ETV Bharat / bharat

ಜಂತರ್​ ಮಂತರ್​ನಲ್ಲಿ ಕಾಂಗ್ರೆಸ್​ ಪ್ರತಿಭಟನೆ: ಕೇಂದ್ರದ ಕಿವಿಗೆ ಬೀಳಲೆಂದು ದೆಹಲಿಗೆ ಬಂದು ಧ್ವನಿ ಎತ್ತಿದ್ದೇವೆ: ಡಿಕೆಶಿ

ದೆಹಲಿಯ ಜಂತರ್​ ಮಂತರ್​ನಲ್ಲಿ ಕರ್ನಾಟಕ ಕಾಂಗ್ರೆಸ್​ ನಾಯಕರಿಂದ ಪ್ರತಿಭಟನೆ ಆರಂಭವಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

author img

By ETV Bharat Karnataka Team

Published : Feb 7, 2024, 11:55 AM IST

Updated : Feb 7, 2024, 2:12 PM IST

Delhi congress protest  ಕಾಂಗ್ರೆಸ್​ ಪ್ರತಿಭಟನೆ  DCM DK Shivakumar  ದೆಹಲಿಯ ಜಂತರ್​ ಮಂತರ್  Karnataka CM Siddaramaia
ಜಂತರ್​ ಮಂತರ್​ನಲ್ಲಿ ಕರ್ನಾಟಕ ಕಾಂಗ್ರೆಸ್​ ನಾಯಕರಿಂದ ಪ್ರತಿಭಟನೆ ಆರಂಭ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್​ ಪಕ್ಷವು ಇಂದು (ಬುಧವಾರ) ದೆಹಲಿಯ ಜಂತರ್ ಮಂತರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದೆ. ಸರ್ಕಾರ ತೆರಿಗೆ ಹಣವನನ್ನು ವರ್ಗಾಯಿಸುತ್ತಿಲ್ಲ ಹಾಗೂ ರಾಜ್ಯಕ್ಕೆ ಹಣಕಾಸಿನ ನೆರವಿನಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡಿದರು.

ಈ ಪ್ರತಿಭಟನೆಗೆ ‘ಚಲೋ ದೆಹಲಿ’ ಎಂದು ಹೆಸರು ಇಡಲಾಗಿದೆ. ಕರ್ನಾಟಕವಲ್ಲದೇ ಕೇರಳ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಕ್ಕೂ ಕೂಡ ಕೇಂದ್ರ ಸರ್ಕಾರವು ತೆರಿಗೆ ಹಣವನ್ನು ಹಂಚಿಕೆ ಮಾಡುವಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿ, ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ- ಡಿಕೆಶಿ: ''ನಮ್ಮ ಕೂಗು ಕೇಂದ್ರ ಸರ್ಕಾರದ ಕಿವಿಗೆ ಬೀಳಲಿ ಎಂದು ದೆಹಲಿಗೆ ಬಂದು ನಾವು ಧ್ವನಿ ಎತ್ತಿದ್ದೇವೆ'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಜೊತೆ ಮಾತಮಾಡಿದ ಅವರು, ಈ ಹೋರಾಟದಿಂದ ಸಮಸ್ಯೆ ಬಗೆಹರಿಯುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ''ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ನಾವು ಇಲ್ಲಿಗೆ ಬಂದು ಹೋರಾಟ ಮಾಡುತ್ತಿದ್ದೇವೆ'' ಎಂದರು.

ರಾಜ್ಯ ಸರ್ಕಾರದ ಹೋರಾಟ ರಾಜಕೀಯ ಸ್ಟಂಟ್ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ''ಬಿಜೆಪಿಯವರು ನಮ್ಮ ಹೋರಾಟದ ಬಗ್ಗೆ ಏನಾದರೂ ಹೇಳಲಿ. ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರು, ನಿರ್ಮಾಪಕರು ಇಲ್ಲ. ಅವರ ಪಕ್ಷದಲ್ಲೇ ನಿರ್ದೇಶಕರು, ನಿರ್ಮಾಪಕರು ಇದ್ದಾರೆ. ನಾವು ನೋಡುತ್ತಿದ್ದೇವೆ. ಅವರು ಭಾವನೆ ಮೇಲೆ ದೇಶ ತೆಗೆದುಕೊಂಡು ಹೋದರೆ, ನಾವು ಜನರ ಬದುಕಿನ ಬಗ್ಗೆ ಗಮನ ಹರಿಸುತ್ತಿದ್ದೇವೆ. ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದವರು ಬೇರೆ ರಾಜ್ಯಗಳಲ್ಲಿ ಅವರೇ ಗ್ಯಾರಂಟಿ ಘೋಷಣೆ ಮಾಡಿದ್ದು ಯಾಕೆ?'' ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಯಿಂದ ಹಣ ಖಾಲಿ ಮಾಡಿಕೊಂಡು ದೆಹಲಿಗೆ ಬಂದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ''ನಮ್ಮ ಹಣ ಖಾಲಿಯಾಗಿಲ್ಲ. ಸರ್ಕಾರ ನಡೆಸುವ ಸಾಮರ್ಥ್ಯ ನಮಗಿದೆ. ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಪಾಲಿನ ಹಣ ನೀಡಲಿ ಸಾಕು'' ಎಂದು ಒತ್ತಾಯಿಸಿದರು.

