾಂಧಿ ಆರೋಪ

ಉತ್ತರ ಪ್ರದೇಶದಲ್ಲಿ ವಾತಾವರಣ ಹಾಳಾಗಲು ರಾಜ್ಯ ಸರ್ಕಾರವೇ ಕಾರಣ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ (IANS)
author img

By ETV Bharat Karnataka Team

Published : 2 hours ago

ನವದೆಹಲಿ: ಸಂಭಾಲ್ ಹಿಂಸಾಚಾರದ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ನೂತನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರಕಾರವೇ ರಾಜ್ಯದ ವಾತಾವರಣವನ್ನು ಹಾಳು ಮಾಡಿದೆ ಎಂದು ಆರೋಪಿಸಿದ್ದಾರೆ.

ವಿವಾದದ ಬಗ್ಗೆ ಯುಪಿ ಸರ್ಕಾರದ ಮನಸ್ಥಿತಿ ದುರದೃಷ್ಟಕರ ಎಂದು ಪ್ರಿಯಾಂಕಾ ಗಾಂಧಿ ಸೋಮವಾರ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಪೋಸ್ಟ್ ಮಾಡಿದ್ದಾರೆ.

"ಉತ್ತರ ಪ್ರದೇಶದ ಸಂಭಾಲ್​​ನಲ್ಲಿ ಹಠಾತ್ತಾಗಿ ಉದ್ಭವಿಸಿರುವ ವಿವಾದದ ವಿಷಯದಲ್ಲಿ ರಾಜ್ಯ ಸರ್ಕಾರದ ವರ್ತನೆ ತುಂಬಾ ದುರದೃಷ್ಟಕರ. ಇಂತಹ ಸೂಕ್ಷ್ಮ ವಿಷಯದಲ್ಲಿ ಆಡಳಿತವು ಇನ್ನೊಂದು ಪಕ್ಷದವರ ಮಾತನ್ನು ಕೇಳದೇ ಮತ್ತು ಎರಡೂ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಆತುರದಿಂದ ವರ್ತಿಸಿದ ರೀತಿಯನ್ನು ನೋಡಿದರೆ, ಸರ್ಕಾರವೇ ವಾತಾವರಣವನ್ನು ಹಾಳುಮಾಡಿದೆ ಎಂಬುದು ಗೊತ್ತಾಗುತ್ತದೆ" ಎಂದು ಅವರು ಹೇಳಿದ್ದಾರೆ.

ವಿವಾದ ಪರಿಹಾರಕ್ಕೆ ಅಗತ್ಯ ಕಾರ್ಯವಿಧಾನಗಳು ಮತ್ತು ಕರ್ತವ್ಯಗಳನ್ನು ಅನುಸರಿಸುವುದು ಮುಖ್ಯ ಎಂಬುದು ಆಡಳಿತಕ್ಕೆ ತಿಳಿಯಲಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

ಸುಪ್ರೀಂಕೋರ್ಟ್​​​ ಮಧ್ಯ ಪ್ರವೇಶಕ್ಕೆ ಒತ್ತಾಯ: "ಅಧಿಕಾರದಲ್ಲಿ ಕುಳಿತು ತಾರತಮ್ಯ, ದಬ್ಬಾಳಿಕೆ ಮಾಡುತ್ತಿರುವುದು ಮತ್ತು ವಿಭಜನೆಯನ್ನು ಹರಡಲು ಪ್ರಯತ್ನಿಸುವುದು ಜನರ ಹಿತದೃಷ್ಟಿಯಿಂದ ಅಥವಾ ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಗೌರವಾನ್ವಿತ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ನ್ಯಾಯ ಒದಗಿಸಬೇಕಿದೆ" ಎಂದು ಅವರು ತಮ್ಮ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಪ್ರಿಯಾಂಕಾ ಮನವಿ: "ಸಂದರ್ಭ ಏನೇ ಇದ್ದರೂ ಶಾಂತಿ ಕಾಪಾಡುವಂತೆ ನಾನು ರಾಜ್ಯದ ಜನರಿಗೆ ಮನವಿ ಮಾಡುತ್ತೇನೆ" ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಮೊಘಲ್ ಯುಗದ ಜಾಮಾ ಮಸೀದಿಯ ಸಮೀಕ್ಷೆಯ ಸಮಯದಲ್ಲಿ ಉತ್ತರ ಪ್ರದೇಶದ ಸಂಭಾಲ್​ನಲ್ಲಿ ಭಾನುವಾರ ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದಿವೆ. ಹಿಂಸಾಚಾರದಲ್ಲಿ ನಾಲ್ವರು ಯುವಕರು ಸಾವಿಗೀಡಾದ ನಂತರ, ಸೋಮವಾರ ಕಠಿಣ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆಗಳನ್ನು ಜಾರಿಗೊಳಿಸಲಾಗಿದೆ. ಸಂಭಾಲ್​ನಲ್ಲಿ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗಿದ್ದು, ಈ ಪ್ರದೇಶದಲ್ಲಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಹೊರಗಿನವರಿಗೆ ಸಂಭಾಲ್​ ಪ್ರವೇಶ ನಿಷೇಧ: ಡಿಸೆಂಬರ್ 1 ರವರೆಗೆ ಹೊರಗಿನವರು ಸಂಭಾಲ್ ಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಯಾವುದೇ ಜನಪ್ರತಿನಿಧಿಗಳು ಸಹ ಸ್ಥಳಕ್ಕೆ ಭೇಟಿ ನೀಡದಂತೆ ನಿರ್ಬಂಧಿಸಲಾಗಿದೆ ಮತ್ತು ಸಾರ್ವಜನಿಕ ಸಭೆಗಳನ್ನು ಸಹ ನಿಷೇಧಿಸಲಾಗಿದೆ.

ಮೂಲಗಳ ಪ್ರಕಾರ, ಈ ಪ್ರದೇಶದಲ್ಲಿನ ಹಿಂಸಾಚಾರದ ನಂತರ ಭಾನುವಾರ ಪೊಲೀಸರು 21 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು, ಇದರಲ್ಲಿ ಹಲವರ ಮನೆಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಬಂಧಿಸಲ್ಪಟ್ಟ 21 ಜನರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ. ಸಿಸಿಟಿವಿ ಕ್ಯಾಮೆರಾಗಳ ಸಹಾಯದಿಂದ ದುಷ್ಕರ್ಮಿಗಳನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದು, ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯತೆಗಳಿವೆ.

ಇದನ್ನೂ ಓದಿ : ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ', 'ಜಾತ್ಯತೀತ' ಪದ ಸೇರ್ಪಡೆ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ವಜಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.