ETV Bharat / bharat

ಲೋಕಸಭೆ ಚುನಾವಣೆ: ತೆಲಂಗಾಣದ ಖಮ್ಮಂ ಅಥವಾ ಭುವನಗಿರಿಯಿಂದ ರಾಹುಲ್ ಗಾಂಧಿ ಸ್ಪರ್ಧೆ? - Khammam or Bhuvanagiri

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತೆಲಂಗಾಣದ ಖಮ್ಮಂ ಅಥವಾ ಭುವನಗಿರಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ  ಲೋಕಸಭೆ ಚುನಾವಣೆ  Rahul contest from Telangana  Khammam or Bhuvanagiri  Congress leader Rahul Gandhi
ಲೋಕಸಭೆ ಚುನಾವಣೆ: ತೆಲಂಗಾಣದ ಖಮ್ಮಂ ಅಥವಾ ಭುವನಗಿರಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸ್ಪರ್ಧೆ?
author img

By ETV Bharat Karnataka Team

Published : Feb 27, 2024, 11:37 AM IST

ಹೈದರಾಬಾದ್: ''ತೆಲಂಗಾಣದಿಂದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ'' ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ರಾಜ್ಯದಿಂದ ಗರಿಷ್ಠ ಸಂಸದ ಸ್ಥಾನಗಳನ್ನು ಗೆಲ್ಲಲೇಬೇಕು ಎಂಬ ಹಠ ಹಿಡಿದಿರುವ ಕಾಂಗ್ರೆಸ್ ಪಕ್ಷ, ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದೆ. ಬಹುತೇಕ ಸ್ಥಾನಗಳ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ನಿರ್ಧಾರಕ್ಕೆ ಬರಲಾಗಿದೆ. ತೆಲಂಗಾಣದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದರೆ ಇಲ್ಲಿ ಪಕ್ಷದ ಪ್ರಭಾವ ಹೆಚ್ಚಲಿದೆ ಎಂದು ಕಾಂಗ್ರೆಸ್ ಮೂಲಗಳು ಭರವಸೆ ವ್ಯಕ್ತಪಡಿಸಿವೆ.

ಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ ರೇವಂತ್ ರೆಡ್ಡಿ, ಉಪ ಮುಖ್ಯಮಂತ್ರಿ ಭಟ್ಟಿವಿಕ್ರಮಮಾರ್ಕ ಮತ್ತು ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಕೆಲವು ವರ್ಷಗಳ ಹಿಂದೆ ತೆಲಂಗಾಣ ರಾಜ್ಯದಿಂದ ಸ್ಪರ್ಧಿಸುವಂತೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಆದರೆ, ಆರೋಗ್ಯದ ಕಾರಣದಿಂದ ನೇರ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸದೇ ಕ್ಷೇತ್ರಕ್ಕೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಖಮ್ಮಂ ಅಥವಾ ಭುವನಗಿರಿಯಿಂದ ಸ್ಪರ್ಧೆ ಸಾಧ್ಯತೆ?: ತೆಲಂಗಾಣ ರಾಜ್ಯದಿಂದ ರಾಜ್ಯಸಭಾ ಸದಸ್ಯೆಯಾಗಿ ನಿಲ್ಲುವಂತೆ ಒತ್ತಾಯಿಸಿದ್ದರೂ, ಸೋನಿಯಾ ಗಾಂಧಿ ರಾಜಸ್ಥಾನದಿಂದ ಆಯ್ಕೆ ಮೇಲ್ಮನೆಗೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹೆಸರು ಮುನ್ನೆಲೆಗೆ ಬಂದಿದೆ. ಪ್ರಸ್ತುತ ಕೇರಳದ ವಯನಾಡು ಸಂಸದರಾಗಿರುವ ರಾಹುಲ್ ಅವರನ್ನು ತೆಲಂಗಾಣದಿಂದ ಸ್ಪರ್ಧಿಸುವಂತೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಇತರರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೆ ಆಯಾ ನಾಯಕರ ಜೊತೆ ರಾಹುಲ್ ಒಪ್ಪಿಗೆ ನೀಡಿದ್ದಾರೆ ಎಂದು ಸಂಬಂಧಪಟ್ಟ ಮೂಲಗಳಿಂದ ಗೊತ್ತಾಗಿದೆ. ಪ್ರಮುಖರು ತಿಳಿಸಿರುವ ಪ್ರಕಾರ, ಖಮ್ಮಂ ಅಥವಾ ಭುವನಗಿರಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಇದಲ್ಲದೇ ಉತ್ತರ ಪ್ರದೇಶದ ಅಮೇಥಿಯಿಂದಲೂ ಸ್ಪರ್ಧಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಇದೆ.

ವಯನಾಡು ಕ್ಷೇತ್ರಕ್ಕೆ ಡಿ.ರಾಜಾ ಅವರ ಪತ್ನಿ ಅಭ್ಯರ್ಥಿ ( ದೆಹಲಿ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡಿನಲ್ಲಿ ಸ್ಪರ್ಧಿಸುತ್ತಿರುವುದಾಗಿ ಸಿಪಿಐ ಹೇಳಿದೆ. ಡಿ.ರಾಜಾ ಅವರ ಪತ್ನಿ ಯಾನಿ ರಾಜಾ ಅವರನ್ನು ಪಕ್ಷ ತನ್ನ ಅಭ್ಯರ್ಥಿ ಎಂದು ಘೋಷಿಸಿದೆ. ಕಾಂಗ್ರೆಸ್ ಪ್ರಸ್ತುತ ವಿರೋಧ ಪಕ್ಷ 'ಇಂಡಿಯಾ' ಮೈತ್ರಿಕೂಟದ ಇತರ ಪಕ್ಷಗಳೊಂದಿಗೆ ಸೀಟು ಹೊಂದಾಣಿಕೆ ಮಾತುಕತೆ ನಡೆಸುತ್ತಿದೆ. ಇದೇ ವೇಳೆ ಈ ಮೈತ್ರಿಕೂಟದಲ್ಲಿರುವ ಸಿಪಿಐ ತನ್ನ ಅಭ್ಯರ್ಥಿಯನ್ನು ಘೋಷಿಸಿರುವುದು ಗಮನಾರ್ಹದ ಸಂಗತಿಯಾಗಿದೆ. ಅದೇ ರೀತಿ ಈ ಮೈತ್ರಿಕೂಟದ ಪಾಲುದಾರರಾಗಿರುವ ಕೇರಳದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ ಮುಸ್ಲಿಂ ಮತದಾರರೇ ಹೆಚ್ಚಿರುವ ವಯನಾಡಿನಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತೊಮ್ಮೆ ವಯನಾಡು ಕ್ಷೇತ್ರದಿಂದ ಸ್ಪರ್ಧಿಸದಿರುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸೋಮವಾರ ಬಹಿರಂಗಪಡಿಸಿವೆ.

ಇದನ್ನೂ ಓದಿ: 'ಕುಟುಂಬದ ಮಹಿಳೆಗೆ ಮಾಸಿಕ ₹5 ಸಾವಿರ': ಆಂಧ್ರಪ್ರದೇಶದಲ್ಲೂ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.