ಶಿಮ್ಲಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದಲ್ಲಿ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 40 ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಅನೇಕ ಮನೆಗಳು ಮತ್ತು ರಸ್ತೆಗಳು ಕೊಚ್ಚಿಹೋಗಿವೆ. ಎರಡು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಚಿವಾಲಯದಲ್ಲಿ ತುರ್ತು ಸಭೆ ಕರೆದಿದ್ದಾರೆ.
शिमला की रामपुर तहसील, मंडी ज़िले की पधर तहसील और कुल्लू के गांव जाओन, निरमंड में बादल फटने से 50 से अधिक लोगों के लापता होने का अत्यंत दुखद समाचार मिला।
— Sukhvinder Singh Sukhu (@SukhuSukhvinder) August 1, 2024
NDRF, SDRF, पुलिस, होम गार्ड और फायर सर्विसेज की टीमें राहत, खोज और बचाव कार्य में जुटी हुई हैं। स्थानीय प्रशासन को राहत एवं… pic.twitter.com/t3iUiFuIqn
ಶಿಮ್ಲಾ ಜಿಲ್ಲೆಯ ರಾಮ್‌ಪುರ ಉಪವಿಭಾಗದ ಸಮಗ್ ಖುದ್ (ನಲ್ಲಾ)ನಲ್ಲಿ ಒಂದು ಮೇಘಸ್ಫೋಟ ಉಂಟಾಗಿದೆ. ಇಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 28 ಮಂದಿ ನಾಪತ್ತೆಯಾಗಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ಹೇಳಿದ್ದಾರೆ.
ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಮಾತನಾಡಿ, ಬುಧವಾರ-ಗುರುವಾರ ಮಧ್ಯರಾತ್ರಿ 1 ಗಂಟೆಗೆ ಈ ಮೇಘಸ್ಫೋಟವು ಸಂಭವಿಸಿದೆ. ರಸ್ತೆಗಳು ಕೊಚ್ಚಿ ಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಿನದ್ದಾಗಿದೆ ಎಂದು ವಿವರಿಸಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಭಾರೀ ಮಳೆ ಮತ್ತು ಮೇಘಸ್ಫೋಟದಿಂದಾಗಿ ಭಾರಿ ಹಾನಿಯಾಗಿದೆ ಎಂದು ಕಂದಾಯ ಸಚಿವ ಜಗತ್ ಸಿಂಗ್ ನೇಗಿ ಮಾಹಿತಿ ನೀಡಿದ್ದಾರೆ.
ನಾಪತ್ತೆಯಾದವರ ಪತ್ತೆಗೆ ಡ್ರೋನ್ ಬಳಕೆ: ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗಿದೆ. ನಾಲ್ಕು ಮೋಟಾರು ಸೇತುವೆಗಳು ಮತ್ತು ಕಾಲು ಸೇತುವೆಗಳು ಕೊಚ್ಚಿಹೋಗಿವೆ. ಸೇಬು ಬೆಳೆ ಕೂಡ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿವೆ. ಡಿಸಿ ಮತ್ತು ಎಸ್ಪಿ ಸ್ಥಳದಲ್ಲೇ ಇದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್, ಪೊಲೀಸರು ಮತ್ತು ಗೃಹ ರಕ್ಷಕರ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ನಾಪತ್ತೆಯಾದವರ ಪತ್ತೆಗೆ ಡ್ರೋನ್‌ಗಳ ಸಹಾಯ ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
