ಬದೌನ್ (ಉತ್ತರಪ್ರದೇಶ): ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಮತ್ತು ಪಿಕಪ್ ವ್ಯಾನ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ತೋರುತ್ತದೆ.
ಪೊಲೀಸರ ಪ್ರಕಾರ, ಜಿಲ್ಲೆಯ ಮುಜಾರಿಯಾ ಪೊಲೀಸ್ ಠಾಣೆ ಬಳಿ ದೆಹಲಿ - ಬಡಾಯು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪರಸರ್ಪದಲ್ಲಿ ಟೆಂಪೋ ಮತ್ತು ಪಿಕಪ್ ವ್ಯಾನ್ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಯಾಣಿಕರು ಜೋರಾಗಿ ಕಿರುಚಿಕೊಂಡಿದ್ದು, ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ.
ಅಪಘಾತದಲ್ಲಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರನ್ನು ವೈದ್ಯಕೀಯ ಕಾಲೇಜು ಹಾಗೂ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರಲ್ಲಿ ಒಬ್ಬ ವ್ಯಕ್ತಿಯನ್ನು ಬರೇಲಿ ನಿವಾಸಿ ಎಂದು ಗುರುತಿಸಲಾಗಿದೆ. ಪೊಲೀಸರು ಇತರರನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮುಜಾರಿಯಾ ಬಳಿಯ ದೆಹಲಿ ಹೆದ್ದಾರಿಯಲ್ಲಿ ಲೋಡರ್ ಟೆಂಪೋ ಮತ್ತು ಟ್ರ್ಯಾಕ್ಟರ್ ಟ್ರಾಲಿ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಧಿ ಶ್ರೀವಾಸ್ತವ ತಿಳಿಸಿದ್ದಾರೆ. ಈ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿಎಚ್‌ಸಿ ಬಿಲ್ಸಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ವೈದ್ಯಕೀಯ ಕಾಲೇಜು ಹಾಗೂ ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದ್ವಿಚಕ್ರವಾಹನ ಉಳಿಸಲು ಯತ್ನಿಸಿದಾಗ ರಾಂಗ್ ಸೈಡ್ ನಿಂದ ಬಂದ ಟೆಂಪೋ ಹಾಗೂ ಪಿಕಪ್ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಗಾಯಾಳುಗಳು ತಿಳಿಸಿದ್ದಾರೆ.
ಓದಿ: ನವಿ ಮುಂಬೈನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ತಾಯಿ, ಮಗ, ಮಗಳು ಸಾವು