ETV Bharat / bharat

ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್​ ಸ್ಫೋಟ: 17 ಕಾರ್ಮಿಕರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ - Reactor Explosion

author img

By ETV Bharat Karnataka Team

Published : Aug 21, 2024, 9:11 PM IST

Updated : Aug 22, 2024, 6:50 AM IST

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿರುವ ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್​ ಸ್ಫೋಟವಾಗಿದೆ. 17 ಕಾರ್ಮಿಕರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ವೇಳೆ ಕಂಪನಿಯಲ್ಲಿ 300 ಜನರು ಕೆಲಸ ನಿರ್ವಹಿಸುತ್ತಿದ್ದರು.

ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್​ ಸ್ಫೋಟ
ಆಂಧ್ರದ ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್​ ಸ್ಫೋಟ (ETV Bharat)

ಅನಕಪಲ್ಲಿ (ಆಂಧ್ರ ಪ್ರದೇಶ): ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಯುತಪುರಂನಲ್ಲಿನ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಬುಧವಾರ ರಿಯಾಕ್ಟರ್​​ ಸ್ಫೋಟಗೊಂಡು ಭಾರೀ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಸದ್ಯ 17 ಮಂದಿ ಸಾವನ್ನಪ್ಪಿದ್ದರೆ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರೀ ಪ್ರಮಾಣದಲ್ಲಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಮಧ್ಯಾಹ್ನದ ಊಟದ ವಿರಾಮದ ವೇಳೆ ರಿಯಾಕ್ಟರ್ ಸ್ಫೋಟಗೊಂಡು, ಬೆಂಕಿ ಹೊತ್ತಿಕೊಂಡಿತ್ತು. ಕಂಪನಿಯ ಆವರಣದಲ್ಲಿ ದಟ್ಟ ಹೊಗೆ ಆವರಿಸಿತ್ತು. ದೊಡ್ಡ ಸದ್ದು ಕೇಳಿ ವಿರಾಮದಲ್ಲಿದ್ದ ಕಾರ್ಮಿಕರು ಬೆಚ್ಚಿಬಿದ್ದರು. ಕೆಲವರು ಕಂಪನಿಯ ಒಳಗಿನಿಂದ ಕಿರುಚುತ್ತ ಓಡಿ ಬಂದರು. ರಿಯಾಕ್ಟರ್ ಸ್ಫೋಟದ ಸಮಯದಲ್ಲಿ 300 ಕಾರ್ಮಿಕರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ದೇಹಗಳು ಛಿದ್ರ ಛಿದ್ರ: ರಿಯಾಕ್ಟರ್ ಸ್ಫೋಟದಿಂದಾಗಿ ಕಂಪನಿಯ ಮೊದಲ ಮಹಡಿಯ ಸ್ಲ್ಯಾಬ್ ಕುಸಿದಿದೆ. ಸ್ಫೋಟದ ತೀವ್ರತೆಗೆ ಕಾರ್ಮಿಕರು ದೇಹಗಳು ಛಿದ್ರವಾಗಿವೆ. ಐವರ ಮೃತದೇಹಗಳನ್ನು ಅನಕಾಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಗೆ ಮತ್ತು ಬೆಂಕಿ ಆವರಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಗೊಂಡವರ ಪೈಕಿ ಐವರಿಗೆ ಶೇ.60ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿವೆ. ಸ್ಫೋಟದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಶಂಕಿಸಲಾಗಿದೆ.

ವಿಷಯ ತಿಳಿದ ಅಧಿಕಾರಿಗಳು ದುರಂತ ಸಂಭವಿಸಿದ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರಿಯಾಕ್ಟರ್​ ಸ್ಫೋಟಗೊಳ್ಳಲು ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಸಿಎಂ ನಾಯ್ಡು ದಿಗ್ಭ್ರಮೆ: ಫಾರ್ಮಾ ಕಂಪನಿಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಸ್ಫೋಟ ಘಟನೆ ಕುರಿತು ಜಿಲ್ಲಾಧಿಕಾರಿ ಜತೆ ಮಾತನಾಡಿದ್ದು, ತಕ್ಷಣದ ಪರಿಹಾರ ಕ್ರಮಗಳಿಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: ಬದ್ಲಾಪುರದಲ್ಲಿ ಇಂಟರ್ನೆಟ್​ ಸ್ಥಗಿತ; ಶಾಲೆಗೆ ಆಡಳಿತಗಾರರ ನೇಮಿಸಿದ ಮಹಾರಾಷ್ಟ್ರ ಸರ್ಕಾರ - Badlapur Sexual Abuse Case

Last Updated : Aug 22, 2024, 6:50 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.