ETV Bharat / bharat

ಲೈಂಗಿಕ ಕಿರುಕುಳ ಆರೋಪ : ಚಲಿಸುತ್ತಿದ್ದ ಬಸ್​​ನಿಂದ ಜಿಗಿದ ವಿದ್ಯಾರ್ಥಿನಿಯರು! - GIRLS JUMP FROM RUNNING BUS

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಇಬ್ಬರು ವಿದ್ಯಾರ್ಥಿನಿಯರು ಚಲಿಸುತ್ತಿದ್ದ ಬಸ್​​ನಿಂದ ಹೊರಗೆ ಹಾರಿದ್ದಾರೆ.

ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ
ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ (ETV Bharat)
author img

By PTI

Published : Feb 11, 2025, 4:03 PM IST

ದಮೋಹ್ (ಮಧ್ಯಪ್ರದೇಶ) : ಬಸ್​ ಚಾಲಕ, ಕಂಡಕ್ಟರ್​ ಮತ್ತು ಪ್ರಯಾಣಿಕರು ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಮಾಡಿ, ಇಬ್ಬರು ಶಾಲಾ ವಿದ್ಯಾರ್ಥಿನಿಯರು ಚಲಿಸುತ್ತಿದ್ದ ಬಸ್​ನಿಂದ ಜಿಗಿದ ಘಟನೆ ಮಧ್ಯಪ್ರದೇಶದಲ್ಲಿ ಸೋಮವಾರ ನಡೆದಿದೆ. ಈ ವೇಳೆ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಬಸ್​ನಲ್ಲಿ ವಿದ್ಯಾರ್ಥಿನಿಯರು ಸೇರಿ ಆರು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರಿಗೆ ಅಶ್ಲೀಲವಾಗಿ ನಿಂದಿಸಲು ಆರಂಭಿಸಿ, ದುರುಗುಟ್ಟಿ ನೋಡಿದ್ದಾರೆ. ಇದರಿಂದ ಹೆದರಿದ ವಿದ್ಯಾರ್ಥಿನಿಯರು ಚಲಿಸುತ್ತಿದ್ದ ಬಸ್​ನಿಂದ ಹೊರಗೆ ಹಾರಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಹೇಳಿದ್ದೇನು ? ಘಟನೆಯ ಬಗ್ಗೆ ಮಾಹಿತಿ ನೀಡಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ ಭಾವನಾ ದಂಗಿ, ಇಲ್ಲಿನ ಶಾಲೆಯೊಂದರಲ್ಲಿ 9ನೇ ತರಗತಿ ಅಭ್ಯಾಸ ಮಾಡುವ ವಿದ್ಯಾರ್ಥಿನಿಯರು ಪರೀಕ್ಷೆ ನಿಮಿತ್ತ ಅಧೋತರದಿಂದ ಬಸ್​​ ಹತ್ತಿದ್ದಾರೆ. ಬಸ್‌ನಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿ ಇತರ ನಾಲ್ವರು ವ್ಯಕ್ತಿಗಳಿದ್ದರು. ಸ್ವಲ್ಪ ಸಮಯದ ನಂತರ ಆರೋಪಿಗಳು ಅಶ್ಲೀಲ ಮಾತುಗಳನ್ನಾಡಿದ್ದಾರೆ. ಈ ವೇಳೆ ಬಾಲಕಿಯರು ಬಸ್ ನಿಲ್ಲಿಸಲು ಕೇಳಿದಾಗ ಚಾಲಕ ನಿರಾಕರಿಸಿದ್ದಾನೆ" ಎಂದು ತಿಳಿಸಿದ್ದಾರೆ.

"ಆರೋಪಿಗಳು ಬಾಲಕಿಯರನ್ನು ದಿಟ್ಟಿಸಿ ನೋಡುವುದರ ಜೊತೆಗೆ ಬಸ್​ನ ಹಿಂಭಾಗದ ಬಾಗಿಲನ್ನು ಮುಚ್ಚಿದ್ದಾರೆ. ಇದರಿಂದ ಅನುಮಾನಗೊಂಡ ಬಾಲಕಿಯರು ತಕ್ಷಣವೇ ತಮ್ಮ ಸುರಕ್ಷತೆಯ ದೃಷ್ಟಿಯಿಂದ ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಹಾರಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.

ನಾಲ್ವರು ಆರೋಪಿಗಳ ಬಂಧನ : ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದ ಕಾರಣ ಬಾಲಕಿಯರು ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ, ಬಸ್​ ಚಾಲಕ, ನಿರ್ವಾಹಕ, ಇನ್ನಿಬ್ಬರು ಪ್ರಯಾಣಿಕರನ್ನು ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: ಕ್ಯಾಬ್​ನಲ್ಲಿ ಯುವತಿಗೆ ಕಿರುಕುಳ ಆರೋಪ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಹೆಣ್ಣಿನ ದೇಹವನ್ನು ಬಣ್ಣಿಸುವುದೂ ಲೈಂಗಿಕ ಕಿರುಕುಳಕ್ಕೆ ಸಮ : ಹೈಕೋರ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.