ETV Bharat / bharat

ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ: ಮನಮೋಹನ್ ಸಿಂಗ್ ನಿವಾಸಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಭೇಟಿ, ನಮನ - RAHUL SINGH RESIDENCE TO PAY HOMAGE

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥವಾಗಿ ಕೇಂದ್ರ ಸರ್ಕಾರವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

MANMOHAN-CONG-RAHUL
ಮನಮೋಹನ್ ಸಿಂಗ್ ನಿವಾಸಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಭೇಟಿ: ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ ಸಾಧ್ಯತೆ (IANS)
author img

By PTI

Published : 16 hours ago

Updated : 15 hours ago

ನವದೆಹಲಿ: ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ಸೇರಲಿದೆ ಎಂದು ಅವರು ತಿಳಿಸಿದ್ದಾರೆ. ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು.

ರಾಷ್ಟ್ರೀಯ ಧ್ವಜವನ್ನು ಭಾರತದಾದ್ಯಂತ ಶೋಕಾಚರಣೆಯ ದಿನಗಳಲ್ಲಿ ಅದನ್ನು ನಿಯಮಿತವಾಗಿ ಹಾರಿಸಲಾಗುವ ಎಲ್ಲ ಕಟ್ಟಡಗಳ ಮೇಲೆ ಅರ್ಧ ಮಟ್ಟಕ್ಕೆ ಹಾರಿಸಲಾಗುತ್ತದೆ ಮತ್ತು ರಾಷ್ಟ್ರೀಯ ಶೋಕಾಚರಣೆಯ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ.

ಮನಮೋಹನ್​ ಸಿಂಗ್​ ಅವರು, ತಮ್ಮ ಪತ್ನಿ ಗುರುಶರಣ್ ಕೌರ್ ಮತ್ತು ಅವರ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯ ವ್ಯವಸ್ಥೆಯನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರದ ನಾಯಕರು ಅವರ ಸ್ಮರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸಿಂಗ್​​​​​​​​​​​​ ಅವರಿಗೆ ನಮನ ಸಲ್ಲಿಸಿದ ರಾಹುಲ್​ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ರಾತ್ರಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.

2004 ರಿಂದ 2014 ರವರೆಗೆ ಎರಡು ಬಾರಿ ಮಾಜಿ ಪ್ರಧಾನಿಯಾಗಿದ್ದ ಸಿಂಗ್ ಅವರು ದೆಹಲಿಯ ಏಮ್ಸ್‌ನಲ್ಲಿ ನಿಧನರಾದರು. ಖರ್ಗೆ ಮತ್ತು ರಾಹುಲ್ ಗಾಂಧಿ ಇಬ್ಬರೂ ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸಲು ಬೆಳಗಾವಿಯಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆ ನವದೆಹಲಿಗೆ ಧಾವಿಸಿ ಬಂದು ಅಗಲಿದ ಚೇತನಕ್ಕೆ ನಮನ ಸಲ್ಲಿಕೆ ಮಾಡಿ ಸಂತಾಪ ಸೂಚಿಸಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅವರ ಮನೆಗೆ ತರಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.

ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ದೇಶದ ಆರ್ಥಿಕತೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದಿದ್ದರು. ಕಾಂಗ್ರೆಸ್​ ನೇತೃತ್ವದಲ್ಲಿ 2004ರಿಂದ 2014ರ ವರೆಗಿನ ಯುಪಿಎ ಸರ್ಕಾರದ ಎರಡು ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿದ್ದರು. ಬಳಿಕ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಈ ವರ್ಷದ ಏಪ್ರಿಲ್​​ನಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದಿದ್ದರು.

ಇದನ್ನು ಓದಿ:ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್​ ಸಿಂಗ್ ಇನ್ನಿಲ್ಲ; ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರಿಂದ ಕಂಬನಿ

Last Updated : 15 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.