ETV Bharat / bharat

ಡಿಕೆಶಿಗೆ ಬಿಗ್​ ರಿಲೀಫ್​: ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್ - 2018 money laundering case

ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಕಾಂಗ್ರೆಸ್ ನಾಯಕ ಮತ್ತು ಡಿಕೆ ಶಿವಕುಮಾರ್ ವಿರುದ್ಧ ​ಸೆಕ್ಷನ್ 120B ಅಡಿ ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿ ಕೋರ್ಟ್​ ಆದೇಶ ಹೊರಡಿಸಿದೆ.

Supreme Court  2018 money laundering case  Deputy Chief Minister DK Shivakumar
ಡಿಕೆಶಿಗೆ ಬಿಗ್​ ರಿಲೀಫ್​
author img

By ETV Bharat Karnataka Team

Published : Mar 5, 2024, 1:56 PM IST

Updated : Mar 5, 2024, 6:15 PM IST

ನವದೆಹಲಿ: ಕಾಂಗ್ರೆಸ್ ನಾಯಕ, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಶಿವಕುಮಾರ್ ವಿರುದ್ಧದ 2018ರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೆಕ್ಷನ್ 120B ಅಡಿ ದಾಖಲಿಸಿದ್ದ ಕೇಸ್​ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಈ ಪ್ರಕರಣವನ್ನು ಇನ್ನು ಮುಂದೆ PMLA ಅಡಿಯಲ್ಲಿ ತನಿಖೆ ಮಾಡಲಾಗುವುದಿಲ್ಲ.

ಈ ಪ್ರಕರಣ 2017ರ ಅಗಸ್ಟ್​​ನಲ್ಲಿ ದೆಹಲಿಯಲ್ಲಿ ಪತ್ತೆಯಾದ ನಗದು ಹಣಕ್ಕೆ ಸಂಬಂಧಿಸಿದ್ದಾಗಿದೆ. ಈ ಕುರಿತು ಅಕ್ರಮ ಹಣ ವರ್ಗಾವಣೆ ಸೆಕ್ಷನ್‌ಗಳ ಅಡಿಯಲ್ಲಿ ಇಡಿ ತನಿಖೆ ಆರಂಭಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್‌ನಿಂದ ಶಿವಕುಮಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಡಿಕೆಶಿ: ಹೈಕೋರ್ಟ್ ಆದೇಶದ ವಿರುದ್ಧ ಡಿಕೆ ಶಿವಕುಮಾರ್ ಅವರು ದೇಶದ ಅತ್ಯುನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 2019 ರಲ್ಲಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಇಡಿ ಸಮನ್ಸ್ ಅನ್ನು ಪ್ರಶ್ನಿಸಿದ್ದರು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ತಪ್ಪು ಎಂದು ವಾದ ಮಂಡಿಸಿದ್ದರು. ಆದರೆ, ಡಿಕೆ ಶಿವಕುಮಾರ್ ಅವರ ವಾದವನ್ನು ಕರ್ನಾಟಕ ಹೈಕೋರ್ಟ್ ಒಪ್ಪಲಿಲ್ಲ ಮತ್ತು ಇಡಿ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿತ್ತು.

ತಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಹಾಗೂ 2002 ರ ಸೆಕ್ಷನ್ 3 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸೆಗಲಾಗಿದೆ ಎಂದು ಇಡಿ, ಆದಾಯ ತೆರಿಗೆ ಇಲಾಖೆಗಳು ದೂರು ದಾಖಲಿಸಿದ್ದವು. ಇದು IPC ಯ ಸೆಕ್ಷನ್ 120B ಅಡಿಯಲ್ಲಿ ಶಿಕ್ಷಾರ್ಹ ಕ್ರಿಮಿನಲ್ ಪಿತೂರಿ ಆಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಆದರೆ, ಈ ಪ್ರಕರಣದಲ್ಲಿ PMLA ದ ಸೆಕ್ಷನ್ 3 ಅನ್ವಯಿಸುವುದಿಲ್ಲ ಹಾಗೂ ಈ ಕೇಸ್​ ಅನ್ನು ವಜಾ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್​ ಡಿಕೆ ಶಿವಕುಮಾರ್​ ವಿರುದ್ಧ ಸೆಕ್ಷನ್ 120B ಅಡಿ ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಿವಕುಮಾರ್ ಅವರನ್ನು ಬಂಧಿಸಿದ್ದರು. ಆದರೆ ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಅವರಿಗೆ ಅಕ್ಟೋಬರ್​ನಲ್ಲಿ ಜಾಮೀನು ನೀಡಿತ್ತು. ಡಿಕೆ ಶಿವಕುಮಾರ್​ ಮೇಲಿನ ಆರೋಪ ಹಾಗೂ ದೂರು ಬಿಜೆಪಿ ರಾಜಕೀಯ ಸೇಡಿನ ತಂತ್ರ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದರು.

ಓದಿ: ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೂಗಿದ್ದು ಎಫ್​ಎಸ್​ಎಲ್​ ವರದಿಯಲ್ಲಿ ಬಂದಿದೆ: ಸಚಿವ ಪರಮೇಶ್ವರ್​

Last Updated : Mar 5, 2024, 6:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.