ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿತು.
ಆದಾಗ್ಯೂ, ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಬಂಧಿಸಿರುವ ಕಾರಣ ಕೇಜ್ರಿವಾಲ್ ಜೈಲಿನಲ್ಲೇ ಉಳಿಯಬೇಕಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ, ಜಾರಿ ನಿರ್ದೇಶನಾಲಯದ (ಇಡಿ) ಪ್ರಕರಣದಲ್ಲಿ ಕೇಜ್ರಿವಾಲ್ ಬಂಧನ ಕಾನೂನುಬದ್ಧವಾಗಿದೆಯೇ ಎಂದು ಪ್ರಶ್ನಿಸಿತು. ಅಲ್ಲದೇ, ಇಡಿಗಿರುವ ಬಂಧನ ಅಧಿಕಾರ ಮತ್ತು ನೀತಿಗೆ ಸಂಬಂಧಿಸಿದಂತೆ ಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿದೆ. ಮೇ 10ರ ಆದೇಶದ ಷರತ್ತುಗಳ ಪ್ರಕಾರ, ಕೇಜ್ರಿವಾಲ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಆದೇಶ ಹೊರಡಿಸಿತು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಇಡಿ ಬಂಧಿಸಿದರೆ, ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 26ರಂದು ಸಿಬಿಐ ಬಂಧಿಸಿತ್ತು.
ಇದನ್ನೂ ಓದಿ: ಜುಲೈ 12 ರಂದು ಯುಸಿಸಿ ವರದಿ ಸಾರ್ವಜನಿಕಗೊಳಿಸಲಿದೆ ಉತ್ತರಾಖಂಡ ಸರ್ಕಾರ - uniform civil code report