ಬೇರೆ ರಾಜ್ಯಗಳ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ: ಕೇರಳದ ಪ್ರತಿಭಟನೆ ಬಗ್ಗೆ ಕೇಳಿದಾಗ, ''ನಾನು ಬೇರೆ ರಾಜ್ಯಗಳ ವಿಚಾರವಾಗಿ ಮಾತನಾಡುವುದಿಲ್ಲ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ನಮ್ಮ ಪಾಲಿನ ಹಣ ನಾವು ಕೇಳುತ್ತಿದ್ದೇವೆ. ಬೇರೆ ರಾಜ್ಯಗಳು ಲಾಭ ಪಡೆಯಲಿ. ನಮಗೆ ಅದರ ಬಗ್ಗೆ ಆಕ್ಷೇಪವಿಲ್ಲ. ಕೇಂದ್ರ ಸರ್ಕಾರ ಗುಜರಾತಿಗೆ ಗಿಫ್ಟ್ ಸಿಟಿ ಯೋಜನೆ ನೀಡಿದೆ. ನಮ್ಮ ರಾಜ್ಯಕ್ಕೂ ಒಂದು ಗಿಫ್ಟ್ ಸಿಟಿ ನೀಡಲಿ. ಎಲ್ಲಾ ರಾಜ್ಯಗಳಿಗೂ ಇಂತಹ ಯೋಜನೆ ನೀಡಲಿ. ಭಾರತ ಒಕ್ಕೂಟ ರಾಷ್ಟ್ರ. ನಮಗೂ ಯೋಜನೆ ನೀಡಿ ಎಂದು ನಾವು ಆಗ್ರಹಿಸುತ್ತಿದ್ದೇವೆ. ನಮಗೆ ಅವಕಾಶ ನೀಡಿದರೆ ನಾವು ಅವರಿಗಿಂತ ಹೆಚ್ಚು ಉತ್ತಮವಾಗಿ ಕೆಲಸ ಮಾಡಿ ತೋರಿಸುತ್ತೇವೆ. ನಮ್ಮ ರಾಜ್ಯದ ತೆರಿಗೆ, ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಪಾಲಿನ ಅನುದಾನ ನೀಡಲಿ'' ಎಂದು ತಿಳಿಸಿದರು.

ಕೇರಳ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದೆಯಾ ಎಂದು ಪ್ರಶ್ನೆಗೆ ಉತ್ತರಿಸಿದ ಅವರು, ''ಕೇರಳ ಸರ್ಕಾರ ನಮ್ಮ ಮುಖ್ಯಮಂತ್ರಿಗಳಿಗೆ ಈ ವಿಚಾರವಾಗಿ ಪತ್ರ ಬರೆದಿದ್ದಾರೆ. ಆದರೆ, ನಮ್ಮ ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅವರು ನಮ್ಮ ನೆರೆ ರಾಜ್ಯ. ಅವರನ್ನು ನಾವು ಗೌರವಿಸುತ್ತೇವೆ. ಅವರು ದೇಶದ ಆರ್ಥಿಕತೆಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಎಲ್ಲರೂ ಒಂದೇ, ಯಾರಿಗೆಲ್ಲ ಅನ್ಯಾಯವಾಗಿದೆ ಅವರು ಧ್ವನಿ ಎತ್ತಲಿ'' ಎಂದು ತಿಳಿಸಿದರು.

ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, ''ಬಿಜೆಪಿ ಆಡಳಿತ ಇರುವ ರಾಜ್ಯಗಳು, ಬಿಜೆಪಿಯೇತರ ರಾಜ್ಯಗಳು ಎಂದು ವರ್ಗೀಕರಣ ಮಾಡಿ ನಾವು ರಾಜಕೀಯ ಮಾಡುವುದಿಲ್ಲ. ರಾಜಕೀಯ ಶಾಶ್ವತವಲ್ಲ. 2 ಸಂಸದರಿಂದ ಅವರು 300 ಸಂಸದರಾಗಿದ್ದಾರೆ, 400 ಸಂಸದರಿಂದ ನಾವು 51 ಸಂಸದರಿಗೆ ಇಳಿದಿದ್ದೇವೆ. ನಾಳೆ ನಾವು 300ಕ್ಕೂ ಹೆಚ್ಚು ಸಂಸದರಾಗುತ್ತೇವೆ. ಇದು ರಾಜಕೀಯದ ಭಾಗ'' ಎಂದು ತಿಳಿಸಿದರು.

