ETV Bharat / bharat

ಕೊಲೆ ಕೇಸ್: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 104 ವರ್ಷದ ವೃದ್ಧನಿಗೆ ಮಧ್ಯಂತರ ಜಾಮೀನು - MURDER CASE

ಕೊಲೆ ಪ್ರಕರಣದಲ್ಲಿ 104 ವರ್ಷದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸುಪ್ರೀಂ ಕೋರ್ಟ್ 104 year old man interim bail
ಸುಪ್ರೀಂ ಕೋರ್ಟ್ (ETV Bharata)
author img

By ETV Bharat Karnataka Team

Published : Dec 1, 2024, 9:12 AM IST

ನವದೆಹಲಿ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 104 ವರ್ಷದ ವೃದ್ಧನಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. 1988ರಲ್ಲಿ ಎಸಗಿದ್ದ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 104 ವರ್ಷ ವಯಸ್ಸಿನ ರಸಿಕ್ ಚಂದ್ರ ಮೊಂಡಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠವು ಜಾಮೀನು ನೀಡಿ ಆದೇಶಿಸಿದೆ. ಅರ್ಜಿದಾರರಾದ ರಸಿಕ್ ಚಂದ್ರ ಮೊಂಡಲ್ ಅವರನ್ನು ಪ್ರಸ್ತುತ ರಿಟ್ ಅರ್ಜಿ ಬಾಕಿ ಇರುವಾಗ, ವಿಚಾರಣಾ ನ್ಯಾಯಾಲಯವು ನಿಯಮಗಳು ಮತ್ತು ಷರತ್ತುಗಳನ್ನು ವಿಧಿಸಿ ಮಧ್ಯಂತರ ಜಾಮೀನು / ಪೆರೋಲ್ ಮೇಲೆ ಬಿಡುಗಡೆ ಮಾಡಬೇಕೆಂದು ಮಧ್ಯಂತರ ಆದೇಶದಲ್ಲಿ ಪೀಠ ನಿರ್ದೇಶಿಸಿದೆ.

ರಸಿಕ್ ಚಂದ್ರ ಮೊಂಡಲ್ ಅವರ ವಯಸ್ಸು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡುತ್ತಿರುವುದಾಗಿ ಪೀಠ ಹೇಳಿದೆ. ಮೊಂಡಲ್ ಅವರಿಗೆ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿವೆ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ. ಶೀಘ್ರದಲ್ಲೇ ಅವರು 104ನೇ ವರ್ಷಕ್ಕೆ ಕಾಲಿಡಲಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಪರ ಆಸ್ತಾ ಶರ್ಮಾ ಅವರು ಪೀಠದ ಮುಂದೆ ಮಾಹಿತಿ ನೀಡಿದರು.

1988 ರಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ 1994 ರಿಂದ ಮೊಂಡಲ್ ಅವರು ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. 2018 ರಲ್ಲಿ, ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋಲ್ಕತ್ತಾ ಹೈಕೋರ್ಟ್ ವಜಾಗೊಳಿಸಿತ್ತು. 2020 ರಲ್ಲಿ, ಮೊಂಡಲ್ ಅವರು 99 ವರ್ಷ ವಯಸ್ಸಿನವರಾಗಿದ್ದಾಗ, ಬಿಡುಗಡೆ ಕೋರಿ ಮನವಿ ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ 2021ರಲ್ಲಿ ನೋಟಿಸ್ ನೀಡಿತ್ತು. ಮೊಂಡಲ್ 1920 ರಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಜನಿಸಿದ್ದರು.

ಇದನ್ನೂ ಓದಿ: ಸಲ್ಲಿಕೆಯಾಗದ ಸಂಭಾಲ್ ಜಾಮಾ ಮಸೀದಿ ಸಮೀಕ್ಷಾ ವರದಿ: ಯಥಾಸ್ಥಿತಿ ಪಾಲನೆಗೆ ಸುಪ್ರೀಂ ಕೋರ್ಟ್​ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.