ETV Bharat / bharat

ಹಿಮಾಚಲ ಪ್ರದೇಶ: 6ನೇ ತರಗತಿ ವಿದ್ಯಾರ್ಥಿನಿ ಮೇಲೆ ಸ್ನೇಹಿತೆಯ ತಂದೆಯಿಂದಲೇ ಅತ್ಯಾಚಾರ - RAPE CASE - RAPE CASE

ಶಾಲಾ ಬಾಲಕಿಯ ಮೇಲೆ ಆಕೆಯ ಸ್ನೇಹಿತೆಯ ತಂದೆಯಿಂದಲೇ ಅತ್ಯಾಚಾರವೆಸಗಿರುವ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

CHOOL GIRL RAPED BY FRIENDS FATHER  RAPE CASE IN UNA  MINOR GIRL RAPED IN UNA  UNA RAPE CASE
ಹಿಮಾಚಲ ಪ್ರದೇಶ: 6ನೇ ತರಗತಿ ವಿದ್ಯಾರ್ಥಿನಿ ಮೇಲೆ ಸ್ನೇಹಿತೆಯ ತಂದೆಯಿಂದಲೇ ಅತ್ಯಾಚಾರ
author img

By ETV Bharat Karnataka Team

Published : Mar 23, 2024, 2:25 PM IST

ಉನಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದಲ್ಲಿ ಬಾಲಕಿಯರು ಮತ್ತು ಮಹಿಳೆಯರ ಮೇಲಿನ ಕ್ರಿಮಿನಲ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಇದೇ ರೀತಿ ಉನಾ ಜಿಲ್ಲೆಯ ಬಂಗಾನಾ ಉಪವಿಭಾಗದಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಶಾಲಾ ಬಾಲಕಿಯೊಬ್ಬಳು ತನ್ನ ಸ್ನೇಹಿತೆಯ ತಂದೆಯ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾಳೆ. ಸಂತ್ರಸ್ಥೆಯ ಪೋಷಕರು ನೀಡಿದ ದೂರಿನ ಮೇರೆಗೆ ಬಂಗನಾಳ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬಂಗನಾಳ ಉಪವಿಭಾಗದ ಪೊಲೀಸರಿಗೆ ಸಂತ್ರಸ್ತೆಯ ಪೋಷಕರು ನೀಡಿರುವ ದೂರಿನಲ್ಲಿ ಈ ಬಾಲಕಿ ಆ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಓದುತ್ತಿದ್ದಾಳೆ ಎಂದು ತಿಳಿಸಿದ್ದಾಳೆ. ಆಕೆ ಆರನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ. ಗುರುವಾರ ತಮ್ಮ ಮಗಳು ತನ್ನ ಸ್ನೇಹಿತೆಯ ಮನೆಗೆ ಹೋಗಿದ್ದಳು. ಹೊರಡುವಾಗ ಎರಡರಿಂದ ಮೂರು ಗಂಟೆಯೊಳಗೆ ಬರುವುದಾಗಿ ಮಗಳು ಹೇಳಿದ್ದಳು. ಹೆಚ್ಚು ಸಮಯ ಕಳೆದರೂ ಮನೆಗೆ ಬರಲಿಲ್ಲ, ನಂತರ ಮಗಳಿಗೆ ಕರೆ ಮಾಡಿದಾಗ ಮಗಳು ತನ್ನ ಸ್ನೇಹಿತೆಯ ತಂದೆ ತನ್ನ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ತಿಳಿಸಿದ್ದಾಳೆ ಎಂದು ಘಟನೆಯ ಬಗ್ಗೆ ವಿವರಿಸಿದ್ದರು.

ಆರೋಪಿ ವಿರುದ್ಧ ಎಫ್‌ಐಆರ್ ದಾಖಲು: ಬಳಿಕ ಮಹಿಳೆ ತನ್ನ ಸಹೋದರನೊಂದಿಗೆ ಮಗಳ ಸ್ನೇಹಿತೆಯ ಮನೆಗೆ ತಲುಪಿ ಅಲ್ಲಿಂದ ಆಖೆಯನ್ನು ಕರೆತಂದಿದ್ದಾರೆ. ಈ ಸಂಬಂಧ ಸಂತ್ರಸ್ತೆ ಪೋಷಕರು ಆರೋಪಿ ವಿರುದ್ಧ ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಆರೋಪಿಯನ್ನು ಇನ್ನೂ ಬಂಧಿಸಿಲ್ಲ. ಈ ವಿಷಯವನ್ನು ಎಸ್ಪಿ ಉನಾ ರಾಕೇಶ್ ಸಿಂಗ್ ಖಚಿತಪಡಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನಾ ಎಸ್ಪಿ ರಾಕೇಶ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಸ್- ಹೈವಾ ಟ್ರಕ್​ ನಡುವೆ ಮುಖಾಮುಖಿ ಡಿಕ್ಕಿ; ಮೂವರು ಮಕ್ಕಳು ಸಾವು, 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ - Road ACCIDENT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.