ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ನೇಮಕಗೊಂಡವರಿಗೆ 71,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿಗಳ ಬದ್ಧತೆ ಈಡೇರಿಸುವ ಬಗ್ಗೆ ರೋಜಗಾರ್ ಮೇಳದ ಸಂದರ್ಭದಲ್ಲಿಅವರು ಮಾತನಾಡಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.
ಇದು ಯುವಜನರಿಗೆ ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣದಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ಪಿಎಂಒ ಹೊರಡಿಸಿರುವ ಹೇಳಿಕೆಯಲ್ಲಿ ಸೇರಿಸಲಾಗಿದೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇಮಕಾತಿಗಳು ನಡೆಯುತ್ತಿವೆ.
ದೇಶಾದ್ಯಂತ ಆಯ್ಕೆಯಾದವರು, ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಮತ್ತು ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು/ಇಲಾಖೆಗಳಿಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಲಿದ್ದಾರೆ. ಈ ತಿಂಗಳ ಆರಂಭದಲ್ಲಿ, ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ, ಖಾಲಿ ಹುದ್ದೆಗಳ ಭರ್ತಿ ನಿರಂತರ ಪ್ರಕ್ರಿಯೆಯಾಗಿದ್ದು, ಮತ್ತು ಖಾಲಿ ಹುದ್ದೆಗಳ ವಿವರಗಳನ್ನು ಆಯಾ ಸಚಿವಾಲಯಗಳು ಅಥವಾ ಇಲಾಖೆಗಳು ಕಾಲಕಾಲಕ್ಕೆ ನೀಡುತ್ತಿರುತ್ತವೆ ಎಂದು ತಿಳಿಸಿದೆ.
ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ನಿರ್ದೇಶನ: ಖಾಲಿ ಇರುವ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡುವಂತೆ ಕೇಂದ್ರ ಸರ್ಕಾರದ ಸಚಿವಾಲಯಗಳು ಅಥವಾ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಡಿಸೆಂಬರ್ 5 ರಂದು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದರು.
ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಇಲಾಖಾವಾರು ಖಾಲಿ ಇರುವ ಒಟ್ಟು ಹುದ್ದೆಗಳ ವಿವರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದರು. ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳು ಸಂಭವಿಸುವುದು ಮತ್ತು ಭರ್ತಿ ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ. ಖಾಲಿ ಹುದ್ದೆಗಳ ವಿವರಗಳನ್ನು ಆಯಾ ಸಚಿವಾಲಯ/ಇಲಾಖೆ ನಿರ್ವಹಿಸುತ್ತದೆ" ಎಂದು ಸಿಂಗ್ ಸ್ಪಷ್ಟಪಡಿಸಿದ್ದರು.
22ನೇ ಅಕ್ಟೋಬರ್, 2022 ರಂದು ಮಾನ್ಯ ಪ್ರಧಾನಮಂತ್ರಿಯವರು ಪ್ರಾರಂಭಿಸಿದ ರೋಜ್‌ಗಾರ್ ಮೇಳಗಳಲ್ಲಿ ಖಾಲಿ ಹುದ್ದೆಗಳನ್ನು ಮಿಷನ್ ಮೋಡ್‌ನಲ್ಲಿ ಭರ್ತಿ ಮಾಡಲಾಗಿದೆ. ವಿವಿಧ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 40-45 ನಗರಗಳಲ್ಲಿ ಕೇಂದ್ರ ಮಟ್ಟದಲ್ಲಿ 13 ರೋಜ್‌ಗಾರ್ ಮೇಳಗಳನ್ನು ನಡೆಸಲಾಗಿದೆ ಎಂದು ಸಚಿವರು ಸಂಸತ್ ನಲ್ಲಿ ಸಚಿವರು ಹೇಳಿದ್ದರು.
ಇದನ್ನು ಓದಿ: ತಿರುಮಲದ ಶ್ರೀವಾಣಿ ದರ್ಶನ ಟಿಕೆಟ್‌ಗಾಗಿ ಮುಗಿ ಬಿದ್ದ ಜನ: ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತ ಭಕ್ತರ ದಂಡು