ನವದೆಹಲಿ: ಲಘು ಮೋಟಾರು ವಾಹನ (ಎಲ್ಎಂವಿ) ಚಾಲನಾ ಪರವಾನಗಿ ಹೊಂದಿರುವವರು 7,500 ಕೆ.ಜಿಗಿಂತ ಹೆಚ್ಚಿಲ್ಲದ ತೂಕದ ವಾಹನ ಚಲಾಯಿಸಲು ಅರ್ಹತೆಯ ಕುರಿತು ಸುಪ್ರೀಂ ಕೋರ್ಟ್ ಇಂದು ಅರ್ಜಿ ವಿಚಾರಣೆ ಪುನರಾರಂಭಿಸಿದೆ.
ಮುಖ್ಯ ನಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪಂಚ ಸದಸ್ಯರ ಪೀಠ ವಿಚಾರಣೆ ನಡೆಸುತ್ತಿದೆ. ಈ ಕುರಿತು ನ್ಯಾಯಾಲಯದ ಮುಂದೆ ಹಾಜರಾದ ಅಟಾರ್ನಿ ಜನರಲ್ ಆರ್. ವೆಂಟಕರಮಣಿ, ಮೋಟಾರ್ ವಾಹನ ಕಾಯ್ದೆ-1988ರ ತಿದ್ದುಪಡಿ ಮಸೂದೆಯನ್ನು ಸಂಸತ್ನಲ್ಲಿಮಂಡಿಸಬೇಕಿದೆ ಎಂದರು.
ಲಘು ವಾಹನ ಚಾಲನಾ ಪರವಾನಗಿ ಹೊಂದಿರುವವರು ಸಾರಿಗೆ ವಾಹನ ಚಲಾಯಿಸುವಾಗ ಆಗುವ ಅಪಾಘಾತದಲ್ಲಿ ವಿಮಾ ಕಂಪನಿಗಳು ಪಾವತಿ ನೀಡುವಲ್ಲಿ ಆಗುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಹಲವು ಕಾನೂನಾತ್ಮಕ ಪ್ರಶ್ನೆಗಳು ಎದ್ದಿವೆ. ಹೀಗಾಗಿ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.
ಇದನ್ನೂ ಓದಿ: ಎಲ್ಎಂವಿ ಪರವಾನಗಿ ಹೊಂದಿರುವವರು ಲಘು ಸಾರಿಗೆ ವಾಹನ ಓಡಿಸಬಹುದೇ?; ಕೇಂದ್ರಕ್ಕೆ ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್