ETV Bharat / bharat

ವಯನಾಡ್​ ಲೋಕಸಭಾ ಉಪಚುನಾವಣೆ: ಅ.23ರಂದು ಪ್ರಿಯಾಂಕಾ ನಾಮಪತ್ರ ಸಾಧ್ಯತೆ

ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

author img

By ETV Bharat Karnataka Team

Published : 3 hours ago

ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ (ETV Bharat)

ನವದೆಹಲಿ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23 ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಹೀಗಾಗಿ, ಅಂದು ಬೃಹತ್​ ರೋಡ್​ ಶೋ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ.

ವಯನಾಡ್‌ನ ಮತದಾರರು ಗಾಂಧಿ ಕುಟುಂಬದೊಂದಿಗೆ ಹೊಂದಿರುವ ಭಾವನಾತ್ಮಕ ಸಂಬಂಧ ಮತ್ತು 2026ರ ಕೇರಳ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಪ್ರಿಯಾಂಕಾರನ್ನು ಈ ಕ್ಷೇತ್ರದಿಂದ ಕಣಕ್ಕಿಸಲಾಗುತ್ತಿದೆ. ಉಪಚುನಾವಣೆಗೆ ಪಕ್ಷ ಹೆಚ್ಚು ಆದ್ಯತೆ ನೀಡಿದ್ದು, ಆಲಪ್ಪುಳ ಕ್ಷೇತ್ರದ ಸಂಸದ ಹಾಗೂ ಎಐಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಉಪಚುನಾವಣೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.

ವೇಣುಗೋಪಾಲ್ ಮತ್ತು ಕೇರಳದ ಎಐಸಿಸಿ ಉಸ್ತುವಾರಿ ದೀಪಾ ದಾಸ್ ಮುನ್ಷಿ ನೇತೃತ್ವದಲ್ಲಿ ಸೆಪ್ಟೆಂಬರ್ 25ರಂದು ವಯನಾಡ್​ನ ಸ್ಥಳೀಯ ನಾಯಕರ ಜೊತೆ ಸಮಾವೇಶ ನಡೆಸುವ ಮೂಲಕ ಲೋಕಸಭಾ ಉಪಚುನಾವಣೆಗೆ ಸಿದ್ಧತೆ ಪ್ರಾರಂಭಿಸಿದ್ದರು. ವೇಣುಗೋಪಾಲ್ ಅ.17ರಂದು ಕೋಝಿಕ್ಕೋಡ್‌ನ ಮುಕ್ಕಂನಲ್ಲಿ ಯುಡಿಎಫ್ ನಾಯಕರೊಂದಿಗೆ ಸಭೆ ನಡೆಸಿ ಪ್ರಿಯಾಂಕಾಗೆ ಭಾರಿ ಗೆಲುವಿನ ಅಂತರ ತಂದುಕೊಡುವಂತೆ ಮನವಿ ಮಾಡಿದ್ದಾರೆ.

"ವಯನಾಡ್​ ಕಾಂಗ್ರೆಸ್‌ನೊಂದಿಗೆ ಆಳವಾದ ಸಂಪರ್ಕ ಹೊಂದಿರುವ ವಿಶೇಷ ಸ್ಥಳ. ಸಂಸತ್ತಿನಲ್ಲಿ ತಮ್ಮ ಧ್ವನಿಯಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಆಯ್ಕೆ ಮಾಡಲು ಜನತೆ ಉತ್ಸುಕರಾಗಿದ್ದಾರೆ. ಪ್ರಿಯಾಂಕಾ ಲೋಕಸಭೆಯಲ್ಲಿ ನಮ್ಮ ಧ್ವನಿಯಾಗಲು ಸಿದ್ಧರಾಗಿದ್ದಾರೆ, ನಮ್ಮ ಹಕ್ಕುಗಳಿಗಾಗಿ ಹೋರಾಡಲು ಮತ್ತು ನಮ್ಮ ಕಾಳಜಿಗಳನ್ನು ಪರಿಹರಿಸಲು ತಯಾರಾಗಿದ್ದಾರೆ" ಎಂದು ಕೇರಳದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ 'ಈಟಿವಿ ಭಾರತ'ಕ್ಕೆ ತಿಳಿಸಿದ್ದಾರೆ.

ಪ್ರಿಯಾಂಕಾ ವಿರುದ್ಧ ಸತ್ಯಂ ಮೊಕೇರಿ ಕಣಕ್ಕೆ: ಉಪಚುನಾವಣೆಯಲ್ಲಿ ಪ್ರಿಯಾಂಕಾ ವಿರುದ್ಧ ಆಡಳಿತಾರೂಢ ಎಲ್‌ಡಿಎಫ್ ಸಿಪಿಐ ನಾಯಕ ಸತ್ಯಂ ಮೊಕೇರಿ ಅವರನ್ನು ಕಣಕ್ಕಿಳಿಸಿದೆ.

ವಯನಾಡ್ ಉಪ ಚುನಾವಣೆ ನ.13ರಂದು ನಡೆಯಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಉಮೇದುವಾರಿಕೆ ಹಿಂಪಡೆಯಲು ಅ.30 ಕೊನೆಯ ದಿನವಾಗಿದೆ. ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ.

ಕೆಲ ತಿಂಗಳ ಹಿಂದೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಈ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಶಕ್ತಿ ತುಂಬುವ ಕಾರಣಕ್ಕೆ ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಹೀಗಾಗಿ ವಯನಾಡ್​ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಹಿಂದಿನ ಫಲಿತಾಂಶ: 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿ ಅನ್ನಿ ರಾಜಾ ಅವರನ್ನು 3.6 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಬಿಜೆಪಿ ಕೇರಳ ಅಧ್ಯಕ್ಷ ಕೆ.ಸುರೇಂದ್ರನ್ 1.41 ಲಕ್ಷ ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಸಿಪಿಐ ಅಭ್ಯರ್ಥಿ ಪಿ.ಪಿ.ಸುನೀರ್ ಅವರನ್ನು ರಾಹುಲ್ ದಾಖಲೆಯ ಅಂತರದಿಂದ ಸೋಲಿಸಿದ್ದರು.

ಇದನ್ನೂ ಓದಿ: 'ರಾಜ್ಯ ತೊರೆಯಿರಿ ಇಲ್ಲವೇ ಸುಧಾರಿಸಿಕೊಳ್ಳಿ, ಇಲ್ಲದಿದ್ದರೆ': ದುಷ್ಕರ್ಮಿಗಳಿಗೆ ಹರಿಯಾಣ ಸಿಎಂ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.