ಪ್ರಧಾನಿ ಬಳಿ ಸಮಯ ಕೇಳಿದ್ದೇವೆ: ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರಿಗೆ ಮನವಿ ಮಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ''ಖಂಡಿತವಾಗಿಯೂ ಮಾಡುತ್ತೇವೆ. ನಮ್ಮ ಇಲಾಖೆ ವಿಚಾರವಾಗಿ ಮಾತನಾಡಲು ನಾವು ಪ್ರಧಾನಮಂತ್ರಿಗಳ ಬಳಿ ಸಮಯ ಕೇಳಿದ್ದೇವೆ. ಸಮಯ ನೀಡಬಹುದು'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ''ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ''ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣಕಾಸು ಆಯೋಗದ ಮುಂದೆ ಇದೆ. ಕೇಂದ್ರ ಸರ್ಕಾರದ ಕೈಯಲ್ಲಿಲ್ಲ ಎಂದು ಶ್ರೀಮತಿ ನಿರ್ಮಲಾ ಸೀತರಾಮನ್ ಅವರು ಹೇಳಿದ್ದಾರೆ. ನಿಮ್ಮ ಬಳಿ ಅಧಿಕಾರವೇ ಇಲ್ಲವಾದರೆ ಸರ್ಕಾರ ಯಾಕಿರಬೇಕು? ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ'' ಎಂದು ಪ್ರಶ್ನೆ ಮಾಡಿದರು.

ನಮ್ಮ ಬಗ್ಗೆ ಟೀಕೆ ಮಾಡುವ ನೈತಿಕತೆ ಬಿಜೆಪಿ ಸ್ನೇಹಿತರಿಗಿಲ್ಲ: ''ನಮ್ಮ ಹೋರಾಟದ ಬಗ್ಗೆ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇಂತಹ ಟೀಕೆ ಟಿಪ್ಪಣಿಯನ್ನು ನಾವು ಸ್ವಾಗತಿಸುತ್ತೇವೆ. ಟೀಕೆ ಮಾಡುತ್ತಿರುವ ನಮ್ಮ ಬಿಜೆಪಿ ಸ್ನೇಹಿತರಿಗೆ ನಾನು ಕೇಳುವುದಿಷ್ಟೇ. ಜನ ನಿಮ್ಮ 26 ಸಂಸದರನ್ನು ಆರಿಸಿದ್ದಾರೆ. ನೀವು ಒಂದು ದಿನ ರಾಜ್ಯದ ಪರವಾಗಿ ಹೋರಾಟ ಮಾಡಲಿಲ್ಲ. ರಾಜ್ಯದ ಹಿತದ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಲಿಲ್ಲ. ಡಬಲ್ ಇಂಜಿನ್ ಸರ್ಕಾರ ಇದ್ದರೂ ಇಂಜಿನ್​ಗಳು ಫೇಲ್ ಆದವು. ಮುಖ್ಯಮಂತ್ರಿಗಳು ನಿಮ್ಮನ್ನು ಕರೆದುಕೊಂಡು ಹೋದರೂ ನೀವು ಸರ್ಕಾರದ ಮುಂದೆ ತುಟಿ ಬಿಚ್ಚಲಿಲ್ಲ. ಹೀಗಾಗಿ ಗಾಂಧಿ ಪ್ರತಿಮೆ ಮುಂದೆ ನಿಂತು ನೀವು ಪ್ರತಿಭಟನೆ ಮಾಡುವ ನೈತಿಕತೆ ನಿಮಗಿಲ್ಲ.

ನಾವು ನಮ್ಮ ಜನರ ಬೆವರನ ಹಣ ಕೊಡಿ ಎಂದು ಕೇಳುತ್ತಿದ್ದೇವೆ. ದೇಶದಲ್ಲಿ ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಹೀಗಾಗಿ ನಾವು ನಮ್ಮ ಪಾಲನ್ನು ಕೇಳುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಬರ ಆವರಿಸಿದೆ. ನಮ್ಮ ಕೃಷಿ ಸಚಿವರು, ಕಂದಾಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಬರದ ವಿಚಾರವಾಗಿ ವರದಿ ನೀಡಿದ್ದಾರೆ. ನಮ್ಮ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ಕೋರಿದ್ದಾರೆ. ಆದರೂ ಇದುವರೆಗೂ ನಯಾ ಪೈಸೆ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ'' ಎಂದು ದೂರಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ಹಣ ದುರುಪಯೋಗ ಆರೋಪ: ಬಿಜೆಪಿ ಸಂಸದರಿಂದ ದೆಹಲಿಯಲ್ಲಿ ಪ್ರತಿಭಟನೆ

Last Updated : Feb 7, 2024, 2:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.