ETV Bharat / bharat

ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ - RAHUL GANDHI CASE

ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.

ರಾಹುಲ್ ಗಾಂಧಿ
ರಾಹುಲ್ ಗಾಂಧಿ (ians)
author img

By ETV Bharat Karnataka Team

Published : Jan 20, 2025, 12:58 PM IST

Updated : Jan 20, 2025, 1:35 PM IST

ನವದೆಹಲಿ: ವಿರೋಧ ಪಕ್ಷದ ನಾಯಕ (ಎಲ್ಒಪಿ) ರಾಹುಲ್ ಗಾಂಧಿ ವಿರುದ್ಧ ದಾಖಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ. ಬಿಜೆಪಿ ಸದಸ್ಯರು ಸುಳ್ಳುಗಾರರು ಮತ್ತು ಅವರು ಅಧಿಕಾರದ ಅಮಲಿನಲ್ಲಿದ್ದಾರೆ ಎಂಬ ಆರೋಪ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು 'ಕೊಲೆ ಆರೋಪಿ' ಎಂದು ಕರೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಜಾರ್ಖಂಡ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ರಾಹುಲ್​: 2018 ರಲ್ಲಿ ಬಿಜೆಪಿ ಕಾರ್ಯಕರ್ತ ನವೀನ್ ಝಾ ಎಂಬುವರು ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಜಾರ್ಖಂಡ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾರ್ಖಂಡ್ ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಜಾರ್ಖಂಡ್ ಹೈಕೋರ್ಟ್​ನ ಈ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ವಿಶೇಷ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ರಾಹುಲ್​ ಪರ ಅಭಿಷೇಕ್​ ಮನು ಸಿಂಘ್ವಿ ವಾದ ಮಂಡನೆ: ರಾಹುಲ್ ಗಾಂಧಿ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅನ್ಯಾಯಕ್ಕೊಳಗಾದ ವ್ಯಕ್ತಿ ಮಾತ್ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಬಹುದು ಮತ್ತು ವಿಷಯಕ್ಕೆ ಸಂಬಂಧಪಡದವರು ದೂರು ದಾಖಲಿಸಲು ಸಾಧ್ಯವಿಲ್ಲ ಎಂದು ಹಲವಾರು ಬಾರಿ ನ್ಯಾಯಾಲಯಗಳು ತೀರ್ಪು ನೀಡಿವೆ ಎಂದು ಹೇಳಿದರು.

ಸಿಂಘ್ವಿ ವಾದಕ್ಕೆ ಉತ್ತರ ನೀಡಲು ನಾಲ್ಕು ವಾರಗಳ ಕಾಲಾವಕಾಶ: ಸಿಂಘ್ವಿಯವರ ವಾದಕ್ಕೆ ಉತ್ತರಿಸಲು ನ್ಯಾಯಾಲಯವು ದೂರುದಾರ ನವೀನ್ ಝಾ ಮತ್ತು ಜಾರ್ಖಂಡ್ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿತು. ಅಲ್ಲದೆ ಮುಂದಿನ ಆದೇಶದವರೆಗೆ ರಾಹುಲ್ ಗಾಂಧಿ ವಿರುದ್ಧ ಈ ಪ್ರಕರಣದಲ್ಲಿ ಯಾವುದೇ ವಿಚಾರಣೆ ನಡೆಸುವಂತಿಲ್ಲ ಎಂದು ಆದೇಶಿಸಿತು.

ಕಳೆದ ವರ್ಷ ಫೆಬ್ರವರಿಯಲ್ಲಿ ಜಾರ್ಖಂಡ್ ಹೈಕೋರ್ಟ್ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಲಾದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. 2018ರಲ್ಲಿ ರಾಹುಲ್ ಗಾಂಧಿ ವಿರುದ್ಧ ನವೀನ್ ಝಾ ಎಂಬುವರು ಪ್ರಕರಣ ದಾಖಲಿಸಿದ್ದರು. ರಾಹುಲ್ ಗಾಂಧಿ ಬಿಜೆಪಿ ಕಾರ್ಯಕರ್ತರನ್ನು ಸುಳ್ಳುಗಾರರು ಮತ್ತು ಅವರು ಅಧಿಕಾರದ ಅಮಲಿನಲ್ಲಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಝಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಮಹಿಳೆಯರಿಗೆ ಪ್ರತಿ ತಿಂಗಳು ₹1,100 ನೀಡುವ ಯೋಜನೆ ಶೀಘ್ರ ಜಾರಿ: ಸಿಎಂ ಭಗವಂತ್ ಮಾನ್ - SCHEME FOR PUNJAB WOMEN

Last Updated : Jan 20, 2025, 1:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.