ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಗಂದರ್‌ಬಾಲ್ ಜಿಲ್ಲೆಯ ಶ್ರೀನಾಗಾ-ಲೇಹ್ ರಾಷ್ಟ್ರೀಯ ಹೆದ್ದಾರಿಯ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾನುವಾರ ಸಂಜೆ ಉಗ್ರರು ದಾಳಿ ನಡೆಸಿದ್ದು, ವೈದ್ಯರು ಸೇರಿದಂತೆ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ದಾಳಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗೃಹ ಸಚಿವ ಅಮಿತ್ ಶಾ ಮತ್ತು ಉಳಿದ ನಾಯಕರಿಂದ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಸಂಜೆ ಕಾರ್ಮಿಕರು ಕೆಲಸ ಮುಗಿಸಿ ಗುಂಡ್‌ನಲ್ಲಿರುವ ತಮ್ಮ ಶಿಬಿರಕ್ಕೆ ಮರಳುತ್ತಿದ್ದಾಗ ದಾಳಿ ನಡೆದಿದೆ.
The dastardly terror attack on civilians in Gagangir, J&K, is a despicable act of cowardice. Those involved in this heinous act will not be spared and will face the harshest response from our security forces. At this moment of immense grief, I extend my sincerest condolences to…
— Amit Shah (@AmitShah) October 20, 2024
ಉಗ್ರರ ದಾಳಿಗೆ ಬುದ್ಗಾಮ್ ಜಿಲ್ಲೆಯ ಡಾಕ್ಟರ್ ಶಹನವಾಜ್ ಮತ್ತು ಇತರ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರದ ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್ ಹಾಗೇ ಜಮ್ಮುವಿನ ಶಶಿ ಅಬ್ರೋಲ್, ಮಧ್ಯಪ್ರದೇಶದ ಅನಿಲ್ ಶುಕ್ಲಾ, ಪಂಜಾಬ್‌ನ ಗುರ್ಮೀತ್ ಸಿಂಗ್ ಮೃತ ಕಾರ್ಮಿಕರು.
ಪ್ರಾಥಮಿಕ ವರದಿ ಪ್ರಕಾರ, 'ಇಬ್ಬರು ಭಯೋತ್ಪಾದಕರು ಕಾರ್ಮಿಕರ ಗುಂಪನ್ನು ಗುರಿಯಾಗಿಸಿಕೊಂಡ ಪರಿಣಾಮವಾಗಿ ಇಬ್ಬರು ಕಾರ್ಮಿಕರು ತಕ್ಷಣವೇ ಸಾವನ್ನಪ್ಪಿದ್ದಾರೆ. ನಂತರ ವೈದ್ಯರೊಂದಿಗೆ ಇತರ ನಾಲ್ವರು ಗಾಯಗೊಂಡಿದ್ದಾರೆ'. ದಾಳಿಯಲ್ಲಿ ಗಾಯಗೊಂಡ ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕಠಿಣ ಕ್ರಮಕ್ಕೆ ಕರೆ ನೀಡಿದ ಅಮಿತ್ ಶಾ: ಘಟನೆಯನ್ನು ಖಂಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, "ಇದು ಹೇಡಿತನದ ಹೇಯ ಕೃತ್ಯವಾಗಿದೆ. ಈ ಹೇಯ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡಲಾಗುವುದಿಲ್ಲ ಮತ್ತು ನಮ್ಮ ಭದ್ರತಾ ಪಡೆಗಳಿಂದ ಕಠಿಣ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ. ಅಪಾರ ದುಃಖದ ಈ ಕ್ಷಣದಲ್ಲಿ, ಮೃತರ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ" ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
The dastardly terror attack on civilians in Gagangir, J&K, is a despicable act of cowardice. Those involved in this heinous act will not be spared and will face the harshest response from our security forces. At this moment of immense grief, I extend my sincerest condolences to…
— Amit Shah (@AmitShah) October 20, 2024
ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾರಿಂದ ಶಿಕ್ಷೆಯ ಭರವಸೆ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಅವರು, "ಪರಭಕ್ಷಕರನ್ನು ನ್ಯಾಯಾಂಗಕ್ಕೆ ತರಲಾಗುವುದು. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ, ಸೇನೆ ಮತ್ತು ಭದ್ರತಾ ಪಡೆಗಳಿಗೆ ಕ್ರಮ ಕೈಗೊಳ್ಳಲು ನಾವು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಈ ಹೇಯ ಕೃತ್ಯದ ಹಿಂದಿರುವವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಜನತೆಗೆ ಭರವಸೆ ನೀಡುತ್ತೇನೆ" ಎಂದು ಸಿನ್ಹಾ ಪೋಸ್ಟ್ ಮಾಡಿದ್ದಾರೆ.
I strongly condemn the heinous terrorist attack on civilians in Gagangeer. I assure the people that those behind this despicable act will not go unpunished. We have given full freedom to J&K Police, Army and Security forces.
— Office of LG J&K (@OfficeOfLGJandK) October 20, 2024
'ಹಿಂಸಾಚಾರದ ವಿರುದ್ಧ ಇಡೀ ದೇಶ ಒಗ್ಗಟ್ಟು'-ಪ್ರಿಯಾಂಕಾ ಗಾಂಧಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಹತ್ಯೆಯನ್ನು ಖಂಡಿಸಿದ್ದು, "ಅಮಾಯಕ ನಾಗರಿಕರನ್ನು ಗುರಿಯಾಗಿಸುವುದು ಮಾನವೀಯತೆಯ ವಿರುದ್ಧದ ಅಪರಾಧ. ಇಂತಹ ಹಿಂಸಾಚಾರದ ವಿರುದ್ಧ ಇಡೀ ದೇಶವು ಒಗ್ಗಟ್ಟಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ" ಎಂದು ಪ್ರತಿಕ್ರಿಯಿಸಿದ್ದಾರೆ.
गांदरबल, जम्मू-कश्मीर में कायराना आतंकी हमले में 5 मजदूरों समेत छह नागरिकों की हत्या अत्यंत निंदनीय है।
— Priyanka Gandhi Vadra (@priyankagandhi) October 20, 2024
निर्दोष नागरिकों की हत्या करके आम जनता के बीच हिंसा व दहशत फैलाने जैसे कृत्य मानवता के विरुद्ध अपराध हैं। इसके खिलाफ पूरा देश एकजुट है।
शोक-संतप्त परिवारों के प्रति मेरी…
ಮಾಜಿ ಸಿಎಂ ಸಂತಾಪ, ತಾರಿಕ್ ಹಮೀದ್ ಕಳವಳ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಿಂಸಾಚಾರವನ್ನು ಖಂಡಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಾಜದ್ ಗನಿ ಲೋನ್ ಅವರು ದಾಳಿಯನ್ನು ಹುಚ್ಚುತನದ ಕೃತ್ಯ ಎಂದು ಬಣ್ಣಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಇಂತಹ ಘಟನೆಗಳು ಪ್ರದೇಶವನ್ನು ಮತ್ತಷ್ಟು ಅಸ್ಥಿರಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಸದ್ಯ ದಾಳಿ ನಡೆದ ಘಟನಾ ಸ್ಥಳದ ಸುತ್ತಲೂ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿವೆ ಮತ್ತು ದಾಳಿಕೋರರ ಪತ್ತೆಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ಇದನ್ನೂ ಓದಿ: ಪುಣೆ ಮಂಡೈ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