ETV Bharat / bharat

ಡಿಕೆ ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆಯುವಿಕೆ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ - SC ADJOURNS PLEA AGAINST WITHDRAWAL

ಕರ್ನಾಟಕದ ಡಿಸಿಎಂ ಶಿವಕುಮಾರ್ ವಿರುದ್ಧದ ತನಿಖೆಗೆ ಸಿಬಿಐ ಒಪ್ಪಿಗೆ ಹಿಂಪಡೆಯುವುದನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

sc-adjourns-plea-against-withdrawal-of-cbi-consent-for-probe-against-ktaka-deputy-cm-shivakumar
ಡಿಕೆ ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆ ಹಿಂಪಡೆಯುವಿಕೆ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ (ETV Bharat)
author img

By PTI

Published : Nov 4, 2024, 9:51 PM IST

ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆಗೆ ಸಿಬಿಐಗೆ ಒಪ್ಪಿಗೆ ಹಿಂಪಡೆದಿರುವುದನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ವಾರಗಳವರೆಗೆ ಮುಂದೂಡಿದೆ.

ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಹ ಮೇಲ್ಮನವಿ ಸಲ್ಲಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಪ್ರಕರಣವನ್ನು ಮುಂದೂಡಿದೆ. ಸಿಬಿಐ ತನಿಖೆಯ ಸಮ್ಮತಿ ವಾಪಸಾತಿ ವಿರುದ್ಧದ ತನ್ನ ಮನವಿಯನ್ನು ತಿರಸ್ಕರಿಸಿದ ಆಗಸ್ಟ್ 29 ರ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ವಿಚಾರಣೆಯ ಸಂದರ್ಭದಲ್ಲಿ, ಸಿಬಿಐ ಮೇಲ್ಮನವಿಯನ್ನು ಇನ್ನೂ ಪಟ್ಟಿ ಮಾಡಲಾಗಿಲ್ಲ ಎಂದು ಮೆಹ್ತಾ ಪೀಠಕ್ಕೆ ತಿಳಿಸಿದರು. ಆದರೆ, ಶಿವಕುಮಾರ್ ಪರವಾಗಿ ಹಿರಿಯ ವಕೀಲ ರಂಜಿತ್ ಕುಮಾರ್ ಅವರು ಈ ವಿಷಯದಲ್ಲಿ ಉತ್ತರವನ್ನು ಸಲ್ಲಿಸಲು ಸಮಯ ಕೋರಿದರು. ಶಿವಕುಮಾರ್ ಮತ್ತು ರಾಜ್ಯ ಸರ್ಕಾರಕ್ಕೆ ಶಾಸಕರ ಮನವಿ ಮೇರೆಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 17 ರಂದು ನೋಟಿಸ್ ಜಾರಿ ಮಾಡಿತ್ತು. ಡಿಸಿಎಂ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತನಿಖೆಗಾಗಿ ಸಿಬಿಐಗೆ ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಮನವಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ "ನಿರ್ವಹಿಸಲು ಸಾಧ್ಯವಿಲ್ಲ" ಎಂದು ಹೇಳಿತ್ತು.

74.93 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ನವೆಂಬರ್ 23, 2023ರ ಆದೇಶ ನೀಡಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಶಿವಕುಮಾರ್ ಅವರು 2013 ಮತ್ತು 2018ರ ನಡುವೆ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾಗ ಕಾನೂನು ಬಾಹಿರವಾಗಿ ಆಸ್ತಿಯನ್ನು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಈ ಹಿಂದಿನ ಬಿಜೆಪಿ ಸರ್ಕಾರ ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಸರ್ಕಾರ ಅನುಮತಿ ನೀಡಿತ್ತು. ಸಿದ್ದರಾಮಯ್ಯ ನೇತೃತ್ವದ ಪ್ರಸ್ತುತ ಕರ್ನಾಟಕ ಸರ್ಕಾರವು ನವೆಂಬರ್ 23, 2023 ರಂದು, ಶಿವಕುಮಾರ್ ವಿರುದ್ಧದ ಡಿಎ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಗೆ ನೀಡಿದ ಹಿಂದಿನ ಬಿಜೆಪಿ ಸರ್ಕಾರದ ಕ್ರಮವನ್ನು ಅಕ್ರಮ ಎಂದು ಪರಿಗಣಿಸಿ ಅದನ್ನು ಹಿಂಪಡೆಯಲು ನಿರ್ಧರಿಸಿತು.

ಇದನ್ನು ಓದಿ: ನಕಲಿ ದಾಖಲೆ ಕೊಟ್ಟು 10 ವರ್ಷ ಕಾಲ ಐಟಿಬಿಪಿಯಲ್ಲಿ ಕೆಲಸ ಮಾಡಿದ ಖದೀಮ: ವಂಚನೆ ಬಯಲಾಗಿದ್ದು ಹೀಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.