ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಅಥವಾ ತಿರುಚಿದ ವಿಷಯಗಳನ್ನು ಪ್ರಕಟಿಸದಂತೆ ಸರ್ಕಾರವು ಶನಿವಾರ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲತಾಣ ವೇದಿಕೆಗಳಿಗೆ ಸೂಚನೆ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರಕಟಣೆ ಹೊರಡಿಸಿದ್ದು, ಕೆಲವು ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ಹರಡುವುದನ್ನು ಗಮನಿಸಲಾಗಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ವಿಷಯಗಳು ಹರಡಲಾಗಿದೆ. ಇದು ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತದೆ ಎಂದು ತಿಳಿಸಿದೆ.
ಅಯೋಧ್ಯೆಯಲ್ಲಿ ರಾಮ್ ಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭವು ಜನವರಿ 22ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಪತ್ರಿಕೆಗಳು, ಖಾಸಗಿ ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುದ್ದಿ ಮತ್ತು ಪ್ರಚಲಿತ ವಿದ್ಯಮಾನಗಳ ಪ್ರಕಾಶಕರು ಸುಳ್ಳು ಅಥವಾ ತಿರುಚಿದ ಅಥವಾ ದೇಶದಲ್ಲಿ ಕೋಮು ಸೌಹಾರ್ದತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಯಾವುದೇ ವಿಷಯವನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದನ್ನು ತಡೆಯುವಂತೆ ಸಚಿವಾಲಯವು ಸಲಹೆ ಕೇಳಿದೆ.
ಇದಲ್ಲದೇ, ತಮ್ಮ ಶ್ರದ್ಧೆಯ ಬಾಧ್ಯತೆಗಳ ಭಾಗವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮೇಲೆ ತಿಳಿಸಲಾಗದ ಸ್ವಭಾವದ ಮಾಹಿತಿಗೆ ಅವಕಾಶ ನೀಡದಿರಲು ಮತ್ತು ಪ್ರದರ್ಶಿಸದಿರಲು ಅಥವಾ ಪ್ರಕಟಿಸದಿರಲು ಸಮಂಜಸವಾದ ಪ್ರಯತ್ನಗಳನ್ನು ಮಾಡಲು ಸಲಹೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಇದನ್ನೂ ಓದಿ: ಶ್ರೀರಾಮನ ನೇತ್ರಗಳು ಕಾಣಿಸುವ ವಿಗ್ರಹವು ನಿಜವಾದುದ್ದಲ್ಲ: ಅಯೋಧ್ಯೆ ಪ್ರಧಾನ ಅರ್ಚಕ