ETV Bharat / bharat

ಸೋನಿಯಾ ಗಾಂಧಿ, ಅಶ್ವಿನಿ ವೈಷ್ಣವ್ ಸೇರಿ 14 ರಾಜ್ಯಸಭಾ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ - Sonia Gandhi takes oath - SONIA GANDHI TAKES OATH

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ 14 ಮಂದಿ ಗುರುವಾರ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

SONIA GANDHI TAKES OATH
SONIA GANDHI TAKES OATH
author img

By PTI

Published : Apr 4, 2024, 12:32 PM IST

Updated : Apr 4, 2024, 2:16 PM IST

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರೆ, ಅಶ್ವಿನಿ ವೈಷ್ಣವ್ ಒಡಿಶಾದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೇಲ್ಮನೆಗೆ ಹೊಸದಾಗಿ ಚುನಾಯಿತರಾದ ಉಭಯ ಸದಸ್ಯರೊಂದಿಗೆ 14 ಹೊಸಬರು ಸಹ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಮೇಲ್ಮನೆಯ ಈ 14 ಹೊಸ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.

ಅದೇ ಸದನದ ಸದಸ್ಯರಾಗಿ ಕರ್ನಾಟಕದಿಂದ ಕಾಂಗ್ರೆಸ್ ನಾಯಕ ಅಜಯ್ ಮಾಕನ್, ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ನಾಯಕ ಆರ್‌ಪಿಎನ್ ಸಿಂಗ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಸದಸ್ಯ ಸಮಿಕ್ ಭಟ್ಟಾಚಾರ್ಯ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆಗೆ ವೈಎಸ್‌ಆರ್‌ಸಿಪಿ ನಾಯಕರಾದ ಗೋಲಾ ಬಾಬು ರಾವ್, ಮೇಧಾ ರಘುನಾಥ್ ರೆಡ್ಡಿ ಮತ್ತು ಯೆರುಂ ವೆಂಕಟ್ ಸುಬ್ಬಾ ರೆಡ್ಡಿ ಅವರು ಆಂಧ್ರಪ್ರದೇಶ ರಾಜ್ಯವನ್ನು ಪ್ರತಿನಿಧಿಸುವ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಜ್ಯಸಭಾ ಸದಸ್ಯರೆಲ್ಲರೂ ಒಂದು ಗ್ರೂಪ್​ ಫೋಟೋ ತೆಗೆಸಿಕೊಂಡರು.

ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ರಾಜ್ಯಸಭಾ ಸದಸ್ಯೆಯಾಗಿದ್ದಾರೆ. ಅವರು ಸಭಾನಾಯಕ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಮತ್ತು ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಕೂಡ ಉಪಸ್ಥಿತರಿದ್ದರು.

ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದಿರುವ 77 ವರ್ಷ ವಯಸ್ಸಿನ ಅನುಭವಿ ರಾಜಕಾರಣಿ ಸೋನಿಯಾ ಗಾಂಧಿ ರಾಜ್ಯಸಭೆ ಮೂಲಕ ಇದೀಗ ಸಂಸತ್ ಪ್ರವೇಶಿಸಿದ್ದಾರೆ. 2004ರಿಂದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. ತಮ್ಮ ಆರೋಗ್ಯದ ದೃಷ್ಟಿ ಹಿನ್ನೆಲೆ ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನ ಬಯಸಿ ನಾಮಪತ್ರ ಸಲ್ಲಿಸಿದ್ದರು. ಅದಕ್ಕೂ ಮುನ್ನ ತಾವು ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿ ಕ್ಷೇತ್ರದ ಮತದಾರರಿಗೆ ಬಹಿರಂಗ ಪತ್ರ ಸಹ ಬರೆದಿದ್ದರು. ''ಆರೋಗ್ಯ ಮತ್ತು ವಯಸ್ಸಿನ ಸಮಸ್ಯೆಗಳಿರುವ ಕಾರಣ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ'' ಎಂದು ಆ ಪತ್ರದಲ್ಲಿ ಅವರು ಉಲ್ಲೇಖ ಮಾಡಿದ್ದರು.

ಗಾಂಧಿ ಕುಟುಂಬದ ಎರಡನೇ ಸದಸ್ಯರಾಗಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಶುಭ ಕೋರಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಅಧ್ಯಾಯ ಆರಂಭಿಸಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ನನ್ನ ಶುಭ ಹಾರೈಕೆಗಳು. ಅವರು ಲೋಕಸಭೆಗೆ 25 ವರ್ಷಗಳನ್ನು ಪೂರೈಸಿದ್ದಾರೆ. ಈಗ ಅವರು ನನ್ನ ಸಹ ಸದಸ್ಯರು. ಅವರ ಉಪಸ್ಥಿತಿಗಾಗಿ ನಾನು ಮೇಲ್ಮನೆಯಲ್ಲಿ ಕಾಯುತ್ತಿದ್ದೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಕ್ಸ್​​ (ಟ್ವೀಟ್)ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸೋನಿಯಾ ಗಾಂಧಿ, ನಡ್ಡಾ, ವೈಷ್ಣವ್​ ಸೇರಿ 41 ಮಂದಿ ರಾಜ್ಯಸಭೆಗೆ ಅವಿರೋಧ ಆಯ್ಕೆ

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್, ಇತ್ತೀಚೆಗೆ ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ ಅಶೋಕ್​ ಚವಾಣ್​ ಸೇರಿದಂತೆ 41 ಜನರು ವಿವಿಧ ರಾಜ್ಯಗಳಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

Last Updated : Apr 4, 2024, 2:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.