ETV Bharat / bharat

ಇಂದು ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ: 3 ರಾಜ್ಯಗಳ ಸಿಎಂಗಳು ಸೇರಿ ಘಟಾನುಘಟಿಗಳ ಉಪಸ್ಥಿತಿ - PRIYANKA VISIT WAYANAD

ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕಾಗಿ ಸ್ಥಳೀಯ ಕಾಂಗ್ರೆಸ್ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ
ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ (IANS)
author img

By ETV Bharat Karnataka Team

Published : Oct 22, 2024, 1:47 PM IST

ವಯನಾಡು, ಕೇರಳ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಕೇರಳದ ವಯನಾಡುಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಂದು ನಾಮಪತ್ರ ಸಲ್ಲಿಸಲಿದ್ದು, ತಾಯಿ ಸೋನಿಯಾ ಈ ಸಂದರ್ಭದಲ್ಲಿ ಅವರ ಜೊತೆಗಿರಲಿದ್ದಾರೆ. ಇದಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಮತ್ತು ಇತರ ರಾಷ್ಟ್ರೀಯ ಹಿರಿಯ ಕಾಂಗ್ರೆಸ್ ನಾಯಕರು ಕೂಡ ಬುಧವಾರ ಕೇರಳಕ್ಕೆ ಭೇಟಿ ನೀಡಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್​ ಶೋ: ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆಗೂ ಮುಂಚೆ ಕಲ್ಪೆಟ್ಟಾದಲ್ಲಿ ರೋಡ್ ಶೋ ನಡೆಯಲಿದೆ. ಈ ರೋಡ್ ಶೋನ ಕೊನೆಯ ಕ್ಷಣದ ವ್ಯವಸ್ಥೆಗಳ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕಾಸರಗೋಡು ಲೋಕಸಭಾ ಸದಸ್ಯ ರಾಜ್ ಮೋಹನ್ ಉನ್ನಿಥಾನ್ ಅವರು ಐಎಎನ್​​ಎಸ್ ನೊಂದಿಗೆ ಮಾತನಾಡಿ, "ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಂಗಳವಾರ ಮೈಸೂರಿಗೆ ತಲುಪಿ, ಅವತ್ತು ಸಂಜೆ ಅಲ್ಲಿಂದ ನೇರವಾಗಿ ವಯನಾಡ್​ಗೆ ಆಗಮಿಸಲಿದ್ದಾರೆ" ಎಂದು ಹೇಳಿದರು.

ಬುಧವಾರ ಕಣ್ಣೂರು ತಲುಪಲಿರುವ ಸೋನಿಯಾ: "ಸೋನಿಯಾ ಗಾಂಧಿ ಬುಧವಾರ ಕಣ್ಣೂರಿಗೆ ತಲುಪಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಪ್ರಿಯಾಂಕಾ ನಾಮಪತ್ರ ಸಲ್ಲಿಸುವ ಮುನ್ನ ವಯನಾಡ್ ತಲುಪಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಅವತ್ತು ವಯನಾಡ್​ಗೆ ಬರಲಿದ್ದಾರೆ." ಎಂದು ಉನ್ನಿಥಾನ್ ಮಾಹಿತಿ ನೀಡಿದರು. ಒಂದು ದಶಕದ ನಂತರ ಸೋನಿಯಾ ಗಾಂಧಿ ಅವರು ಕೇರಳಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

ಪ್ರಿಯಾಂಕಾಗೆ ಪತಿ ವಾದ್ರಾ, ಸೋನಿಯಾ - ರಾಹುಲ್ ಸಾಥ್​:​"ಬುಧವಾರ ನಾಮಪತ್ರ ಸಲ್ಲಿಸುವ ಮೊದಲು ಪ್ರಿಯಾಂಕಾ ಮತ್ತು ಇತರ ನಾಯಕರು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಆದರೆ ಸೋನಿಯಾ ಗಾಂಧಿ ರೋಡ್ ಶೋನಲ್ಲಿ ಭಾಗವಹಿಸಲ್ಲ. ಪ್ರಿಯಾಂಕಾ ನಾಮಪತ್ರ ಸಲ್ಲಿಸುವಾಗ ಸೋನಿಯಾ ಅವರೊಂದಿಗೆ ಇರಲಿದ್ದಾರೆ. ಪ್ರಿಯಾಂಕಾ ಅವರೊಂದಿಗೆ ರಾಬರ್ಟ್ ವಾದ್ರಾ ಮತ್ತು ರಾಹುಲ್ ಗಾಂಧಿ ಕೂಡ ಇರಲಿದ್ದಾರೆ" ಎಂದು ಉನ್ನಿಥಾನ್ ಹೇಳಿದರು.

ಪ್ರಿಯಾಂಕಾ ಮತ್ತು ರಾಹುಲ್ ಮಂಗಳವಾರ ರಾತ್ರಿ ಸುಲ್ತಾನ್ ಬತ್ತೇರಿಯಲ್ಲಿ ಉಳಿಯಲಿದ್ದು, ಅವರ ತಾಯಿ ಸೋನಿಯಾ ಗಾಂಧಿ ಬುಧವಾರ ಅವರೊಂದಿಗೆ ಸೇರಲಿದ್ದಾರೆ ಎಂದು ಉನ್ನಿಥಾನ್ ಹೇಳಿದರು. "ಪ್ರಿಯಾಂಕಾ ಮುಂದಿನ ವಾರ ಮತ್ತೆ ವಯನಾಡ್​ಗೆ ಭೇಟಿ ನೀಡಿ, ಆದಷ್ಟೂ ಹೆಚ್ಚು ಜನರನ್ನು ಭೇಟಿಯಾಗಲಿದ್ದಾರೆ. ಅವರು ಐದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬುದರಲ್ಲಿ ನಮಗೆ ಯಾವುದೇ ಸಂದೇಹವಿಲ್ಲ" ಎಂದು ಉನ್ನಿಥಾನ್ ತಿಳಿಸಿದ್ದಾರೆ.

ಇದನ್ನೂ ಓದಿ : ದೇವಭೂಮಿ ಉತ್ತರಾಖಂಡ ಪ್ರವಾಸ: IRCTC ಸೂಪರ್ ಟೂರ್ ಪ್ಯಾಕೇಜ್, ಬೆಲೆಯೂ ಕಡಿಮೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.