ETV Bharat / bharat

ಒಂದು ರಾಷ್ಟ್ರ, ಒಂದು ಚುನಾವಣೆ: 191 ದಿನಗಳಲ್ಲಿ ಅಧ್ಯಯನ ವರದಿ ಸಲ್ಲಿಸಿದ ಕೋವಿಂದ್ ಸಮಿತಿ - One Nation One Poll

ಒಂದು ರಾಷ್ಟ್ರ ಒಂದು ಚುನಾವಣೆಯ ಸಾಧ್ಯತೆಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಅಧ್ಯಯನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ
ಒಂದು ರಾಷ್ಟ್ರ, ಒಂದು ಚುನಾವಣೆ
author img

By PTI

Published : Mar 14, 2024, 12:47 PM IST

ನವದೆಹಲಿ: ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಗುರುವಾರ ತನ್ನ ವರದಿಯನ್ನು ಸಲ್ಲಿಸಿದೆ.

ಸಮಿತಿಯು 18,626 ಪುಟಗಳನ್ನು ಒಳಗೊಂಡ ವರದಿಯನ್ನು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತು. ಕೋವಿಂದ್​ ನೇತೃತ್ವದ ಸಮಿತಿಯು ವಿವಿಧ ರಾಜಕೀಯ ನಾಯಕರು, ವಿಶ್ಲೇಷಕರು, ನ್ಯಾಯಶಾಸ್ತ್ರಜ್ಞರು, ಹಣಕಾಸು ತಜ್ಞರು, ಸಾರ್ವಜನಿಕರ ಅಭಿಪ್ರಾಯ, ಸಲಹೆಗಳನ್ನು ಸಂಗ್ರಹಿಸಿ 191 ದಿನಗಳಲ್ಲಿ ವರದಿ ಸಿದ್ಧಪಡಿಸಿದೆ.

ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸಲು ಸಾಧ್ಯವೇ ಎಂಬ ಬಗ್ಗೆ ವರದಿ ನೀಡಲು ಸೆಪ್ಟೆಂಬರ್ 2, 2023 ರಂದು ಉನ್ನತ ಮಟ್ಟದ ಸಮತಿಯನ್ನು ರಚಿಸಲಾಯಿತು. 8 ಸದಸ್ಯರ ಈ ಸಮಿತಿಗೆ ಅಧ್ಯಕ್ಷರಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ನೇಮಿಸಲಾಗಿದೆ. ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ. ಸುಭಾಷ್ ಸಿ. ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇದ್ದಾರೆ.

ಒಂದು ದೇಶ, ಒಂದು ಚುನಾವಣೆ ವಿಷಯವಾಗಿ ಸಮಿತಿ ನಡೆಸುವ ಸಭೆಗಳಲ್ಲಿ ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ನ್ಯಾಯಾಂಗ ಇಲಾಖೆಯ ಕಾರ್ಯದರ್ಶಿ ನಿತೇನ್ ಚಂದ್ರ ಅವರು ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಒಂದು ದೇಶ ಒಂದು ಚುನಾವಣೆಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್​ ತನ್ನ ಸದಸ್ಯತ್ವದಿಂದ ಹಿಂದೆ ಸರಿದಿತ್ತು. ಅಧೀರ್​ ರಂಜನ್​ ಚೌಧರಿ ಅವರು ಈ ಸಮಿತಿಯಿಂದ ಹೊರಗುಳಿದಿದ್ದರು.

ಇದನ್ನೂ ಓದಿ: 'One Nation, One Election' : ಕಾನೂನು ಆಯೋಗದ ಜೊತೆ ಕೋವಿಂದ್ ನೇತೃತ್ವದ​ ಸಮಿತಿ ಸಭೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.