ETV Bharat / bharat

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಛತ್ತೀಸ್‌ಗಢದಲ್ಲಿ 6 ನಕ್ಸಲರ ಹತ್ಯೆ - Naxalites killed

author img

By PTI

Published : Mar 27, 2024, 12:54 PM IST

ಲೋಕಸಭೆ ಚುನಾವಣೆಯ ಹೊತ್ತಲ್ಲೇ ನಕ್ಸಲೀಯರ ಕಾರ್ಯಾಚರಣೆ ಜೋರಾಗಿದ್ದು, ಇಂದು (ಬುಧವಾರ) ನಡೆದ ಎನ್​ಕೌಂಟರ್​​ನಲ್ಲಿ ಆರು ಮಂದಿ ಹತರಾಗಿದ್ದಾರೆ.

ಛತ್ತೀಸ್‌ಗಢದಲ್ಲಿ 6 ನಕ್ಸಲರು ಖತಂ
ಛತ್ತೀಸ್‌ಗಢದಲ್ಲಿ 6 ನಕ್ಸಲರು ಖತಂ

ಬಿಜಾಪುರ(ಛತ್ತೀಸ್‌ಗಢ): ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮತ್ತಷ್ಟು ನಕ್ಸಲರ ಎನ್​ಕೌಂಟರ್​ ನಡೆದಿದೆ. ಬುಧವಾರ ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 6 ನಕ್ಸಲೀಯರು ಹತರಾಗಿದ್ದಾರೆ.

ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಚಿಪುರಭಟ್ಟಿ ಗ್ರಾಮದ ಬಳಿಯ ತಲಪೇರು ನದಿ ತೀರದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಆರ್‌ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್​ಪಿಎಫ್​), ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಭದ್ರತಾ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿತು.

ನದಿ ತಟದ ಅರಣ್ಯದಲ್ಲಿ 10ಕ್ಕೂ ಅಧಿಕ ಮಾವೋವಾದಿಗಳು ಅಡಗಿದ್ದಾರೆ ಎಂದು ಮಾಹಿತಿ ಬಂದಿತ್ತು. ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯಿಂದ (ಪಿಎಂಎಲ್ಎ​) ನಕ್ಸಲರ ಮೇಲೆ ದಾಳಿ ಮಾಡಲಾಯಿತು. ಈ ವೇಳೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ನಕ್ಸಲೀಯರ ಶವಗಳು ಪತ್ತೆಯಾಗಿವೆ.

ಘಟನಾ ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊದಲು ಓರ್ವ ನಕ್ಸಲ್​ ಮಹಿಳೆ ಮೃತಪಟ್ಟ ಬಗ್ಗೆ ಮಾಹಿತಿ ಸಿಕ್ಕಿತ್ತು. ಬಳಿಕ ಅದು 2ಕ್ಕೇರಿದೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಗುಂಡಿನ ಚಕಮಕಿಯಲ್ಲಿ ಹಲವು ನಕ್ಸಲೀಯರು ಗಾಯಗೊಂಡಿದ್ದಾರೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದರು.

ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿದ್ದು, ಏಪ್ರಿಲ್ 19ರಂದು ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ.

ಇದನ್ನೂ ಓದಿ: ಗಡ್ಚಿರೋಲಿ ಎನ್​ಕೌಂಟರ್​: ನಾಲ್ವರು ನಕ್ಸಲರ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.