ಬಿಹಾರ: ರಾಜ್ಯದ ಖಗಾರಿಯಾ ಎಂಬಲ್ಲಿನ ಪಸ್ರಾಹ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಮೆರವಣಿಗೆ ಮುಗಿಸಿ ಹಿಂತಿರುಗುತ್ತಿದ್ದ ಕಾರು ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ತುಟ್ಟಿ ಮೋಹನಪುರದಿಂದ ಮಾದಯ್ಯ ಬಿತ್ತಲ ಗ್ರಾಮಕ್ಕೆ ಕಾರು ಹಿಂದಿರುಗುತ್ತಿತ್ತು. ಎನ್‌ಎಚ್ 31ರ ವಿದ್ಯಾರತನ್ ಪೆಟ್ರೋಲ್ ಪಂಪ್ ಸಮೀಪ ಟ್ರಾಕ್ಟರ್ಗೆ ಡಿಕ್ಕಿ ಹೊಡೆದ ಕಾರು ರಸ್ತೆ ಬದಿಗೆ ಉರುಳಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಗೋಗ್ರಿಯ ಡಿಎಸ್ಪಿಯ ರಮೇಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಗ್ಯಾಂಗ್ಸ್ಟರ್ ಜೊತೆಗಿನ ಎನ್‌ಕೌಂಟರ್‌ನಲ್ಲಿ ಹೆಡ್ ಕಾನ್‌ಸ್ಟೇಬಲ್ ಸಾವು