बीती रात प्रदेश में कई स्थानों पर बादल फटने की दुखद घटनाओं के बाद सचिवालय में अधिकारियों के साथ आपातकालीन बैठक की जा रही है।
— Sukhvinder Singh Sukhu (@SukhuSukhvinder) August 1, 2024
प्रदेश सरकार बचाव व राहत कार्य में जुटी हुई है। प्रशासन को आवश्यक दिशा-निर्देश दिये गए हैं।
बैठक में राजस्व मंत्री जगत सिंह नेगी जी भी मौजूद हैं। pic.twitter.com/trSPiljZ3J
ಇದನ್ನೂ ಓದಿ: ವಯನಾಡ್ ಭೂಕುಸಿತ; 22 ಮಕ್ಕಳು ಸೇರಿ 243 ಮಂದಿ ಸಾವು; ರಕ್ಷಣಾ ಕಾರ್ಯಕ್ಕೆ ತಾತ್ಕಾಲಿಕ ಬೈಲಿ ಸೇತುವೆ ನಿರ್ಮಿಸಿದ ಸೇನೆ
ಮಂಡಿ ಜಿಲ್ಲೆಯ ಪಾಧಾರ್‌ನ ತಾಲಾತುಖೋಡ್ ಪ್ರದೇಶದಲ್ಲಿ ಬುಧವಾರ ರಾತ್ರಿ ಮತ್ತೊಂದು ಮೇಘಸ್ಫೋಟ ಸಂಭವಿಸಿದೆ. ಇದರಲ್ಲಿ ಒಬ್ಬರು ಸಾವನ್ನಪ್ಪಿ, ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ. ಕೆಲವು ಮನೆಗಳು ಕುಸಿದಿದ್ದು, ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಮಂಡಿ ಜಿಲ್ಲಾಡಳಿತವು ಭಾರತೀಯ ವಾಯುಪಡೆ ಮತ್ತು ಎನ್‌ಡಿಆರ್‌ಎಫ್‌ನಿಂದ ನೆರವು ಕೋರಿದೆ. ಬಿಯಾಸ್ ನದಿ ಉಕ್ಕಿ ಹರಿಯುತ್ತಿರುವುದರಿಂದ ಚಂಡೀಗಢ - ಮನಾಲಿ ರಾಷ್ಟ್ರೀಯ ಹೆದ್ದಾರಿ ಹಲವು ಕಡೆ ಹಾನಿಯಾಗಿದೆ.
2 ಜಲವಿದ್ಯುತ್ ಯೋಜನೆಗಳಿಗೆ ಧಕ್ಕೆ: ಕುಲುವಿನ ಭಾಗಿಪುಲ್‌ನಕಲ್ಲೂ ಮನೆಗಳಿಗೆ ಹಾನಿಯಾಗಿದೆ. ಜೊತೆಗೆ ಕುಲುವಿನ ಭುಂತರ್ ಪ್ರದೇಶದಲ್ಲಿ ಪಾರ್ವತಿ ನದಿ ಉಕ್ಕಿ ಹರಿಯುತ್ತಿದ್ದು, ಮಲಾನಾ ಖುದ್ ಪ್ರವಾಹ ಉಂಟಾಗಿದೆ. ಇದೇ ವೇಳೆ, ಮಲಾನಾ-1 ಮತ್ತು ಮಲಾನಾ-2 ಜಲವಿದ್ಯುತ್ ಯೋಜನೆಗಳಿಗೆ ಧಕ್ಕೆಯಾಗಿದೆ ಎಂದು ವರದಿಯಾಗಿದೆ.
ಮತ್ತೊಂದೆಡೆ, ಭೂಕುಸಿತದಿಂದಾಗಿ ಮನಾಲಿ-ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಹಲವಾರು ಸ್ಥಳಗಳಲ್ಲಿ ಕುಸಿದು ಬಿದ್ದಿದೆ. ಬಿಯಾಸ್ ನದಿಯ ನೀರು ಮಂಡಿಯ ಪಾಂಡೋದಲ್ಲಿ ಕೆಲವು ಮನೆಗಳಿಗೆ ನುಗ್ಗಿದೆ. ಈ ಪ್ರದೇಶದಲ್ಲಿ ಕೆಲವರು ನಾಪತ್ತೆಯಾಗಿದ್ದು, ಮನೆಗಳು ಮತ್ತು ಅಂಗಡಿಗಳು ಕೊಚ್ಚಿಹೋಗಿರುವ ಬಗ್ಗೆ ವರದಿಯಾಗಿದೆ. ಈ ಪೀಡಿತ ಪ್ರದೇಶಗಳಲ್ಲಿನ ಎಲ್ಲ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಉತ್ತರಾಖಂಡದಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಮನೆಗಳು, ಹೋಟೆಲ್ಗಳು: ಐವರ ದುರ್ಮರಣ